ಬೆಂಗಳೂರು: ರಾಜ್ಯದಲ್ಲಿ ಇಂದು (ಆಗಸ್ಟ್ 7) 1,837 ಜನರಲ್ಲಿ ಕೊರೊನಾ (Covid) ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 11,898 ಇದ್ದು, ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 6.24 ಇದೆ. ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಇಂದು ನಾಲ್ವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿಂದು 1,137 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಮೈಸೂರು ಜಿಲ್ಲೆಯಲ್ಲಿ ಇಂದು ಕೊರೊನಾಗೆ ತಲಾ ಒಬ್ಬರು ಮೃತಪಟ್ಟಿದ್ದಾರೆ.
ಇಂದಿನ 07/08/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/3m7yUqpv0x @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/DT2aczYbmP
— K'taka Health Dept (@DHFWKA) August 7, 2022
ಭಾರತದಲ್ಲಿ 18,738 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ, ಭಾರತದಲ್ಲಿ ರವಿವಾರ (ಆಗಸ್ಟ 7) ಒಟ್ಟು 18,738 ಹೊಸ ಕೊವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. ಒಂದು ದಿನದಲ್ಲಿ ಚೇತರಿಸಿಕೊಂಡವರ ಸಂಖ್ಯೆ 18,558. ದೇಶದಲ್ಲಿ ಪ್ರಸ್ತುತ 1,34,933 ಸಕ್ರಿಯ ಪ್ರಕರಣಗಳಿವೆ. ಈವರೆಗೆ 4,34,84,110 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ದೇಶದ ದೈನಂದಿನ ಪಾಸಿಟಿವಿಟಿ ಸರಾಸರಿಯು ಶೇ 5.02 ಇದ್ದರೆ ವಾರದ ಪಾಸಿಟಿವಿಟಿ ಸರಾಸರಿಯು ಶೇ 4.63 ಇದೆ. ದೇಶದಲ್ಲಿ ಈವರೆಗೆ 206.21 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ.
ಮತ್ತಷ್ಟು ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:36 pm, Sun, 7 August 22