ಕರ್ನಾಟಕದಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತದಲ್ಲಿ ಐವರ ಸಾವು

|

Updated on: Jan 06, 2025 | 10:38 AM

ಕರ್ನಾಟಕದಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳು ಸಂಭವಿಸಿದ್ದು, ಐದು ಜನರು ಮೃತಪಟ್ಟಿದ್ದಾರೆ. ತುಮಕೂರು, ಉತ್ತರ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಈ ಅಪಘಾತಗಳು ನಡೆದಿವೆ. ಲಾರಿ ಮತ್ತು ಕಾರು ಡಿಕ್ಕಿ ಹೊಡೆದ ಘಟನೆಯಲ್ಲಿ ಇಬ್ಬರು, ಲಾರಿ ಪಲ್ಟಿಯಾಗಿ ಇಬ್ಬರು, ಮತ್ತು ಬೈಕ್ ಮತ್ತು ಬೊಲೆರೋ ನಡುವಿನ ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತದಲ್ಲಿ ಐವರ ಸಾವು
ಜಖಂಗೊಂಡಿರುವ ಕಾರು
Follow us on

ಬೆಂಗಳೂರು, ಜನವರಿ 06: ಕರ್ನಾಟಕದ (Karnataka) ಪ್ರತ್ಯೇಕ ಮೂರು ಕಡೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ತುಮಕೂರು (Tumakur) ಜಿಲ್ಲೆಯ ಕೊರಟಗೆರೆ ತಾಲೂಕಿನ ಕಂಬದಹಳ್ಳಿ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಳವನಹಳ್ಳಿಯ ಹರ್ಷಿತ್ ​(24), ಪ್ರವೀಣ್ ​(20) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಹೆದ್ದಾರಿಯ ಸುಳಿಮುರ್ಖಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬಿಹಾರದ ಮೂಲದವರು ಎಂದು ತಿಳಿದುಬಂದಿದೆ. ಮೂವರು ಗಾಯಗೊಂಡಿದ್ದಾರೆ. ಮೂವರನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟಿಕೆ ಸಾಮಾನುಗಳು ತುಂಬಿದ್ದ ಲಾರಿ ಸಾಗರದಿಂದ ಹೊನ್ನಾವರ ಕಡೆ ತೆರಳುತ್ತಿತ್ತು. ಈ ವೇಳೆ, ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೊನ್ನಾವರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಜಾದ್ ನಗರದ ಬಳಿ ಬೈಕ್​ ಮತ್ತು ಬೊಲೆರೋ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಮೃತಪಟ್ಟಿದ್ದಾನೆ. ಗುರುಪುರ ಗ್ರಾಮದ ಸುಹೇಲ್ 22 ಮೃತ ಬೈಕ್​ ಸವಾರ ಎಂದು ಗುರುತಿಸಲಾಗಿದೆ. ಸುಹೇಲ್ ಬೈಕ್​ನಲ್ಲಿ ಗುರುಪುರಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಎರಡು ಭಾಗವಾಗಿದೆ. ಬೊಲೆರೋ ವಾಹನ ಚಾಲಕ ಪರಾರಿಯಾಗಿದ್ದಾನೆ. ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ