Karnataka Covid Update: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 29,438 ಜನರಿಗೆ ಕೊರೊನಾ ದೃಢ, 208 ಜನರ ಸಾವು

ಬೆಂಗಳೂರಿನಲ್ಲೊಂದೇ ಇಂದು 17,342 ಜನರಿಗೆ ಸೋಂಕು ಖಚಿತವಾಗಿದೆ. ಮೃತಪಟ್ಟವರ ಪೈಕಿ ಬೆಂಗಳೂರಿನವರ ಸಂಖ್ಯೆಯೇ ಹೆಚ್ಚಿದ್ದು 149 ಜನರು ಬಲಿಯಾಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 29,438 ಜನರಿಗೆ ಕೊರೊನಾ ದೃಢ, 208 ಜನರ ಸಾವು
ಕೊವಿಡ್ ಪರೀಕ್ಷೆ
Follow us
guruganesh bhat
|

Updated on:Apr 24, 2021 | 9:13 PM

ಬೆಂಗಳೂರು: ರಾಜ್ಯದಲ್ಲಿಂದು 29,438 ಜನರಿಗೆ ಕೊರೊನಾ ದೃಢಪಟ್ಟಿದೆ. ಇಂದು ಒಂದೇ ದಿನ ಸೋಂಕಿನಿಂದ 208 ಜನರ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲೊಂದೇ ಇಂದು 17,342 ಜನರಿಗೆ ಸೋಂಕು ಖಚಿತವಾಗಿದೆ. ಮೃತಪಟ್ಟವರ ಪೈಕಿ ಬೆಂಗಳೂರಿನವರ ಸಂಖ್ಯೆಯೇ ಹೆಚ್ಚಿದ್ದು 149 ಜನರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 13,04,397ಕ್ಕೇರಿಕೆಯಾಗಿದೆ ಎಂದು ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು ಮೃತಪಟ್ಟ 208 ಜನರನ್ನು ಸೇರಿಸಿ ಈವರೆಗೆ ಒಟ್ಟು 14,283 ಜನರು ಮೃತಪಟ್ಟಂತಾಗಿದೆ.  ಈವರೆಗೆ ರಾಜ್ಯದ ಸೋಂಕಿತರ ಪೈಕಿ 10,55,612 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,34,483 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾವಾರು ಮಾಹಿತಿ

ಬೆಂಗಳೂರು ನಗರದಲ್ಲಿಯೇ ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರು ನಗರದಲ್ಲಿ 17,342, ಬೆಂಗಳೂರು ಗ್ರಾಮಾಂತರದಲ್ಲಿ 684, ತುಮಕೂರಿನಲ್ಲಿ 1,559 ಸೋಂಕಿತರು ಪತ್ತೆಯಾಗಿದ್ದಾರೆ. ಬಳ್ಳಾರಿ 731,  ಬಾಗಲಕೋಟೆ 105, ಬೆಳಗಾವಿ 313, ಬೀದರ್ 365, ಚಾಮರಾಜನಗರ 295, ಚಿಕ್ಕಬಳ್ಳಾಪುರ 506, ಚಿಕ್ಕಮಗಳೂರು 185, ಚಿತ್ರದುರ್ಗ 114, ದಕ್ಷಿಣ ಕನ್ನಡ 517, ದಾವಣಗೆರೆ 254, ಧಾರವಾಡ 385, ಗದಗ 76, ಹಾಸನ 823, ಹಾವೇರಿ 92, ಕಲಬುರಗಿ 791, ಕೊಡಗು 196, ಕೋಲಾರ 373, ಕೊಪ್ಪಳ 266, ಮಂಡ್ಯ 688, ಮೈಸೂರು 536, ರಾಯಚೂರು 497, ರಾಮನಗರ 385, ಶಿವಮೊಗ್ಗ 266, ಉಡುಪಿ 403, ಉತ್ತರ ಕನ್ನಡ 185, ವಿಜಯಪುರ 411, ಯಾದಗಿರಿ 95 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿಂದು ಕೊವಿಡ್ ಸೋಂಕಿಗೆ ಮೃತಪಟ್ಟ  208 ಜನರಲ್ಲಿ ಬೆಂಗಳೂರಿನಲ್ಲಿಯೇ  149 ಜನರು ಸಾವನ್ನಪ್ಪಿದ್ದಾರೆ.  ಕಲಬುರಗಿ ಜಿಲ್ಲೆಯಲ್ಲಿ  8 ಜನರು,  ಕೋಲಾರ ಜಿಲ್ಲೆಯಲ್ಲಿ 6, ಧಾರವಾಡ ಜಿಲ್ಲೆಯಲ್ಲಿ 5,  ಮೈಸೂರು ಜಿಲ್ಲೆಯಲ್ಲಿ 4,  ಮಂಡ್ಯ, ಶಿವಮೊಗ್ಗ, ತುಮಕೂರು, ಬಳ್ಳಾರಿ, ಹಾವೇರಿ ಜಿಲ್ಲೆಗಳಲ್ಲಿ ತಲಾ ಮೂವರು ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡ, ದಾವಣಗೆರೆ, ಹಾಸನ, ಕೊಡಗು, ವಿಜಯಪುರ, ರಾಯಚೂರು, ಉತ್ತರಕನ್ನಡ ಜಿಲ್ಲೆಯಲ್ಲಿ ತಲಾ ಇಬ್ಬರು ಬಲಿಯಾಗಿದ್ದಾರೆ. ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಒಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Karnataka records new 29438 covid 19 cases and 208 people died in one day)

Published On - 7:57 pm, Sat, 24 April 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ