AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ರಾಜ್ಯದ ಪ್ರಮುಖ ಡ್ಯಾಂಗಳಿಗೆ ಹರಿದುಬರುತ್ತಿದೆ ಭಾರಿ ಒಳಹರಿವು!

ಕರ್ನಾಟಕದ ಜಲಾಶಯಗಳ (ಆಗಸ್ಟ್ 16) ನೀರಿನ ಮಟ್ಟ: ರಾಜ್ಯದಾದ್ಯಂತ ಮುಂಗಾರು ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಆಲಮಟ್ಟಿ, ಕಬಿನಿ, ಲಿಂಗನಮಕ್ಕಿ, ಹೇಮಾವತಿ ಹಾಗೂ ಭದ್ರಾ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ. ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿಯಾಗಿದ್ದು ನದಿಗೆ ಅಪಾರ ಪ್ರಮಾಣದ ನೀರು ಹರಿಬಿಡಲಾಗುತ್ತಿದೆ. ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ವರದಿ ಇಲ್ಲಿದೆ.

Karnataka Dam Water Level: ರಾಜ್ಯದ ಪ್ರಮುಖ ಡ್ಯಾಂಗಳಿಗೆ ಹರಿದುಬರುತ್ತಿದೆ ಭಾರಿ ಒಳಹರಿವು!
ರಾಜ್ಯದ ಪ್ರಮುಖ ಡ್ಯಾಂಗಳಿಗೆ ಹರಿದುಬರುತ್ತಿದೆ ಭಾರಿ ಒಳಹರಿವು!
ಭಾವನಾ ಹೆಗಡೆ
|

Updated on: Aug 16, 2026 | 12:07 PM

Share

ಮುಖ್ಯಾಂಶಗಳು

  • ಆಲಮಟ್ಟಿ, ಲಿಂಗನಮಕ್ಕಿ ಸೇರಿದಂತೆ ರಾಜ್ಯದ ಜಲಾಶಯಗಳಿಗೆ ಹರಿದುಬರುತ್ತಿರುವ ಭಾರಿ ಒಳಹರಿವು.
  • ಆಲಮಟ್ಟಿ ಡ್ಯಾಂ ಭರ್ತಿಯಾಗುವ ಹಂತದಲ್ಲಿದ್ದು, ಕಬಿನಿ ನದಿಗೆ ನೀರಿನ ಹೊರಹರಿವು ಹೆಚ್ಚಳ.
  • ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ವ್ಯತ್ಯಾಸ.

ಬೆಂಗಳೂರು, ಆಗಸ್ಟ್ 16: ಕರ್ನಾಟಕದಾದ್ಯಂತ ಮುಂಗಾರು ಮಳೆ ಮುಂದುವರಿದಿದ್ದು, ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಕೃಷ್ಣಾ, ಕಾವೇರಿ ಮತ್ತು ಶರಾವತಿ ಕೊಳ್ಳದ ಜಲಾಶಯಗಳಿಗೆ ಉತ್ತಮ ಪ್ರಮಾಣದ ಒಳಹರಿವು ದಾಖಲಾಗುತ್ತಿದ್ದು, ಕೃಷಿ ಹಾಗೂ ಕುಡಿಯುವ ನೀರಿನ ಅಭಾವ ತಗ್ಗುವ ನಿರೀಕ್ಷೆಯಿದೆ. ಆಲಮಟ್ಟಿ, ಲಿಂಗನಮಕ್ಕಿ, ಹೇಮಾವತಿ, ಕಬಿನಿ ಹಾಗೂ ಭದ್ರಾ ಜಲಾಶಯಗಳಲ್ಲಿ ಇಂದಿನ ನೀರಿನ ಸಂಗ್ರಹ ಹಾಗೂ ಒಳ-ಹೊರಹರಿವಿನ ಸಂಪೂರ್ಣ ಮಾಹಿತ ಇಲ್ಲಿದೆ.

ಆಲಮಟ್ಟಿ ಜಲಾಶಯ

  • ಗರಿಷ್ಠ ಮಟ್ಟ: 519.60 ಮೀಟರ್
  • ಇಂದಿನ ನೀರಿನ ಮಟ್ಟ: 519.54 ಮೀಟರ್
  • ಒಳಹರಿವು: 34,3243 ಕ್ಯೂಸೆಕ್
  • ಹೊರಹರಿವು: 26,155 ಕ್ಯೂಸೆಕ್

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ.

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819 ಅಡಿ
  • ಇಂದಿನ ನೀರಿನ ಮಟ್ಟ: 1794.45 ಅಡಿ
  • ಒಳಹರಿವು: 12,348 ಕ್ಯೂಸೆಕ್
  • ಕಳೆದ ವರ್ಷ ಇದೇ ದಿನ: 1812.75 ಅಡಿ

ಶಿವಮೊಗ್ಗ ಜಿಲ್ಲೆಯ ಶರಾವತಿ ನದಿ ಕೊಳ್ಳದ ಲಿಂಗನಮಕ್ಕಿ ಡ್ಯಾಂನಲ್ಲಿ ನೀರಿನ ಮಟ್ಟ ಸ್ಥಿರವಾಗಿ ಏರಿಕೆಯಾಗುತ್ತಿದೆ.

ಕಬಿನಿ ಜಲಾಶಯ

  • ಗರಿಷ್ಠ ಮಟ್ಟ: 84 ಅಡಿ
  • ಇಂದಿನ ನೀರಿನ ಮಟ್ಟ: 80.89 ಅಡಿ
  • ಒಳಹರಿವು: 8,559 ಕ್ಯೂಸೆಕ್
  • ಹೊರಹರಿವು (ನದಿಗೆ): 13,600 ಕ್ಯೂಸೆಕ್
  • ಮಳೆ ಪ್ರಮಾಣ: 10 ಮಿ.ಮೀ

ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಉತ್ತಮ ಒಳಹರಿವಿದ್ದು, ನದಿಗೆ ಅಪಾರ ಪ್ರಮಾಣದ ನೀರನ್ನು ಹರಿಮುಕ್ತಗೊಳಿಸಲಾಗಿದೆ.

ಹೇಮಾವತಿ ಜಲಾಶಯ

  • ಗರಿಷ್ಠ ಮಟ್ಟ: 2922 ಅಡಿ
  • ಇಂದಿನ ನೀರಿನ ಮಟ್ಟ: 2916.85 ಅಡಿ
  • ಒಳಹರಿವು: 4163 ಕ್ಯೂಸೆಕ್
  • ಹೊರಹರಿವು: ನದಿಗೆ 200 ಕ್ಯೂಸೆಕ್
  • ಕಾಲುವೆಗೆ 1845 ಕ್ಯೂಸೆಕ್
  • ಕಳೆದ ವರ್ಷ ಇದೇ ದಿನ: 2921.85 ಅಡಿ (36.958 TMC ನೀರಿತ್ತು, ಒಳಹರಿವು 8475 ಕ್ಯೂಸೆಕ್ ಇತ್ತು)

ಹಾಸನ ತಾಲೂಕಿನ ಗೊರೂರು ಸಮೀಪದ ಹೇಮಾವತಿ ಜಲಾಶಯಕ್ಕೆ ಒಳಹರಿವು ಸ್ಥಿರವಾಗಿದೆ.

ಭದ್ರಾ ಜಲಾಶಯ

ಚಿಕ್ಕಮಗಳೂರು-ಶಿವಮೊಗ್ಗ ಭಾಗದ ಪ್ರಮುಖ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹದ ವಿವರ ಹೀಗಿದೆ:

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ನೀರಿನ ಮಟ್ಟ: 173 ಅಡಿ 2 ಇಂಚು
  • ಒಳಹರಿವು: 5793 ಕ್ಯೂಸೆಕ್
  • ಹೊರಹರಿವು: 203 ಕ್ಯೂಸೆಕ್

ಕಳೆದ ವರ್ಷ ಇದೇ ದಿನ 185 ಅಡಿ (70.279 TMC ) ಸಂಗ್ರಹ ಹಾಗೂ 17007 ಕ್ಯೂಸೆಕ್ ಒಳಹರಿವಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು  ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ