AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀ ಯೋಜನೆ ಕಾರಣಕ್ಕೆ ಇತರೆ ಪಿಂಚಣಿಗಳನ್ನು ಕಡಿತ ಮಾಡುತ್ತಾ ಸರ್ಕಾರ? ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ ಇಲ್ಲಿದೆ

ಗೃಹಲಕ್ಷ್ಮೀ ಯೋಜನೆಗಾಗಿ ಇತರ ಪಿಂಚಣಿಗಳನ್ನು ಕಡಿತ ಮಾಡುವುದಿಲ್ಲ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆ ಕಾರಣಕ್ಕೆ ಇತರೆ ಪಿಂಚಣಿಗಳನ್ನು ಕಡಿತ ಮಾಡುತ್ತಾ ಸರ್ಕಾರ? ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ ಇಲ್ಲಿದೆ
ಸಚಿವ ಕೃಷ್ಣ ಭೈರೇಗೌಡ
ಗಣಪತಿ ಶರ್ಮಾ
|

Updated on:Jun 09, 2023 | 2:42 PM

Share

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿಗಳ ಪೈಕಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಯೋಜನೆಯಡಿ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್​​​ದಾರ ಕುಟುಂಬಗಳ ಯಜಮಾನಿಗೆ ಪ್ರತಿ ತಿಂಗಳು 2,000 ರೂ. ನೀಡುವುದಾಗಿ ಸರ್ಕಾರ ಘೋಷಿಸಿದೆ. ಈ ಯೋಜನೆ ನೀಡುವ ಮಹಿಳೆಯರ ಇತರ ಪಿಂಚಣಿಗಳನ್ನು ಸರ್ಕಾರ ಕಡಿತಮಾಡಬಹುದು ಎಂಬ ಆತಂಕ ಜನರಲ್ಲಿ ಮೂಡಿತ್ತು. ಈ ಕುರಿತು ವದಂತಿಗಳೂ ಹಬ್ಬಿದ್ದವು. ಈ ವಿಚಾರವಾಗಿ ಇದೀಗ ಸರ್ಕಾರ ಸ್ಪಷ್ಟನೆ ನೀಡಿದೆ.

ಗೃಹಲಕ್ಷ್ಮೀ ಯೋಜನೆಗಾಗಿ ಇತರ ಪಿಂಚಣಿಗಳನ್ನು ಕಡಿತ ಮಾಡುವುದಿಲ್ಲ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಲಾಖೆ ವ್ಯಾಪ್ತಿಯಲ್ಲಿ ಹಲವು ಪಿಂಚಣಿ ಯೋಜನೆಗಳು ಇವೆ. ವಿಧವೆಯರು, ವೃದ್ಧರು, ಅಂಗವಿಕಲರು, ತೃತೀಯಲಿಂಗಿಗಳು ಸೇರಿ 78 ಲಕ್ಷ ಜನರಿಗೆ ಪ್ರತಿವರ್ಷ ಸರ್ಕಾರದಿಂದ ಪಿಂಚಣಿ ಲಭಿಸುತ್ತಿದೆ. ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯುವವರಿಗೆ ಈ ಮೊದಲೇ ನೀಡುತ್ತಿರುವ ಪಿಂಚಣಿ ಕಡಿತ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ ಸೇರಿದಂತೆ ಸರ್ಕಾರದಿಂದ ಬರುತ್ತಿರುವ ಯಾವುದೇ ಪಿಂಚಣಿ ಮೊಟಕುಗೊಳಿಸುವುದಿಲ್ಲ. ಇವುಗಳ ಜತೆಗೆ ಹೆಚ್ಚುವರಿಯಾಗಿ ಗೃಹಲಕ್ಷ್ಮೀ ಯೋಜನೆಯ ಹಣವೂ ಲಭಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಹಂಚಿಕೆಯಾದ ಸರ್ಕಾರಿ ಭೂಮಿಗಳ ಪರಿಶೀಲನೆ’

ಕಳೆದ 6 ತಿಂಗಳಲ್ಲಿ ಹಂಚಿಕೆಯಾದ ಸರ್ಕಾರಿ ಭೂಮಿಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕೃಷ್ಣ ಭೈರೇಗೌಡ ಹೇಳಿದ್ದಾರೆ. 6 ತಿಂಗಳ ಹಿಂದೆ ತರಾತುರಿಯಲ್ಲಿ ಸರ್ಕಾರಿ ಭೂಮಿ ಹಂಚಿಕೆ ಮಾಡಲಾಗಿದೆ. ಯಾರಿಗೆಲ್ಲ ಭೂಮಿ ಹಂಚಲಾಗಿದೆ ಎಂಬುದರ ಬಗ್ಗೆ ಪರಿಶೀಲಿಸುತ್ತೇವೆ. ಮುಖ್ಯಮಂತ್ರಿ ಸೂಚನೆ ಮೇರೆಗೆ ಭೂಮಿ ಹಂಚಿಕೆ ಬಗ್ಗೆ ಮರುಪರಿಶೀಲನೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆಯಲ್ಲಿ ಬದಲಾವಣೆ, ಏನದು?

ಕೆಐಎಡಿಯಿಂದ ಚಾಣಕ್ಯ ವಿವಿಗೆ ಭೂಮಿ ಮಂಜೂರು ಮಾಡಲಾಗಿದೆ. ಜಮೀನು ಮಂಜೂರು ಬಗ್ಗೆ ಕಂದಾಯ ಇಲಾಖೆ ಪರಿಶೀಲಿಸಲಿದೆ. ಡಿಸೆಂಬರ್​ ಬಳಿಕ ಮಂಜೂರಾದ ಜಮೀನುಗಳ ಬಗ್ಗೆ ಪರಿಶೀಲಿಸುತ್ತೇವೆ. ತರಾತುರಿಯ ತೀರ್ಮಾನಗಳ ಮರುಪರಿಶೀಲನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Fri, 9 June 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್