AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಮುಂಗಾರು ಮಳೆ ಚುರುಕು, ಕರ್ನಾಟಕದ ಪ್ರಮುಖ ಡ್ಯಾಂಗಳ ಜುಲೈ 7ರ ನೀರಿನ ಮಟ್ಟದ ವಿವರ

ಕರ್ನಾಟಕದ ಜಲಾಶಯಗಳ ಜುಲೈ 7 ರ ನೀರಿನ ಮಟ್ಟ: ಕರ್ನಾಟಕದ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಪ್ರಮುಖ ಜಲಾಶಯಗಳಿಗೆ ಭಾರಿ ಒಳಹರಿವು ಆರಂಭವಾಗಿದೆ. ಶಿವಮೊಗ್ಗದ ಗಾಜನೂರು ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಎಲ್ಲಾ 22 ಗೇಟ್‌ಗಳ ಮೂಲಕ ಕೃಷ್ಣಾ ನದಿಯ ಉಪನದಿಗೆ ನೀರು ಹರಿಸಲಾಗುತ್ತಿದೆ.

Karnataka Dam Water Level: ಮುಂಗಾರು ಮಳೆ ಚುರುಕು, ಕರ್ನಾಟಕದ ಪ್ರಮುಖ ಡ್ಯಾಂಗಳ ಜುಲೈ 7ರ ನೀರಿನ ಮಟ್ಟದ ವಿವರ
ತುಂಗಾ ಜಲಾಶಯImage Credit source: tv9
ಗಣಪತಿ ಶರ್ಮಾ
| Edited By: |

Updated on:Jul 13, 2026 | 12:28 PM

Share

ಮುಖ್ಯಾಂಶಗಳು

  • ಗಾಜನೂರು ತುಂಗಾ ಜಲಾಶಯ ಸಂಪೂರ್ಣ ಭರ್ತಿ
  • ಡ್ಯಾಂನ ಎಲ್ಲಾ 22 ಗೇಟ್‌ಗಳು ಓಪನ್
  • ರೈತರ ಮುಖದಲ್ಲಿ ಮೂಡಿದ ಹೊಸ ಮಂದಹಾಸ

ಬೆಂಗಳೂರು, ಜುಲೈ 7: ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಮುಂಗಾರು ಮಳೆ (Monsoon Rain) ತೀವ್ರಗೊಂಡಿದ್ದು, ಬತ್ತಿ ಹೋಗುತ್ತಿದ್ದ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ಈಗ ಭಾರಿ ಪ್ರಮಾಣದ ಒಳಹರಿವು ಆರಂಭವಾಗಿದೆ. ಜೂನ್ ತಿಂಗಳಲ್ಲಿ ಕೊಂಚ ಕೈಕೊಟ್ಟಿದ್ದ ಮಳೆಯು ಜುಲೈ ಆರಂಭದಲ್ಲಿ ಚುರುಕುಗೊಂಡಿದೆ. ನದಿ-ಜಲಾಶಯಗಳು ಮೈದುಂಬಿಕೊಳ್ಳುತ್ತಿವೆ. ಇದರ ಪರಿಣಾಮವಾಗಿ ಶಿವಮೊಗ್ಗ ತಾಲೂಕಿನ ಗಾಜನೂರು ಬಳಿಯ ತುಂಗಾ ಜಲಾಶಯವು ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಭರ್ತಿಯಾಗಿದೆ. ಡ್ಯಾಂ ಸುರಕ್ಷತೆಯ ದೃಷ್ಟಿಯಿಂದ ಒಟ್ಟು 22 ಗೇಟ್‌ಗಳನ್ನು ಮುಂಜಾನೆ ತೆರೆಯಲಾಗಿದ್ದು, ಸುಮಾರು 24,ವಾಹನ ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಹರಿಸಲಾಗುತ್ತಿದೆ. ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಡ್ಯಾಂ ಆವರಣದಲ್ಲಿರುವ ತುಂಗಾದೇವಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಗಿದೆ.

ಹಾಲಿನ ನೊರೆಯಂತೆ ಧುಮುಕುತ್ತಿರುವ ನೀರು, ರೈತರಲ್ಲಿ ಹುಮ್ಮಸ್ಸು

ತುಂಗಾ ಜಲಾಶಯದ ಎಲ್ಲಾ ಗೇಟ್‌ಗಳಿಂದ ನೀರು ಧುಮುಕುತ್ತಿರುವುದರಿಂದ ಇಡೀ ವಾತಾವರಣ ಹಾಲಿನ ನೊರೆಯಂತೆ ಕಂಗೊಳಿಸುತ್ತಿದೆ. ಮಳೆಯ ನಡುವೆಯೂ ಡ್ಯಾಂ ಸೌಂದರ್ಯ ಇಮ್ಮಡಿಯಾಗಿದೆ. ನಿರಂತರ ಮಳೆಯಿಂದಾಗಿ ತುಂಗಾ ನದಿ ತುಂಬಿ ಹರಿಯುತ್ತಿದ್ದು, ಶಿವಮೊಗ್ಗ ಮಾತ್ರವಲ್ಲದೆ ದಾವಣಗೆರೆ, ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ರೈತರ ಕೃಷಿ ಚಟುವಟಿಕೆಗಳಿಗೆ ಭಾರಿ ಅನುಕೂಲವಾಗಲಿದೆ. ಮಳೆ ತಡವಾಗಿದ್ದರಿಂದ ಆತಂಕದಲ್ಲಿದ್ದ ರೈತರ ಮುಖದಲ್ಲಿ ಈಗ ಮಂದಹಾಸ ಮೂಡಿದ್ದು, ಕೃಷಿ ಚಟುವಟಿಕೆಗಳು ಮತ್ತೆ ಚುರುಕುಗೊಂಡಿವೆ.

ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ

ಕೆಆರ್​ಎಸ್ ಜಲಾಶಯ (ಮಂಡ್ಯ)

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ನೀರಿನ ಮಟ್ಟ: 82.45 ಅಡಿ
  • ಒಳಹರಿವು: 5,734 ಕ್ಯೂಸೆಕ್, ಹೊರಹರಿವು: 777 ಕ್ಯೂಸೆಕ್
  • ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ಸಂಗ್ರಹ: 11.909 ಟಿಎಂಸಿ

ಕಬಿನಿ ಜಲಾಶಯ (ಮೈಸೂರು)

ಕಬಿನಿ ಜಲಾಶಯದ ಇಂದಿನ ನೀರಿನ ಮಟ್ಟ 59.32 ಅಡಿಯಷ್ಟಿದೆ (ಕಳೆದ ವರ್ಷ ಇದೇ ದಿನ 80.79 ಅಡಿ ಇತ್ತು). ಪ್ರಸ್ತುತ ಜಲಾಶಯದಲ್ಲಿ 7.07 ಟಿಎಂಸಿ ನೀರು ಸಂಗ್ರಹವಿದ್ದು, 4,394 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ನದಿಗೆ 500 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದ್ದು, ಕಾಲುವೆಗಳಿಗೆ ಸದ್ಯ ನೀರು ಹರಿಸುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಕಬಿನಿಯಲ್ಲಿ ನೀರಿನ ಮಟ್ಟ ಹಾಗೂ ಒಳಹರಿವು ಕಡಿಮೆ ಇದೆ. ಕಳೆದ 24 ಗಂಟೆಗಳಲ್ಲಿ ಇಲ್ಲಿ 30 ಮಿ.ಮೀ ಮಳೆ ದಾಖಲಾಗಿದೆ.

ಹೇಮಾವತಿ ಜಲಾಶಯ (ಹಾಸನ)

  • ಗರಿಷ್ಠ ಮಟ್ಟ: 2922 ಅಡಿ (37 ಟಿಎಂಸಿ)
  • ಇಂದಿನ ನೀರಿನ ಮಟ್ಟ: 2895.91 ಅಡಿ (17.379 ಟಿಎಂಸಿ)
  • ಒಳಹರಿವು: 8,901 ಕ್ಯೂಸೆಕ್, ಹೊರಹರಿವು: 300 ಕ್ಯೂಸೆಕ್

ಭದ್ರಾ ಜಲಾಶಯ (ಲಕ್ಕವಳ್ಳಿ/ಭದ್ರಾವತಿ)

  • ಗರಿಷ್ಠ ಮಟ್ಟ: 186 ಅಡಿ (71.535 ಟಿಎಂಸಿ)
  • ಇಂದಿನ ನೀರಿನ ಮಟ್ಟ: 140.6 ಅಡಿ (27.231 ಟಿಎಂಸಿ)
  • ಒಳಹರಿವು: 8,117 ಕ್ಯೂಸೆಕ್, ಹೊರಹರಿವು: 212 ಕ್ಯೂಸೆಕ್

ಬಸವಸಾಗರ ಜಲಾಶಯ (ನಾರಾಯಣಪುರ, ಯಾದಗಿರಿ)

  • ಗರಿಷ್ಠ ಮಟ್ಟ: 492.25 ಮೀಟರ್
  • ಇಂದಿನ ನೀರಿನ ಮಟ್ಟ: 488.82 ಮೀಟರ್
  • ಒಳಹರಿವು: 00 ಕ್ಯೂಸೆಕ್, ಹೊರಹರಿವು: 761 ಕ್ಯೂಸೆಕ್

ರಾಜ್ಯಾದ್ಯಂತ ಮುಂಗಾರು ಮಳೆ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಕೆಆರ್‌ಎಸ್, ಭದ್ರಾ ಮತ್ತು ಹೇಮಾವತಿ ಜಲಾಶಯಗಳ ನೀರಿನ ಮಟ್ಟದಲ್ಲಿ ಭಾರೀ ಏರಿಕೆಯಾಗುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Tue, 7 July 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ