School Reopening: ಶಾಲೆಗೆ ಬರಲು ಕೊರೊನಾ ನೆಗೆಟಿವ್ ವರದಿ ಕಡ್ಡಾಯವಲ್ಲ, 1ರಿಂದ 8ನೇ ತರಗತಿಯನ್ನೂ ಶೀಘ್ರ ಆರಂಭಿಸುತ್ತೇವೆ: ಸಚಿವ ಬಿ ಸಿ ನಾಗೇಶ್

ಈ ಸಂದರ್ಭದಲ್ಲಿ ಶಾಲೆ ಆರಂಬಿಸುವುದು ಅಪಾಯವೆಂಬ ಅರಿವಿದೆ. ಆದರೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ತಜ್ಞರ ಅಭಿಪ್ರಾಯದಂತೆ ಶಾಲೆಗಳನ್ನು ಆರಂಭಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.

School Reopening: ಶಾಲೆಗೆ ಬರಲು ಕೊರೊನಾ ನೆಗೆಟಿವ್ ವರದಿ ಕಡ್ಡಾಯವಲ್ಲ, 1ರಿಂದ 8ನೇ ತರಗತಿಯನ್ನೂ ಶೀಘ್ರ ಆರಂಭಿಸುತ್ತೇವೆ: ಸಚಿವ ಬಿ ಸಿ ನಾಗೇಶ್
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on:Aug 20, 2021 | 4:26 PM

ಮೈಸೂರು: ವಿದ್ಯಾರ್ಥಿಗಳು ಶಾಲೆಗೆ ಬರಲು ಕೊವಿಡ್ ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ಮೈಸೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಸ್ಪಷ್ಟಪಡಿಸಿದರು. ಒಂದು ವೇಳೆ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟರೆ ಒಂದು ವಾರ ಆ ತರಗತಿಯನ್ನು ಅಮಾನತು ಮಾಡಲಾಗುತ್ತದೆ. ವಾರದ ಬಳಿಕ ಸ್ಯಾನಿಟೈಸ್ ಮಾಡಿ ಮತ್ತೆ ತರಗತಿ ಆರಂಭ (Karnataka School Reopen)  ಮಾಡಲಾಗುತ್ತದೆ ಎಂದು ಅವರು ಖಚಿತಪಡಿಸಿದರು.

ಈ ಸಂದರ್ಭದಲ್ಲಿ ಶಾಲೆ ಆರಂಬಿಸುವುದು ಅಪಾಯವೆಂಬ ಅರಿವಿದೆ. ಆದರೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ತಜ್ಞರ ಅಭಿಪ್ರಾಯದಂತೆ ಶಾಲೆಗಳನ್ನು ಆರಂಭಿಸುತ್ತಿದ್ದೇವೆ. ಕೊರೊನಾ ಮಕ್ಕಳ ಮೇಲೆ ಅಂಥ ಪರಿಣಾಮ ಬೀರಲ್ಲ. ಪ್ರಾಣಹಾನಿಯಂತಹ ಸಮಸ್ಯೆಗಳು ಎದುರಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವ ಬಿ.ಸಿ.ನಾಗೇಶ್, 1ರಿಂದ 8ನೇ ತರಗತಿಯನ್ನೂ ಶೀಘ್ರದಲ್ಲೇ ಆರಂಭಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಕೊವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸುವುದಿಲ್ಲ. ಅಲ್ಲಿಯ ಮಕ್ಕಳಿಗೆ ಪರ್ಯಾಯ ಶಿಕ್ಷಣದ ಬಗ್ಗೆ ಮಾಹಿತಿ ಸಂಗ್ರಹಿಸಿ ಅಂತಹ ವಿಧಾನ ರೂಪಿಸಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ:  

ಹೇಗಿದ್ದರೂ ಪಾಸ್ ಮಾಡುತ್ತಾರೆ ಎಂಬ ಭಾವನೆ ಮಕ್ಕಳಲ್ಲಿ ಬರುತ್ತಿದೆ; ಶಾಲೆ ಆರಂಭಿಸೋಣ: ಸಭಾಪತಿ ಬಸವರಾಜ ಹೊರಟ್ಟಿ

ಕೊರೊನಾ ಮೂರನೇ ಅಲೆ ಆತಂಕ; ಶಾಲೆ ತೆರೆಯದಂತೆ ರಾಜ್ಯ ಸರ್ಕಾರಕ್ಕೆ ಫನಾ ಸಲಹೆ

(Karnataka School reopening Education Minister BC Nagesh says Corona Negative report is not mandatory for students to attend school)

Published On - 4:24 pm, Fri, 20 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ