
ಬೆಂಗಳೂರು, ಆಗಸ್ಟ್ 16: ಕರ್ನಾಟಕದಾದ್ಯಂತ ಮುಂಗಾರು ಮಳೆ ಮುಂದುವರಿದಿದ್ದು, ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಕೃಷ್ಣಾ, ಕಾವೇರಿ ಮತ್ತು ಶರಾವತಿ ಕೊಳ್ಳದ ಜಲಾಶಯಗಳಿಗೆ ಉತ್ತಮ ಪ್ರಮಾಣದ ಒಳಹರಿವು ದಾಖಲಾಗುತ್ತಿದ್ದು, ಕೃಷಿ ಹಾಗೂ ಕುಡಿಯುವ ನೀರಿನ ಅಭಾವ ತಗ್ಗುವ ನಿರೀಕ್ಷೆಯಿದೆ. ಆಲಮಟ್ಟಿ, ಲಿಂಗನಮಕ್ಕಿ, ಹೇಮಾವತಿ, ಕಬಿನಿ ಹಾಗೂ ಭದ್ರಾ ಜಲಾಶಯಗಳಲ್ಲಿ ಇಂದಿನ ನೀರಿನ ಸಂಗ್ರಹ ಹಾಗೂ ಒಳ-ಹೊರಹರಿವಿನ ಸಂಪೂರ್ಣ ಮಾಹಿತ ಇಲ್ಲಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ.
ಶಿವಮೊಗ್ಗ ಜಿಲ್ಲೆಯ ಶರಾವತಿ ನದಿ ಕೊಳ್ಳದ ಲಿಂಗನಮಕ್ಕಿ ಡ್ಯಾಂನಲ್ಲಿ ನೀರಿನ ಮಟ್ಟ ಸ್ಥಿರವಾಗಿ ಏರಿಕೆಯಾಗುತ್ತಿದೆ.
ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಉತ್ತಮ ಒಳಹರಿವಿದ್ದು, ನದಿಗೆ ಅಪಾರ ಪ್ರಮಾಣದ ನೀರನ್ನು ಹರಿಮುಕ್ತಗೊಳಿಸಲಾಗಿದೆ.
ಹಾಸನ ತಾಲೂಕಿನ ಗೊರೂರು ಸಮೀಪದ ಹೇಮಾವತಿ ಜಲಾಶಯಕ್ಕೆ ಒಳಹರಿವು ಸ್ಥಿರವಾಗಿದೆ.
ಚಿಕ್ಕಮಗಳೂರು-ಶಿವಮೊಗ್ಗ ಭಾಗದ ಪ್ರಮುಖ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹದ ವಿವರ ಹೀಗಿದೆ:
ಕಳೆದ ವರ್ಷ ಇದೇ ದಿನ 185 ಅಡಿ (70.279 TMC ) ಸಂಗ್ರಹ ಹಾಗೂ 17007 ಕ್ಯೂಸೆಕ್ ಒಳಹರಿವಿತ್ತು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ