AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಕಳೆದ 1 ವರ್ಷದಲ್ಲಿ 1.35 ಲಕ್ಷ ಕೋಟಿ ರೂ ಹೂಡಿಕೆ ಬಂದಿದೆ: ಸಚಿವ ಎಂಬಿ ಪಾಟೀಲ್

ದೆಹಲಿಯಲ್ಲಿ ಕೈಗಾರಿಕಾ ಇಲಾಖೆ ಸಚಿವ ಎಂ.ಬಿ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಅನೇಕ ದೇಶಗಳ ರಾಯಭಾರಿ ಜೊತೆಗೆ ಉದ್ಯಮಿಗಳನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇನ್ನು ಬೇರೆ ಬೇರೆ ವಲಯಗಳಲ್ಲಿ ಕಳೆದ 1 ವರ್ಷದಲ್ಲಿ ಕರ್ನಾಟಕಕ್ಕೆ 1.35 ಲಕ್ಷ ಕೋಟಿ ರೂ. ಹೂಡಿಕೆ ಬಂದಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕಕ್ಕೆ ಕಳೆದ 1 ವರ್ಷದಲ್ಲಿ 1.35 ಲಕ್ಷ ಕೋಟಿ ರೂ ಹೂಡಿಕೆ ಬಂದಿದೆ: ಸಚಿವ ಎಂಬಿ ಪಾಟೀಲ್
ಕರ್ನಾಟಕಕ್ಕೆ ಕಳೆದ 1 ವರ್ಷದಲ್ಲಿ 1.35 ಲಕ್ಷ ಕೋಟಿ ರೂ ಹೂಡಿಕೆ ಬಂದಿದೆ: ಸಚಿವ ಎಂಬಿ ಪಾಟೀಲ್
ಹರೀಶ್ ಜಿ.ಆರ್​.
| Edited By: |

Updated on: Sep 11, 2024 | 8:41 PM

Share

ದೆಹಲಿ/ಬೆಂಗಳೂರು, ಸೆಪ್ಟೆಂಬರ್ 11: ಕರ್ನಾಟಕಕ್ಕೆ ಕಳೆದ 1 ವರ್ಷದಲ್ಲಿ ಬೇರೆ ಬೇರೆ ವಲಯಗಳಲ್ಲಿ 1.35 ಲಕ್ಷ ಕೋಟಿ ರೂ. ಹೂಡಿಕೆ ಬಂದಿದೆ ಎಂದು ಕೈಗಾರಿಕಾ ಇಲಾಖೆ ಸಚಿವ ಎಂ.ಬಿ.ಪಾಟೀಲ್ (MB Patil) ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಗ್ರೀನ್ ಹೈಡ್ರೋಜನ್ ಯೋಜನೆಯಡಿ 1.5 ಲಕ್ಷ ಕೋಟಿ ರೂ. ಹೂಡಿಕೆ ಬಂದಿತ್ತು. ಆದರೆ ಮೂಲ ಸೌಕರ್ಯಗಳ ಕೊರತೆಯಿಂದ ಆ ಹೂಡಿಕೆ ಬರಲಿಲ್ಲ ಎಂದು ತಿಳಿಸಿದ್ದಾರೆ.

2 ದಿನ: ಅನೇಕ ದೇಶಗಳ ರಾಯಭಾರಿಗಳ ಭೇಟಿ

ದೆಹಲಿಗೆ ತೆರಳಿರುವ ಸಚಿವ ಎಂ.ಬಿ.ಪಾಟೀಲ್​ 2 ದಿನಗಳಿಂದ ಅನೇಕ ದೇಶಗಳ ರಾಯಭಾರಿಗಳ ಭೇಟಿಯಾಗಿದ್ದಾರೆ. ಸಿಂಗಾಪುರ ಹೈಕಮಿಷನರ್​ ಭೇಟಿಯಾಗಿ ವಿವಿಧ ವಲಯಗಳಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದೇವೆ. ಆಸ್ಟ್ರೇಲಿಯಾ ಹೈಕಮಿಷನರ್ ಭೇಟಿ ಮಾಡಿ ಶಿಕ್ಷಣ, ಬಾಹ್ಯಾಕಾಶ, ಬಯೋಟೆಕ್, ಐಟಿ ಅಭಿವೃದ್ಧಿ ಮತ್ತು ಹೂಡಿಕೆ ಬಗ್ಗೆ ಚರ್ಚಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಕುರ್ಚಿ ಗುದ್ದಾಟದ ಮಧ್ಯ ದಿಲ್ಲಿಯಲ್ಲಿ ಕುಮಾರಸ್ವಾಮಿಯನ್ನು ಭೇಟಿಯಾದ ಎಂಬಿ ಪಾಟೀಲ್

ಜರ್ಮನಿ, ದಕ್ಷಿಣ ಕೊರಿಯಾ ರಾಯಭಾರಿಗಳ ಭೇಟಿಯಾಗಿದ್ದೇನೆ. ಇನ್ವೆಸ್ಟ್​ ಕರ್ನಾಟಕ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. ಟಾಯ್ ಝೋನ್, ಎಂಎಂಡಿ, ವ್ಯಾಟ್ಲೊ, ಹೆಚ್​ಎಂಇಎಲ್​ ಹಾಗೂ ಅಂಬೇರ್ ಎಂಟರ್​ಪ್ರೈಸಸ್​ ಕಂಪನಿ ಜೊತೆಗೂ ಹೂಡಿಕೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದಿದ್ದಾರೆ.

ಸಚಿವ ಎಂ.ಬಿ.ಪಾಟೀಲ್ ಟ್ವೀಟ್​

ರಾಯಭಾರಿಗಳ ಜೊತೆಗೆ ಉದ್ಯಮಿಗಳನ್ನು ಸಹ ಭೇಟಿ ಮಾಡಿದ್ದೇನೆ. ಇನ್ವೆಸ್ಟ್​ ಕರ್ನಾಟಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನಿಸಿದ್ದೇನೆ. ಮೊದಲ ಬಾರಿಗೆ ಸ್ಟಾರ್ಟ್​ ಅಪ್ ಚಾಲೆಂಜ್ ಮಾಡಿದೆ. ವಿಭಿನ್ನವಾಗಿ ಜಾಗತಿಕ ಬಂಡವಾಳ ಹೂಡಿಕೆ ಕಾರ್ಯಕ್ರಮ ಮಾಡುತ್ತಿದ್ದೇವೆ. ಕಾರ್ಯಕ್ರಮದ ಮೂಲ ಥೀಮ್​ನ್ನು ಬದಲಿಸಿದ್ದೇವೆ ಎಂದು ತಿಳಿಸಿದ್ದಾರೆ.

ಕರ್ನಾಟಕಕ್ಕೆ ಡಿಫೆನ್ಸ್ ಕಾರಿಡಾರ್ ನೀಡುವಂತೆ ಮನವಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಕರ್ನಾಟಕಕ್ಕೆ ಡಿಫೆನ್ಸ್ ಕಾರಿಡಾರ್ ನೀಡುವಂತೆ ಮನವಿ ಮಾಡಿದ್ದೇನೆ. ಹೆಲಿಕಾಪ್ಟರ್ ಸೇರಿ ಸೇನಾ ಸಾಮಗ್ರಿ ಉತ್ಪಾದನೆಗೆ ಅನುಕೂಲವಾಗಲಿದೆ. ಕಾರವಾರ ಸೇನಾ ವಿಮಾನ ನಿಲ್ದಾಣವನ್ನು ಸಾರ್ವಜನಿಕ ಬಳಕೆಗೆ ಮತ್ತು ರನ್​ವೇ ವಿಸ್ತರಿಸಲು ಕೇಳಿದ್ದೇನೆ ಎಂದಿದ್ದಾರೆ.

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿರನ್ನು ಭೇಟಿ ಮಾಡಿದ್ದೇನೆ. ಇವಿ ಕಂಪನಿಗಳಿಗೆ ಹೂಡಿಕೆ ಹಣದ ಪ್ರಮಾಣ ಕಡಿಮೆ ಮಾಡಲು, ರಾಜ್ಯದಲ್ಲೂ ಒಂದು ಸೆಮಿಕಂಡಕ್ಟರ್ ಕಂಪನಿ ಆರಂಭಿಸುವಂತೆ ಮನವಿ ಮಾಡಲಾಗಿದೆ. 12 ಇಂಡಸ್ಟ್ರಿಯಲ್ ಕಾರಿಡಾರ್​ಗಳನ್ನು ಘೋಷಣೆ ಮಾಡಿದ್ದಾರೆ. ರಾಜ್ಯಕ್ಕೆ ಒಂದೂ ನೀಡಿಲ್ಲ, ಒಂದು ನೀಡುವಂತೆ ಒತ್ತಾಯ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟದ ರೈಲ್ವೆ ಯೋಜನೆ ಕಾಮಗಾರಿಗಳ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವದ್ವಯರು

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗಿ ಚರ್ಚಿಸಿದ್ದೇನೆ. ಸಣ್ಣ ಉದ್ದಿಮೆದಾರರ ಮೇಲೆ ಹಾಕಿರುವ ಜಿಎಸ್​ಟಿ ರದ್ದು, ಎಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಆಮದು ತೆರಿಗೆ ಸುಂಕ ಇಳಿಸಲು ಮನವಿ ಮಾಡಿರುವುದಾಗಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ