AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Reservoir Level: ಕೆಆರ್​ಎಸ್​​ನಿಂದ 72,964 ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಬಹುತೇಕ ನದಿಗಳು ಪ್ರವಾಹ ಮಟ್ಟದಲ್ಲಿ ತುಂಬಿ ಹರಿಯಲು ಆರಂಭಿಸಿದ್ದು, ಅಣೆಕಟ್ಟುಗಳಿಗೆ ನೀರಿನ ಒಳಹರಿವು ಹೆಚ್ಚಾಗಿದೆ.

Karnataka Reservoir Level: ಕೆಆರ್​ಎಸ್​​ನಿಂದ 72,964 ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ
ಹಾರಂಗಿ ಡ್ಯಾಂ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 11, 2022 | 11:49 AM

Share

ಬಂಗಾಳಕೊಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಮುಂದಿನ 4 ದಿನಗಳಲ್ಲಿ ಭಾರೀ ಮಳೆ (heavy rain) ಯಾಗುವ ಸಾಧ್ಯತೆಯಿದೆ. ಕರವಾಳಿ ಭಾಗಕ್ಕೆ ರೆಡ್ ಅಲರ್ಟ್ ಮುಂದುವರೆದಿದ್ದು, ಧಾರವಾಡ, ಹಾವೇರಿ, ಕಲಬುರಗಿ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಮೈಸೂರು ಸೇರಿದಂತೆ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜಾಧಾನಿಯಲ್ಲಿ ಇನ್ನು ನಾಲ್ಕು ದಿನ‌ ಮಳೆ ಮುಂದುವರಿಯಲಿದ್ದು, ಮೋಡ ಕವಿದ ವಾತಾವರಣವಿದೆ. ಕೆಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಕೂಡ ಇದೆ. ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಬಹುತೇಕ ನದಿಗಳು ಪ್ರವಾಹ ಮಟ್ಟದಲ್ಲಿ ತುಂಬಿ ಹರಿಯಲು ಆರಂಭಿಸಿದ್ದು, ಆಣೆಕಟ್ಟುಗಳಿಗೆ ನೀರಿನ ಒಳಹರಿವು ಹೆಚ್ಚಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Karnataka Rain Live Updates: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ: 35ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು, ರಸ್ತೆ ಸಂಪರ್ಕ ಕಟ್​

ಆಲಮಟ್ಟಿಯ ಲಾಲ ಬಹಾದ್ದೂರ ಶಾಸ್ತ್ರಿ ಸಾಗರ ಜಲಾಶಯದ ಇಂದಿನ ನೀರಿನ ಮಟ್ಟ ಹೀಗಿದೆ. ಗರಿಷ್ಠ ಮಟ್ಟ: 519.60 ಮೀಟರ್, ಇಂದಿನ ನೀರಿನ ಮಟ್ಟ: 516.95 ಮೀಟರ್, ಒಳ ಹರಿವು: 81,910 ಕ್ಯೂಸೆಕ್, ಹೊರ ಹರಿವು: 2976.

ಭದ್ರಾ ಜಲಾಶಯ, ಇಂದಿನ ಮಟ್ಟ: 174.6 ಅಡಿ. ಗರಿಷ್ಠ ಮಟ್ಟ : 186 ಅಡಿ. ಒಳಹರಿವು: 41645 ಕ್ಯೂಸೆಕ್, ಹೊರಹರಿವು: 153 ಕ್ಯೂಸೆಕ್. ನೀರು ಸಂಗ್ರಹ: 51482 ಟಿಎಂಸಿ. ಸಾಮರ್ಥ್ಯ: 71.535 ಟಿಎಂಸಿ, ಕಳೆದ ವರ್ಷ ಈ ದಿನದ ನೀರು ಸಂಗ್ರಹ 155’9″ ಅಡಿ.

ಇದನ್ನೂ ಓದಿ: ಬಂಗಾಳಕೊಲ್ಲಿ ವಾಯುಭಾರ ಕುಸಿತ: ಕರ್ನಾಟಕ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರಿ ಮಳೆ

KRS ಡ್ಯಾಂ ಇಂದಿನ ನೀರಿನ ಮಟ್ಟ ಹೀಗಿದೆ. ಗರಿಷ್ಠ ಮಟ್ಟ 124.80 ಅಡಿ. ಇಂದಿನ ಮಟ್ಟ 122.60 ಅಡಿ. ಒಳ ಹರಿವು 50,467 ಕ್ಯೂಸೆಕ್. ಹೊರ ಹರಿವು 72,964 ಕ್ಯೂಸೆಕ್, ಗರಿಷ್ಠ ಸಂಗ್ರಹ ಸಾಮರ್ಥ್ಯ 49.452 ಟಿಎಂಸಿ, ಸದ್ಯ ಸಂಗ್ರಹವಾಗಿರುವ ನೀರು 46,434 ಟಿಎಂಸಿ.

ಹೇಮಾವತಿ ನದಿಗೆ ಒಳಹರಿವಿನಲ್ಲಿ 23530 ಕ್ಯೂಸೆಕ್ ಹೆಚ್ಚಳವಾಗಿದೆ. ಜಲಾಶಯದಿಂದ 17575 ಕ್ಯೂಸೆಕ್ ನೀರು ಹೊರಹರಿವು. ಹೇಮಾವತಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2922 ಅಡಿ. ಇಂದು ಜಲಾಶಯದಲ್ಲಿನ ನೀರಿನ ಮಟ್ಟ 2919.07 ಅಡಿ. ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರು ಹೊರಕ್ಕೆ ಬಿಡಲಾಗಿದೆ. ಜಲಾಶಯದ ನೀರಿನ ‌ಸಂಗ್ರಹ ಪ್ರಮಾಣ 37.103 ಟಿಎಂಸಿ. ಇಂದು ಜಲಾಶಯದಲ್ಲಿರುವ ನೀರಿನ ಪ್ರಮಾಣ 34.307 ಟಿಎಂಸಿ.

ಇದನ್ನೂ ಓದಿ: ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆಯಿಂದ ಎರಡು‌ ದಿನ ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸ

ಕಬಿನಿ ಜಲಾಶಯದಿಂದ 30 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ. ಕೇರಳದ ವಯನಾಡು, ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ಕಬಿನಿ ಜಲಾಶಯದ ಒಳಹರಿವು 26 ಸಾವಿರ ಕ್ಯೂಸೆಕ್​ಗೆ ಹೆಚ್ಚಳವಾಗಿದೆ. ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯ 84 ಅಡಿ ಗರಿಷ್ಠ ಸಾಮರ್ಥ್ಯದ ಕಬಿನಿ ಜಲಾಶಯ ಜಲಾಶಯದ ಇಂದಿನ ನೀರಿನ ಮಟ್ಟ 82.71 ಅಡಿ. ಜಲಾಶಯದ ಇಂದಿನ ಒಳಹರಿವು 26,847 ಕ್ಯೂಸೆಕ್. ಜಲಾಶಯದಿಂದ ಹೊರಹರಿವು 30,000 ಕ್ಯೂಸೆಕ್. ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಕಬಿನಿ ಜಲಾಶಯ. ಜಲಾಶಯದಲ್ಲಿ ಇಂದು 18.68 ಟಿಎಂಸಿ ನೀರು. 40 ಎಂ.ಎಂ ಮಳೆ ಪ್ರಮಾಣ ದಾಖಲಾಗಿದೆ.

ಸುಪಾ ಆಣೆಕಟ್ಟು ನೀರಿನ ಮಟ್ಟ ಗರಿಷ್ಠ ಮಟ್ಟ -564 ಮೀ. ಇಂದಿನ ಮಟ್ಟ – 530.70ಮೀ. ಒಳಹರಿವು 33680.70 ಕ್ಯೂಸೆಕ್. ಹೊರಹರಿವು – ಇಲ್ಲ.

ಕದ್ರಾ ಆಣೆಕಟ್ಟು ಗರಿಷ್ಠ ಮಟ್ಟ -34.59 ಮೀ. ಇಂದಿನ ಮಟ್ಟ – 29.93ಮೀ. ಒಳಹರಿವು – 19140.00 ಕ್ಯೂಸೆಕ್. ಹೊರಹರಿವು – 25136 ಕ್ಯೂಸೆಕ್.

ಕೊಡಸಳ್ಳಿ ಆಣೆಕಟ್ಟು ಗರಿಷ್ಠ ಮಟ್ಟ -75.50 ಮೀ. ಇಂದಿನ ಮಟ್ಟ – 69.66 ಮೀ. ಒಳಹರಿವು – 12388 ಕ್ಯೂಸೆಕ್. ಹೊರಹರಿವು – 11698 ಕ್ಯೂಸೆಕ್ ಇದೆ.

Published On - 11:47 am, Mon, 11 July 22

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ