AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 125 ವರ್ಷಗಳಲ್ಲೇ ಮೇ ತಿಂಗಳಲ್ಲಿ ಅತ್ಯಧಿಕ ಮಳೆ: ಏಪ್ರಿಲ್‌ನಿಂದ ಈವರೆಗೆ 67 ಜನ ಸಾವು

Karnataka Rainfall: ಕರ್ನಾಟಕ ಅಪಾರ ಮಳೆಗೆ ತತ್ತರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಮತ್ತು ಪ್ರವಾಹದಿಂದಾಗಿ ಹಲವಾರು ಸಾವುಗಳು ಸಂಭವಿಸಿವೆ. ಏಪ್ರಿಲ್‌ನಿಂದ ಈವರೆಗೆ 60ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭೂಕುಸಿತದ ಆತಂಕ ಶುರುವಾಗಿದೆ.

ಕರ್ನಾಟಕದಲ್ಲಿ 125 ವರ್ಷಗಳಲ್ಲೇ ಮೇ ತಿಂಗಳಲ್ಲಿ ಅತ್ಯಧಿಕ ಮಳೆ: ಏಪ್ರಿಲ್‌ನಿಂದ ಈವರೆಗೆ 67 ಜನ ಸಾವು
ಭಾರೀ ಮಳೆ
ಗಂಗಾಧರ​ ಬ. ಸಾಬೋಜಿ
|

Updated on:May 31, 2025 | 8:02 AM

Share

ಬೆಂಗಳೂರು, ಮೇ 31: ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದಂತಹ ಮಳೆ (Rain) ಮೇ ತಿಂಗಳಲ್ಲೇ ಬಂದುಬಿಟ್ಟಿದೆ. ಇದು ಶತಮಾನದ ಮಳೆ ಅಂತಾ ಹೇಳಲಾಗುತ್ತಿದ್ದು, 60ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಅಕ್ಷರಶಃ ಮರಣ ಮೃದಂಗ ಬಾರಿಸುತ್ತಿದೆ. ಅಷ್ಟೇ ಅಲ್ಲ, ಮತ್ತೆ ಭೂಮಿ ಕುಸಿಯುವ ಭೀತಿ ಶುರುವಾಗಿದೆ. ಗುಡ್ಡಕುಸಿತ ಆಗಬಹುದಾದ ಸ್ಥಳದಲ್ಲಿ ಇರೋರು ಎಚ್ಚರಿಕೆಯಿಂದಿರಿ ಅಂತಾ ಹವಾಮಾನ ಇಲಾಖೆ (Meteorological Department) ಸೂಚಿಸಿದೆ.

ಮಹಾಮಳೆಗೆ ದಕ್ಷಿಣ ಕನ್ನಡ ಅಕ್ಷರಶಃ ತತ್ತರಿಸಿದೆ. ಭೂಕುಸಿತ, ಗೋಡೆ ಕುಸಿತ, ಮಳೆ ಪ್ರವಾಹ ಹೀಗೆ ಒಂದರ ಹಿಂದೊಂದು ಹೊಡೆತ ದಕ್ಷಿಣ ಕನ್ನಡಕ್ಕೆ ಬೀಳುತ್ತಲೇ ಇದೆ. ಭೂಮಿ ಕುಸಿದು ನಾಲ್ವರ ಸಾವು ಬೆನ್ನಲ್ಲೇ ಈಗ ಮತ್ತೆ ಆತಂಕ ಶುರುವಾಗಿದೆ. ಇಂದು ಕೂಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹೀಗಾಗಿ, ಅಂಗನವಾಡಿಗಳು, ಶಾಲೆಗಳು, ಪಿಯು ಕಾಲೇಜುಗಳಿಗೂ ಇವತ್ತು ರಜೆ ಘೋಷಿಸಲಾಗಿದೆ.

ರಾಜ್ಯದಲ್ಲಿ 125 ವರ್ಷಗಳಲ್ಲೇ ಅತ್ಯಧಿಕ ಮಳೆ!

ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಮಳೆ ಶತಮಾನದ ಮಳೆಯಂತೆ. ಇದನ್ನ ಖುದ್ದು ರಾಜ್ಯ ಸರ್ಕಾರದ ಅಧಿಕಾರಿಗಳೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಹೇಳಿದ್ದಾರೆ. 125 ವರ್ಷಗಳಲ್ಲಿ ಮೇ ತಿಂಗಳಲ್ಲಿ ಇಷ್ಟೊಂದು ಮಳೆ ಬಿದ್ದಿದೆ ಅಂತಾ ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲ, ಏಪ್ರಿಲ್‌ನಿಂದ ಈವರೆಗೆ ರಾಜ್ಯದಲ್ಲಿ ಮಳೆ ಅನಾಹುತಗಳಿಗೆ ಬರೋಬ್ಬರಿ 67 ಜನರು ಮೃತಪಟ್ಟಿದ್ದಾರೆ ಅನ್ನೋ ಮಾಹಿತಿಯನ್ನ ಕಂದಾಯ ಇಲಾಖೆ ನೀಡಿದೆ.

ಇದನ್ನೂ ಓದಿ
Image
ಗ್ರೇಟರ್ ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ: ಬಿಬಿಎಂಪಿಯಿಂದ ಹೊಸ ಕೊಡುಗೆ
Image
ದಕ್ಷಿಣ ಕನ್ನಡ: ಮಳೆಗೆ 5 ಬಲಿ, ಇನ್ನಷ್ಟು ದಿನ ಮಳೆ, ಶಾಲಾ-ಕಾಲೇಜುಗಳಿಗೆ ರಜೆ
Image
ನಾಲ್ಕೇ ದಿನದಲ್ಲಿ ಕೆಆರ್​​​ಎಸ್​​ಗೆ ಹರಿದುಬಂತು 11 ಅಡಿ ನೀರು
Image
ಮಂಗಳೂರಿನಲ್ಲಿ ಮಗುಚಿ ಬಿದ್ದ ದೋಣಿ: ನಿಷೇಧವಿದ್ದರೂ ಸಮುದ್ರಕ್ಕಿಳಿದವರು ಸಾವು

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಐವರನ್ನು ಬಲಿ ಪಡೆದ ವರುಣ: ಇನ್ನಷ್ಟು ದಿನ ಮಳೆ ಅಬ್ಬರ, ಶಾಲಾ-ಕಾಲೇಜುಗಳಿಗೆ ರಜೆ

ಮಾರ್ಚ್ ನಿಂದ ಮೇ ವರೆಗೆ ಸಾಮಾನ್ಯವಾಗಿ ಪೂರ್ವ ಮುಂಗಾರು ಅವಧಿ ಎಂದು ಪರಿಗಣಿಸಲಾಗುತ್ತದೆ. ಆದರೆ ಈ ವರ್ಷ ಮುಂಗಾರು ಮಳೆ ರಾಜ್ಯಕ್ಕೆ ಸುಮಾರು 10 ದಿನಗಳ ಮುಂಚಿತವಾಗಿ ಪ್ರವೇಶಿಸಿದೆ. ಇದರ ಪರಿಣಾಮವಾಗಿ, ಮೈಸೂರು, ಕೊಡಗು, ಮಂಡ್ಯ ಮತ್ತು ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿದೆ.

ಕರ್ನಾಟಕದಲ್ಲಿ ಮಳೆ ಎಚ್ಚರಿಕೆ ನೀಡಿದ ಐಎಂಡಿ

ಇನ್ನು ಭಾರತೀಯ ಹವಾಮಾನ ಇಲಾಖೆ ಪ್ರಕಾರ ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಸಿಡಿಲು ಗುಡುಗಿನೊಂದಿಗೆ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಉತ್ತರ ಕನ್ನಡದಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: ಗ್ರೇಟರ್ ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ: ಬಿಬಿಎಂಪಿಯಿಂದ ಹೊಸ ಕೊಡುಗೆ

ಬೆಂಗಳೂರಿನಲ್ಲಿ ಇಂದು ದಿನವಿಡೀ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣಾ ಮಳೆಯಾಗುವ ನಿರೀಕ್ಷೆಯಿದೆ. ಕನಿಷ್ಠ ತಾಪಮಾನ 21.0 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆಯಿದ್ದು, ಗರಿಷ್ಠ ತಾಪಮಾನ 27.0 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭೂಕುಸಿತಕ್ಕೆ ದಕ್ಷಿಣ ಕನ್ನಡದಲ್ಲಿ ನಾಲ್ವರು ಕೊನೆಯುಸಿರು!

ಮಳೆಯಿಂದಾದ ಅನಾಹುತದಿಂದ ದಕ್ಷಿಣ ಕನ್ನಡದ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡದ ಸಮೇತ ಮರಗಳು ಬಿದ್ದು ಮನೆಯಲ್ಲಿದ್ದ ಮೂವರು ಅಸುನೀಗಿದ್ದಾರೆ. ದೇರಳಕಟ್ಟೆ ಬಳಿಯ ಮಂಟೆಪದವು ಎಂಬಲ್ಲಿ ನೌಶಾದ್ ಅನ್ನೋರ ಮನೆಯ ಮೇಲೆ ಗುಡ್ಡ ಕುಸಿದಿದ್ದು, 10 ವರ್ಷದ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:59 am, Sat, 31 May 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್