Karnataka Covid Updates: ಕರ್ನಾಟಕದಲ್ಲಿ ಇಂದು 1,653 ಕೋವಿಡ್ ಕೇಸ್ ಪತ್ತೆ; ಒಂದೇ ದಿನ 31 ಜನ ಸಾವು
ಇಂದು ಕರ್ನಾಟಕದಲ್ಲಿ 1,653 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಒಂದೇ ದಿನ 31 ಜನರು ಕೊರೋನಾಗೆ ಬಲಿಯಾಗಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ದಿನವೊಂದಕ್ಕೆ 50 ಸಾವಿರ ಕೋವಿಡ್ ಕೇಸುಗಳು (Covid-19 Cases) ದಾಖಲಾಗಿ ಆತಂಕ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಲಾಕ್ಡೌನ್ (Lockdown) ಘೋಷಣೆ ಮಾಡಿದ ಬಳಿಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಇಂದು ಕರ್ನಾಟಕದಲ್ಲಿ 1,653 ಕೋವಿಡ್ ಪ್ರಕರಣಗಳು (Coronavirus Cases) ಪತ್ತೆಯಾಗಿವೆ. ಇಂದು ಒಂದೇ ದಿನ 31 ಜನರು ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 28,89,994ಕ್ಕೆ ಏರಿಕೆಯಾಗಿದೆ. ರಾಜ್ಯದ ಕೋವಿಡ್ ಸೋಂಕಿತರ ಪೈಕಿ 28,28,983 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 31 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,293 ಜನ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಲ್ಲಿ ಇಂದು ಒಂದೇ ದಿನ 418 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು ಒಂದೇ ದಿನ 1653 ಜನರಿಗೆ ಸೋಂಕು ತಗುಲಿದ್ದು, 31 ಜನ ಬಲಿಯಾಗಿದ್ದಾರೆ. ರಾಜ್ಯದಲ್ಲಿ 24,695 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೋವಿಡ್ ಪ್ರಕರಣಗಳು ಹೀಗಿವೆ: ಬಾಗಲಕೋಟೆ 3, ಬಳ್ಳಾರಿ 6, ಬೆಳಗಾವಿ 60, ಬೆಂಗಳೂರು ಗ್ರಾಮಾಂತರ 46, ಬೆಂಗಳೂರು ನಗರ 418, ಚಾಮರಾಜನಗರ 29, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 64, ಚಿತ್ರದುರ್ಗ 21, ದಕ್ಷಿಣ ಕನ್ನಡ 229, ದಾವಣಗೆರೆ 27, ಧಾರವಾಡ 14, ಗದಗ 3, ಹಾಸನ 97, ಹಾವೇರಿ 2, ಕಲಬುರಗಿ 3, ಕೊಡಗು 107, ಕೋಲಾರ 21, ಕೊಪ್ಪಳ 2, ಮಂಡ್ಯ 36, ಮೈಸೂರು 134, ರಾಯಚೂರು 2, ರಾಮನಗರ 3, ಶಿವಮೊಗ್ಗ 87, ತುಮಕೂರು 104, ಉಡುಪಿ 82, ಉತ್ತರ ಕನ್ನಡ 34, ವಿಜಯಪುರ 9 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಇಂದಿನ 22/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/0utcGO7qil @CMofKarnataka @mla_sudhakar @drashwathcn @GovindKarjol @LaxmanSavadi @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi pic.twitter.com/rgq6ZxW1yn
— K’taka Health Dept (@DHFWKA) July 22, 2021
ಜಿಲ್ಲಾವಾರು ಕೊರೋನಾದಿಂದ ಮೃತಪಟ್ಟವರ ಮಾಹಿತಿ: ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 31 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಕೋಲಾರ, ಬೆಳಗಾವಿ ಜಿಲ್ಲೆಯಲ್ಲಿ ಇಂದು ತಲಾ ನಾಲ್ವರು ಬಲಿಯಾಗಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3, ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ತಲಾ ಇಬ್ಬರು, ಧಾರವಾಡ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಇಬ್ಬರು, ಬಾಗಲಕೋಟೆ ಜಿಲ್ಲೆಯಲ್ಲಿ ಇಬ್ಬರು, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಂದು ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಈವರೆಗೆ ಕೊರೊನಾದಿಂದ 36,293 ಜನ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಕೋವಿಡ್ ಕುರಿತ ಆತಂಕಕಾರಿ ವಿಚಾರ ಬಯಲು; ಭಾರತದ 40 ಕೋಟಿ ಜನರಿಗೆ ಇನ್ನೂ ಕೊರೋನಾ ಅಪಾಯ ತಪ್ಪಿಲ್ಲ!