ಕೊರೊನಾ ಪ್ರಕರಣಗಳ ಇಳಿಮುಖ.. ದೇಶದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ! ಆದ್ರೂ ಎಚ್ಚರ ತಪ್ಪಬೇಡಿ

| Updated By: ಸಾಧು ಶ್ರೀನಾಥ್​

Updated on: Nov 30, 2020 | 2:36 PM

ಕಳೆದ ಒಂದು ತಿಂಗಳಿನಿಂದೀಚೆಗೆ ದೇಶದಲ್ಲಿ ಅತಿ ವೇಗವಾಗಿ ಸಕ್ರಿಯ ಪ್ರಕರಣಗಳಲ್ಲಿ ಕುಸಿತ ಕಂಡ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ್ದಾಗಿದೆ.

ಕೊರೊನಾ ಪ್ರಕರಣಗಳ ಇಳಿಮುಖ.. ದೇಶದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ! ಆದ್ರೂ ಎಚ್ಚರ ತಪ್ಪಬೇಡಿ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಕಳೆದ ಒಂದು ತಿಂಗಳಿನಿಂದೀಚೆಗೆ ಕರ್ನಾಟಕದಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ರಾಜ್ಯದಲ್ಲಿ ಅಕ್ಟೋಬರ್ 29ರಂದು ಇದ್ದ 68,180 ಸಕ್ರಿಯ ಪ್ರಕರಣಗಳ ಸಂಖ್ಯೆ ನವೆಂಬರ್ 29ರ ವೇಳೆಗೆ 24,776ಕ್ಕೆ ಇಳಿಕೆಯಾಗಿದೆ. ಕೊರೊನಾ ಸಕ್ರಿಯ ಪ್ರಕರಣಗಳು ಶೇ. 63.6ರಷ್ಟು ಇಳಿಮುಖವಾಗಿದೆ ಎಂದು ತಿಳಿಸಿದ್ದಾರೆ.

ಈ ಮೂಲಕ ದೇಶದಲ್ಲಿ ಅತಿ ವೇಗವಾಗಿ ಸಕ್ರಿಯ ಪ್ರಕರಣಗಳಲ್ಲಿ ಕುಸಿತ ಕಂಡ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ್ದಾಗಿದೆ.

ಇದನ್ನೂ ಓದಿ: ಕೋವಿಡ್ ವೇಳೆ ಬಂದ್ ಆಗಲಿವೆಯಾ 10 ಸಾವಿರ ಖಾಸಗಿ ಶಾಲೆಗಳು?