AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ: ಕೆಆರ್‌ಎಸ್, ಕಬಿನಿ, ಆಲಮಟ್ಟಿ ಜಲಾಶಯಗಳ ಇಂದಿನ ಸ್ಥಿತಿಗತಿ ಇಲ್ಲಿದೆ

ಕರ್ನಾಟಕದ ಜಲಾಶಯಗಳ (ಸೆಪ್ಟೆಂಬರ್ 16) ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್, ಕಬಿನಿ ಮತ್ತು ಆಲಮಟ್ಟಿ ಅಣೆಕಟ್ಟುಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ. ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯ ಹಂತ ತಲುಪಿದ್ದರೆ, ಕಾವೇರಿ ಕೊಳ್ಳದ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಪ್ರಸ್ತುತ ಒಳಹರಿವು, ಹೊರಹರಿವು ಹಾಗೂ ಒಟ್ಟು ಸಾಮರ್ಥ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ: ಕೆಆರ್‌ಎಸ್, ಕಬಿನಿ, ಆಲಮಟ್ಟಿ ಜಲಾಶಯಗಳ ಇಂದಿನ ಸ್ಥಿತಿಗತಿ ಇಲ್ಲಿದೆ
ಆಲಮಟ್ಟಿ ಜಲಾಶಯ
ಭಾವನಾ ಹೆಗಡೆ
|

Updated on: Sep 16, 2026 | 9:43 AM

Share

ಮುಖ್ಯಾಂಶಗಳು

  • ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಸಂಗ್ರಹ ಮಟ್ಟದಲ್ಲಿ ಭಾರಿ ಏರಿಳಿತ.
  • ಭರ್ತಿಯಾದ ಆಲಮಟ್ಟಿ ಡ್ಯಾಂ, ಕೃಷ್ಣಾ ನದಿಗೆ ಹೆಚ್ಚಿದ ನೀರು ಬಿಡುಗಡೆ.
  • ಕೆಆರ್‌ಎಸ್ ಹಾಗೂ ಕಬಿನಿ ಅಣೆಕಟ್ಟುಗಳಲ್ಲಿ ತಗ್ಗಿದ ನೀರಿನ ಸಂಗ್ರಹ ಪ್ರಮಾಣ.

ಬೆಂಗಳೂರು, ಸೆಪ್ಟೆಂಬರ್ 16: ರಾಜ್ಯದಲ್ಲಿ ಮುಂಗಾರು ಮಳೆಯ ಏರಿಳಿತದಿಂದಾಗಿ ಕಾವೇರಿ ಹಾಗೂ ಕೃಷ್ಣಾ ಜಲಾನಯನ ಪ್ರದೇಶದ ಜಲಾಶಯಗಳ ನೀರಿನ ಮಟ್ಟದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬರುತ್ತಿದೆ. ಉತ್ತರ ಕರ್ನಾಟಕದ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತದಲ್ಲಿದ್ದರೆ, ದಕ್ಷಿಣ ಕರ್ನಾಟಕದ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಹಾಗೂ ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿರುವುದು ಆತಂಕ ಮೂಡಿಸಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳ ನೀರಿನ ಸ್ಥಿತಿಗತಿ ಹಾಗೂ ಇಂದಿನ ಅಧಿಕೃತ ವಿವರ ಇಲ್ಲಿದೆ.

1. ಕೆಆರ್‌ಎಸ್ ಜಲಾಶಯ (ಮಂಡ್ಯ)

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ಮಟ್ಟ: 105.62 ಅಡಿ
  • ಒಳಹರಿವು: 4,934 ಕ್ಯೂಸೆಕ್
  • ಹೊರಹರಿವು: 5,215 ಕ್ಯೂಸೆಕ್
  • ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ಸಂಗ್ರಹ: 27.581 ಟಿಎಂಸಿ

ಕಾವೇರಿ ಕೊಳ್ಳದ ಪ್ರಮುಖ ಜಲಾಶಯವಾದ ಕೆಆರ್‌ಎಸ್‌ನಲ್ಲಿ ನೀರಿನ ಸಂಗ್ರಹ ಕುಸಿತ ಕಂಡಿದೆ.

2. ಕಬಿನಿ ಜಲಾಶಯ (ಮೈಸೂರು)

  • ಗರಿಷ್ಠ ಮಟ್ಟ: 84.00 ಅಡಿ
  • ಇಂದಿನ ನೀರಿನ ಮಟ್ಟ: 68.47 ಅಡಿ
  • ಒಟ್ಟು ಸಾಮರ್ಥ್ಯ: 19.52 ಟಿಎಂಸಿ
  • ಇಂದಿನ ಸಂಗ್ರಹ: 10.94 ಟಿಎಂಸಿ
  • ಲೈವ್ ಕ್ಯಾಪ್: 1.13 ಟಿಎಂಸಿ
  • ಒಳಹರಿವು: 1,091 ಕ್ಯೂಸೆಕ್
  • ಒಟ್ಟು ಹೊರಹರಿವು: 1,000 ಕ್ಯೂಸೆಕ್ (ನದಿಗೆ: 1,000 ಕ್ಯೂಸೆಕ್ | LBC: 0 | RBC: 0)
  • ಮಳೆ: 2 ಮಿ.ಮೀ.

ಮೈಸೂರು ಮತ್ತು ಸುತ್ತಮುತ್ತಲಿನ ಭಾಗಕ್ಕೆ ಕುಡಿಯುವ ನೀರು ಒದಗಿಸುವ ಕಬಿನಿ ಜಲಾಶಯದಲ್ಲೂ ನೀರಿನ ಮಟ್ಟ ಮಧ್ಯಮ ಹಂತದಲ್ಲಿದೆ.

3. ಆಲಮಟ್ಟಿ ಜಲಾಶಯ (ವಿಜಯಪುರ)

  • ಗರಿಷ್ಠ ಮಟ್ಟ: 519.60 ಮೀಟರ್
  • ಇಂದಿನ ನೀರಿನ ಮಟ್ಟ: 519.51 ಮೀಟರ್
  • ಒಳಹರಿವು ಇಲ್ಲ
  • ಹೊರಹರಿವು: 14,212 ಕ್ಯೂಸೆಕ್

ಉತ್ತರ ಕರ್ನಾಟಕದ ಆಲಮಟ್ಟಿ ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಉತ್ತಮ ನೀರಿನ ಮಟ್ಟ ಕಾಯ್ದುಕೊಂಡಿದೆ. ಜಲಾಶಯ ಭರ್ತಿಯಾಗಿದ್ದು ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಸಮಾಧಾನ ತಂದಿದ್ದರೆ, ಕೆಆರ್‌ಎಸ್ ಹಾಗೂ ಕಬಿನಿ ಭಾಗದಲ್ಲಿ ಹೊರಹರಿವು ಹೆಚ್ಚಿ ಒಳಹರಿವು ಕಡಿಮೆಯಿರುವುದರಿಂದ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಆತಂಕ ಎದುರಾಗುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ