
ಬೆಂಗಳೂರು, ಆಗಸ್ಟ್ 31: ರಾಜ್ಯದಲ್ಲಿ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿತ್ತು. ಆದರೆ ಇದೀಗ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕಾವೇರಿ ನದಿಯ ಜೀವನಾಡಿ ಕೆಆರ್‌ಎಸ್ ಜಲಾಶಯದಿಂದಲೂ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ರಾಜ್ಯದ ರೈತರ ಬೆಳೆಗಳಿಗೆ ನೀರು ಒದಗಿಸಲು ನಿರಾಕರಿಸುತ್ತಿರುವ ಸರ್ಕಾರ, ತಮಿಳುನಾಡಿನ ಕೃಷಿಗಾಗಿ ಕಾವೇರಿ ನೀರು ಹರಿಸುತ್ತಿರುವುದಕ್ಕೆ ಸ್ಥಳೀಯ ರೈತ ಸಮುದಾಯದಿಂದ ತೀವ್ರ ಆಕ್ರೋಶ ಹಾಗೂ ಖಂಡನೆ ವ್ಯಕ್ತವಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್, ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಗಳ ಆಗಸ್ಟ್ 31ರ ಇಂದಿನ ನೀರಿನ ಮಟ್ಟ ಹಾಗೂ ಒಳ-ಹೊರಹರಿವಿನ ವಿವರಗಳು ಕೆಳಗಿನಂತಿವೆ:
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರವು ಜಲಾಶಯ ಭರ್ತಿಯಾಗುವ ಹಂತ ತಲುಪಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿ ಇರುವ ಬಸವಸಾಗರ ಜಲಾಶಯದಲ್ಲೂ ಸಹ ನೀರು ಗರಿಷ್ಠ ಮಟ್ಟದಲ್ಲಿದ್ದು, ಬೃಹತ್ ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರನ್ನು ಹೊರಬಿಡಲಾಗುತ್ತಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ