Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Update: ರಾಜ್ಯದಲ್ಲಿ ಕೊವಿಡ್ 3ನೇ ಅಲೆ ಎದುರಿಸಲು ಹೊಸ ಸಮಿತಿ ರಚನೆಗೆ ತೀರ್ಮಾನ

ಸದ್ಯ ಈಗಿರುವ ಕೊವಿಡ್ ಉಸ್ತುವಾರಿ ಸಚಿವರನ್ನು ಬಿಟ್ಟು ಹೊಸ ಸಮಿತಿ ರಚನೆ ಮಾಡಲಾಗುವುದು. ಈಗ ಇರುವ ಸಮಿತಿಯಲ್ಲಿ ನಾವೆಲ್ಲರೂ ಕೈ ಜೋಡಿಸಿ ಕೆಲಸ ಮಾಡಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.

Big Update: ರಾಜ್ಯದಲ್ಲಿ ಕೊವಿಡ್ 3ನೇ ಅಲೆ ಎದುರಿಸಲು ಹೊಸ ಸಮಿತಿ ರಚನೆಗೆ ತೀರ್ಮಾನ
ಸಚಿವ ಆರ್. ಅಶೋಕ್
Follow us
TV9 Web
| Updated By: guruganesh bhat

Updated on:Jun 28, 2021 | 5:37 PM

ಬೆಂಗಳೂರು: ಕೊವಿಡ್ 3ನೇ ಅಲೆ ನಿರ್ವಹಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರ ಪ್ರತ್ಯೇಕ ಹೊಸ ಸಮಿತಿ ರಚಿಸಲಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ನೀಡಿದ್ದಾರೆ. ಸದ್ಯ ಈಗಿರುವ ಕೊವಿಡ್ ಉಸ್ತುವಾರಿ ಸಚಿವರನ್ನು ಬಿಟ್ಟು ಹೊಸ ಸಮಿತಿ ರಚನೆ ಮಾಡಲಾಗುವುದು. ಈಗ ಇರುವ ಸಮಿತಿಯಲ್ಲಿ ನಾವೆಲ್ಲರೂ ಕೈ ಜೋಡಿಸಿ ಕೆಲಸ ಮಾಡಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಆರೋಪದ ಬಗ್ಗೆ ವೈಯಕ್ತಿಕ ಜಾಹೀರಾತಿಗೆ ಇಲಾಖೆ ಹಣ ಬಳಕೆ ಆರೋಪ ಕೇಳಿಬಂದಿರುವ ಕುರಿತೂ ಪ್ರತಿಕ್ರಿಯೆ ನೀಡಿರುವ ಅವರು, ಸಂಕಷ್ಟ ಬಂದಾಗ ಸುಧಾಕರ್ ನಮ್ಮ ಜೊತೆಗೂಡಿ ಕೆಲಸ ಮಾಡಿದ್ದಾರೆ. ಎಲ್ಲ ಜವಾಬ್ದಾರಿ ಹಂಚಿಕೊಂಡು ನಾನೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎಲ್ಲರೂ ಕೆಲಸ ಮಾಡಿದ್ದೇವೆ. ಈ ಕುರಿತು ಸಚಿವ ಸುಧಾಕರ್ ಜತೆಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು.

ಕೊರೊನಾ 2ನೇ ಅಲೆಗೆ ತುತ್ತಾದ ಶೇ.95.6ರಷ್ಟು ರೋಗಿಗಳು ಗುಣಮುಖ ಕೊರೊನಾ 2ನೇ ಅಲೆಗೆ ತುತ್ತಾದ ಶೇ.95.6ರಷ್ಟು ರೋಗಿಗಳು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ 3,36,73,392 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ. ಪ್ರತಿನಿತ್ಯ ಒಂದೂವರೆ ಲಕ್ಷ ಜನರಿಗೆ ಟೆಸ್ಟ್ ಮಾಡುತ್ತಿದ್ದೇವೆ. ಕಳೆದ 2 ದಿನಗಳಿಂದ 11 ಜಿಲ್ಲೆಗಳಲ್ಲಿ ಕೊವಿಡ್​ನಿಂದ ಸಾವಾಗಿಲ್ಲ. ಡಾ.ರೆಡ್ಡೀಸ್ ಲ್ಯಾಬ್‌ನಿಂದ 2ಜಿ ಔಷಧ ಬಿಡುಗಡೆಯಾಗಿದೆ. ಈ ಔಷಧವನ್ನು ಖರೀದಿ ಮಾಡಬಹುದು ಎಂದು ತಜ್ಞರು ತಿಳಿಸಿದ್ದಾರೆ. 3ನೇ ಅಲೆ ವೇಳೆಗೆ ಅಗತ್ಯ ಪ್ರಮಾಣದ ಔಷಧ ಖರೀದಿ ಸಂಗ್ರಹಿಸಲು ತಯಾರಿ ನಡೆಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ವಿವರಿಸಿದರು.

1001 ವೈದ್ಯರನ್ನು ಹೊರಗುತ್ತಿಗೆಯಲ್ಲಿ ತೆಗೆದುಕೊಂಡಿದ್ದೇವೆ. ಜಿಲ್ಲಾ, ತಾಲೂಕು ಐಸಿಯುನಲ್ಲಿ ಇವರನ್ನು ನೇಮಿಸುತ್ತೇವೆ. 666 ವೈದ್ಯರನ್ನ ಐಸಿಯುನಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. 248 ವೈದ್ಯರನ್ನು NHMರಡಿಯಲ್ಲಿ ನೇಮಕ ಮಾಡಲಾಗಿದೆ. 90 ವೈದ್ಯರನ್ನ ಸಮುದಾಯ ಆರೋಗ್ಯ ವೈದ್ಯರಾಗಿ ನೇಮಕ ಮಾಡಲಾಗಿದೆ. ಒಟ್ಟಾರೆಯಾಗಿ 2,108 ವೈದ್ಯರನ್ನು ನೇಮಕ ಮಾಡಲಾಗಿದೆ. ಇದರ ಜೊತೆಗೆ 1,740 ವೈದ್ಯರ ನೇರ ನೇಮಕಾತಿ ಮಾಡಲಾಗಿದೆ . ಈ ಮೂಲಕ ಒಟ್ಟು 4 ಸಾವಿರ ವೈದ್ಯರನ್ನು ನೇಮಿಸಿಕೊಳ್ಳಲಾಗಿದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಇದನ್ನೂ ಓದಿ: 

ಕೊವಿಡ್ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಸಾಲ ಖಾತರಿ ಯೋಜನೆ ಘೋಷಿಸಿದ ನಿರ್ಮಲಾ ಸೀತಾರಾಮನ್

ಪ್ರವಾಸಿಗರಿಗಾಗಿ ಹೊನ್ನಾವರ-ಗೇರಸೊಪ್ಪಾ ಜಲಯಾನ ಯೋಜನೆ; ಇತಿಹಾಸದ ಕಾಲಗರ್ಭದಿಂದ ಇಲ್ಲಿಯವರೆಗೆ..

(Karnataka Revenue Minister R Ashok says will form new committee to combat Covid 3rd wave in the state)

Published On - 5:10 pm, Mon, 28 June 21

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​