Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,001 ಕೊರೊನಾ ಪ್ರಕರಣಗಳು ದೃಢ, 18 ಮಂದಿ ಸಾವು

ಕರ್ನಾಟಕದಲ್ಲಿ ಇಂದು (ಭಾನುವಾರ, ಫೆ.20) 1,001 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸೋಂಕಿನಿಂದ 18 ಜನರು ಮೃತಪಟ್ಟಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,001 ಕೊರೊನಾ ಪ್ರಕರಣಗಳು ದೃಢ, 18 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on: Feb 20, 2022 | 9:23 PM

ಬೆಂಗಳೂರು: ರಾಜ್ಯದಲ್ಲಿ ಇಂದು (ಫೆ.20, ಭಾನುವಾರ) 1,001 ಕೊರೊನಾ ಪ್ರಕರಣಗಳು (Corona Cases) ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,36,586 ಕೊರೊನಾ ಪ್ರಕರಣಗಳು ಪತ್ತೆಯಾದಂತಾಗಿದೆ. ಈ ಪೈಕಿ 38,84,120 ಜನರು ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,780 ಜನರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ (Karnataka Health Department) ಮಾಹಿತಿ ನೀಡಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 18 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 39,795ಕ್ಕೇರಿದೆ. ರಾಜ್ಯದಲ್ಲಿ 12,634 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 1.42 ಇದೆ. ಬೆಂಗಳೂರಿನಲ್ಲಿ (Bengaluru) ಇಂದು 485 ಜನರಿಗೆ ಕೊರೊನಾ ದೃಢಪಟ್ಟಿದ್ದು, ಕೊರೊನಾದಿಂದ 12 ಜನ ಸಾವಿಗೀಡಾಗಿದ್ದಾರೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ

ಬಾಗಲಕೋಟೆ 15, ಬಳ್ಳಾರಿ 46, ಬೆಳಗಾವಿ 51, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 485, ಬೀದರ್ 2, ಚಾಮರಾಜನಗರ 20, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 5, ಚಿತ್ರದುರ್ಗ 22, ದಕ್ಷಿಣ ಕನ್ನಡ 14, ದಾವಣಗೆರೆ 3, ಧಾರವಾಡ 17, ಗದಗ 2, ಹಾಸನ 20, ಹಾವೇರಿ 12, ಕಲಬುರಗಿ 16, ಕೊಡಗು 42, ಕೋಲಾರ 4, ಕೊಪ್ಪಳ 1, ಮಂಡ್ಯ 10, ಮೈಸೂರು 48, ರಾಯಚೂರು 4, ರಾಮನಗರ 4, ಶಿವಮೊಗ್ಗ 22, ತುಮಕೂರು 93, ಉಡುಪಿ 23, ಉತ್ತರ ಕನ್ನಡ 3, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 4 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಆರೋಗ್ಯ ಇಲಾಖೆ ಹಂಚಿಕೊಂಡ ಮಾಹಿತಿ ಇಲ್ಲಿದೆ:

ಕರ್ನಾಟಕ ರಾಜ್ಯದಲ್ಲಿ ಮಹಾಮಾರಿ ಕೊರೊನಾ ಪ್ರಕರಣಗಳು ಸದ್ಯ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವಾಲಯ ಮತ್ತು‌ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ ಕಳಿಸಲಾಗಿದೆ. ಕೆಲ ದಿನಗಳ ಹಿಂದೆ ಕೊರೊನಾ ಹೆಚ್ಚಾಗಿದ್ದ ಕಾರಣ ಬಯೋಮೆಟ್ರಿಕ್ ಹಾಜರಾತಿಗೆ ತಾತ್ಕಾಲಿಕವಾಗಿ ವಿನಾಯಿತಿ ನೀಡಲಾಗಿತ್ತು.

ಇದನ್ನೂ ಓದಿ:

Biometric Attendance: ಕೊರೊನಾ ಕಡಿಮೆಯಾದ ಹಿನ್ನೆಲೆ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,579 ಜನರಿಗೆ ಕೊರೊನಾ ದೃಢ; 23 ಮಂದಿ ಸಾವು

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ