Karnataka Dam Water Level: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಇಳಿಕೆ: KRS, ಕಬಿನಿ ಸೇರಿ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ್ 6 ರ ನೀರಿನ ಮಟ್ಟ: ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆಯ ಅಬ್ಬರದಿಂದ ಕಾವೇರಿ ಜಲಾನಯನ ಪ್ರದೇಶದ ಡ್ಯಾಂಗಳಿಗೆ ಒಳಹರಿವು ಹೆಚ್ಚಾಗಿತ್ತು. ಪರಿಣಾಮವಾಗಿ ಕೆಆರ್​ಎಸ್ ಡ್ಯಾಂ ನೀರಿನ ಮಟ್ಟ 100 ಅಡಿ ದಾಟಿತ್ತು. ಇದೀಗ ಮಳೆ ತುಸು ಕಡಿಮೆ ಆಗಿದ್ದು, ಒಳಹರಿವು ಕಡಿಮೆಯಾಗಿದೆ.

Karnataka Dam Water Level: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಇಳಿಕೆ: KRS, ಕಬಿನಿ ಸೇರಿ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ
ಹೇಮಾವತಿ ಡ್ಯಾಂ (ಸಂಗ್ರಹ ಚಿತ್ರ)
Image Credit source: tv9

Updated on: Aug 06, 2026 | 11:38 AM

ಬೆಂಗಳೂರು, ಆಗಸ್ಟ್ 6: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ (Monsoon Rain) ಪ್ರಮಾಣ ತಗ್ಗಿರುವ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳಿಗೆ ಒಳಹರಿವು (Dam Water Level) ಕಡಿಮೆಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಬುಧವಾರ ಬೆಳಗ್ಗೆ 19,275 ಕ್ಯೂಸೆಕ್ ಇದ್ದ ಒಳಹರಿವು ಇಂದು 10,176 ಕ್ಯೂಸೆಕ್‌ಗೆ ಇಳಿಕೆಯಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್‌ ಡ್ಯಾಂನಲ್ಲಿ ಸದ್ಯ 105.87 ಅಡಿ ನೀರು ಸಂಗ್ರಹವಾಗಿದೆ. ಕುಡಿಯುವ ಉದ್ದೇಶಕ್ಕಾಗಿ ಜಲಾಶಯದಿಂದ 2,015 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 27.770 ಟಿಎಂಸಿ ನೀರು ಸಂಗ್ರಹವಿದೆ.

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ಮಟ್ಟ: 105.87 ಅಡಿ
  • ಒಳಹರಿವು: 10,176 ಕ್ಯೂಸೆಕ್
  • ಹೊರಹರಿವು: 2,015 ಕ್ಯೂಸೆಕ್
  • ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ಸಂಗ್ರಹ: 27.770 ಟಿಎಂಸಿ

ಕಬಿನಿ ಜಲಾಶಯದ ನೀರಿನ ಮಟ್ಟ

  • ಗರಿಷ್ಠ ಮಟ್ಟ: 84.00 ಅಡಿ
  • ಇಂದಿನ ಮಟ್ಟ: 81.82 ಅಡಿ
  • ಒಳಹರಿವು: 13,969 ಕ್ಯೂಸೆಕ್
  • ಹೊರಹರಿವು: 7,000 ಕ್ಯೂಸೆಕ್
  • ನೀರಿನ ಸಂಗ್ರಹ: 18.13 ಟಿಎಂಸಿ

ಮೈಸೂರು ಭಾಗದಲ್ಲೂ ಕಬಿನಿ ಜಲಾಶಯದ ಒಳಹರಿವು ಕಡಿಮೆಯಾಗಿದೆ. ಸದ್ಯ ಜಲಾಶಯಕ್ಕೆ 13,969 ಕ್ಯೂಸೆಕ್ ಒಳಹರಿವು ಇದ್ದು, ಹೊರಹರಿವನ್ನು 7,000 ಕ್ಯೂಸೆಕ್‌ಗೆ ಇಳಿಸಲಾಗಿದೆ. ಜಲಾಶಯದಲ್ಲಿ 81.82 ಅಡಿ ನೀರಿನ ಮಟ್ಟವಿದ್ದು, 18.13 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ನದಿಗೆ ನೀರು ಬಿಡುವ ಪ್ರಮಾಣವನ್ನು 27,000 ಕ್ಯೂಸೆಕ್‌ನಿಂದ 7,000 ಕ್ಯೂಸೆಕ್‌ಗೆ ಇಳಿಸಲಾಗಿದೆ.

ಬಸವಸಾಗರ ಜಲಾಶಯ ನೀರಿನ ಮಟ್ಟ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯಕ್ಕೆ 1.50 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, 1.45 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

  • ಗರಿಷ್ಠ ಮಟ್ಟ: 492.25 ಮೀಟರ್
  • ಇಂದಿನ ಮಟ್ಟ: 491.30 ಮೀಟರ್
  • ಒಳಹರಿವು: 1,50,000 ಕ್ಯೂಸೆಕ್
  • ಹೊರಹರಿವು: 1,45,000 ಕ್ಯೂಸೆಕ್
  • ಹಾರಂಗಿ ಜಲಾಶಯ

ಹಾರಂಗಿ ಜಲಾಶಯದ ನೀರಿನ ಮಟ್ಟ

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿಯಲ್ಲಿರುವ ಜಲಾಶಯದಲ್ಲಿ ಸದ್ಯ 2858.15 ಅಡಿ ನೀರಿನ ಮಟ್ಟವಿದೆ. ಜಲಾಶಯಕ್ಕೆ 3,562 ಕ್ಯೂಸೆಕ್ ಒಳಹರಿವು ಇದ್ದು, ನದಿಗೆ 3,883 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

  • ಗರಿಷ್ಠ ಮಟ್ಟ: 2859 ಅಡಿ
  • ಇಂದಿನ ಮಟ್ಟ: 2858.15 ಅಡಿ
  • ಒಳಹರಿವು: 3,562 ಕ್ಯೂಸೆಕ್
  • ನದಿಗೆ ಹೊರಹರಿವು: 3,883 ಕ್ಯೂಸೆಕ್
  • ಹೇಮಾವತಿ ಜಲಾಶಯ

ಹೇಮಾವತಿ ಜಲಾಶಯದ ನೀರಿನ ಮಟ್ಟ

ಹಾಸನ ತಾಲೂಕಿನ ಗೊರೂರು ಸಮೀಪದ ಹೇಮಾವತಿ ಜಲಾಶಯದಲ್ಲಿ ಸದ್ಯ 2913.36 ಅಡಿ ನೀರಿನ ಮಟ್ಟವಿದ್ದು, 29.318 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 6,758 ಕ್ಯೂಸೆಕ್ ಒಳಹರಿವು ಇದೆ. 500 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ 2921.92 ಅಡಿ ನೀರಿನ ಮಟ್ಟವಿದ್ದು, 37.026 ಟಿಎಂಸಿ ನೀರು ಸಂಗ್ರಹವಾಗಿತ್ತು. ಆಗ 7,282 ಕ್ಯೂಸೆಕ್ ಒಳಹರಿವು, ನದಿಗೆ 2,400 ಕ್ಯೂಸೆಕ್ ಹಾಗೂ ಕಾಲುವೆಗೆ 4,600 ಕ್ಯೂಸೆಕ್ ನೀರು ಹೊರಹರಿವು ಇತ್ತು.

  • ಗರಿಷ್ಠ ಮಟ್ಟ: 2922 ಅಡಿ (37 TMC)
  • ಇಂದಿನ ಮಟ್ಟ: 2913.36 ಅಡಿ
  • ಇಂದಿನ ಸಂಗ್ರಹ: 29.318 TMC
  • ಒಳಹರಿವು: 6,758 ಕ್ಯೂಸೆಕ್
  • ಹೊರಹರಿವು: 500 ಕ್ಯೂಸೆಕ್
  • ಕಾಲುವೆಗೆ: 0 ಕ್ಯೂಸೆಕ್
  • ಕಬಿನಿ ಜಲಾಶಯ

ಆಲಮಟ್ಟಿ ಡ್ಯಾಂ ನೀರಿನ ಮಟ್ಟ

  • ಡ್ಯಾಂ ಗರಿಷ್ಟ ಮಟ್ಟ: 519.60 ಮೀಟರ್
  • ಇಂದಿನ ನೀರಿನ ಮಟ್ಟ: 518.77 ಮೀಟರ್
  • ಒಳ ಹರಿವು: 1,33,196 ಕ್ಯೂಸೆಕ್
  • ಹೊರ ಹರಿವು: 1,51,287 ಕ್ಯೂಸೆಕ್

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 am, Thu, 6 August 26

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us