ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿ ಡಿಕ್ಕಿ, ದರ್ಗಾಕ್ಕೆ ಹೊರಟಿದ್ದ ದಂಪತಿ ದುರಂತ ಸಾವು

ಕರ್ನಾಟಕದ ವಿವಿಧೆಡೆಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಹಲವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ದಂಪತಿ ಮೃತಪಟ್ಟಿದ್ದಾರೆ. ಕಲಬುರಗಿ, ಕೊಪ್ಪಳ ಮತ್ತು ಧಾರವಾಡದಲ್ಲಿಯೂ ಅಪಘಾತಗಳಲ್ಲಿ ಸಾವು ಸಂಭವಿಸಿದೆ. ಹಲವು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿ ಡಿಕ್ಕಿ, ದರ್ಗಾಕ್ಕೆ ಹೊರಟಿದ್ದ ದಂಪತಿ ದುರಂತ ಸಾವು
ಬೆಂಗಳೂರು ರಸ್ತೆ ಅಪಘಾತ
Edited By:

Updated on: Feb 09, 2025 | 3:41 PM

ಬೆಂಗಳೂರು, ಫೆಬ್ರವರಿ 09: ಉತ್ತರಹಳ್ಳಿಯ (Uttarhalli) ಮಧು ಜಂಕ್ಷನ್ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ ಮೃತಪಟ್ಟಿದ್ದಾರೆ. ಶಭಾನ ಬೇಗಂ ಮತ್ತು ಆಸಿಫ್ ಅಹಮದ್ ಮೃತಪಟ್ಟ ದಂಪತಿ. ದಂಪತಿ ಬೈಕ್​ನಲ್ಲಿ ಟ್ಯಾನರಿ ರೋಡ್​ನಿಂದ ದರ್ಗಾಗೆ ತೆರಳುತ್ತಿದ್ದರು. ಈ ವೇಳೆ ಕಾಂಕ್ರೀಟ್ ಮಿಕ್ಸರ್ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕಾಂಕ್ರೀಟ್ ಮಿಕ್ಸರ್ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿ ಸಿಗ್ನಲ್​ ದಾಟುವಾಗ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು ಮೃತಪಟ್ಟಿದ್ದಾನೆ. ನೂರಾನಿ ಮೊಹಲ್ಲಾ ನಿವಾಸಿ ಅಬ್ದುಲ್ ನಬಿ (65) ಮೃತ ದುದೈವಿ. ಕಲಬುರಗಿ ಸಂಚಾರಿ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳದ ಬಹದ್ದೂರ್ ಬಂಡಿಚುಕ್ಕನಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಸವಾರ ಮೃತಪಟ್ಟಿದ್ದಾರೆ. ಬಹದ್ದೂರ್ ಬಂಡಿ ಗ್ರಾಮದ ಗವಿಸಿದ್ದಪ್ಪ ಮೃತ ದುರ್ದೈವಿ. ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಕುಂಭ ಮೇಳದಿಂದ ಹಿಂದಿರುಗುವಾಗ ಅಪಘಾತ, ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವು

ಧಾರವಾಡ ತಾಲೂಕಿನ ಕ್ಯಾರಕೊಪ್ಪ ಬಳಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಶನಿವಾರ (ಫೆ.08) ಸಂಜೆ ಕ್ರೂಸರ್​ ವಾಹನದಲ್ಲಿ ಅಂತ್ಯ ಸಂಸ್ಕಾರಕ್ಕೆಂದು ಕಲಕೇರಿ ಗ್ರಾಮಕ್ಕೆ ಹೊರಟಿದ್ದರು. ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದೆ. ಅಪಘಾತದಲ್ಲಿ ಮಂಜುಳಾ ವನಹಳ್ಳಿ, ರವಿ ಮಡಿವಾಳರ್ ಎಂಬುವರು ಮೃತಪಟ್ಟಿದ್ದರು. 15 ಜನ ಪ್ರಯಾಣಿಕರು ಗಾಯಗೊಂಡಿದ್ದರು. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 15 ಜನರಲ್ಲಿ ಶಾಂತವ್ವ ಎಂಬುವರು ರವಿವಾರ (ಫೆ.09) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Sun, 9 February 25