AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

School Reopening: ಕೊವಿಡ್ 3ನೇ ಅಲೆ ಕುರಿತು ಡಾ.ದೇವಿಪ್ರಸಾದ್ ಶೆಟ್ಟಿ ನಾಳೆ ನೀಡುವ ವರದಿ ಪರಿಶೀಲಿಸಿ ಶಾಲೆ ಆರಂಭದ ನಿರ್ಧಾರ: ಸಚಿವ ಸುರೇಶ್ ಕುಮಾರ್

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಡೆಸಿದ ಅಧ್ಯಯನದಲ್ಲಿ ಶಾಲೆಗಳು ನಡೆಯದ ಕಾರಣ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ಹೊರಗುಳಿದು ಶೈಕ್ಷಣಿಕ ಚಟುವಟಿಕೆಗಳಿಂದ ಹೊರಗುಳಿದಿದ್ದಾರೆ ಎಂಬ ಅಂಶವು ಬಹಿರಂಗಗೊಂಡಿದೆ.

School Reopening: ಕೊವಿಡ್ 3ನೇ ಅಲೆ ಕುರಿತು ಡಾ.ದೇವಿಪ್ರಸಾದ್ ಶೆಟ್ಟಿ ನಾಳೆ ನೀಡುವ ವರದಿ ಪರಿಶೀಲಿಸಿ ಶಾಲೆ ಆರಂಭದ ನಿರ್ಧಾರ: ಸಚಿವ ಸುರೇಶ್ ಕುಮಾರ್
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on:Jun 21, 2021 | 7:06 PM

Share

ಬೆಂಗಳೂರು: ಕೊವಿಡ್ 3ನೇ ಅಲೆಗೆ ಸಂಬಂಧಿಸಿದಂತೆ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದ ಸಮಿತಿ ನಾಳೆ ಮಧ್ಯಾಹ್ನ ಸಿಎಂ ಯಡಿಯೂರಪ್ಪಗೆ ಮಧ್ಯಂತರ ವರದಿ ಸಲ್ಲಿಸಲಿದೆ. ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿ ಶಾಲಾ ಚಟುವಟಿಕೆಗಳ‌ ಕುರಿತಂತೆ ಮುಂದಿನ‌ ದಿನಗಳಲ್ಲಿ  ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌‌ಕುಮಾರ್ ತಿಳಿಸಿದ್ದಾರೆ.

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಡೆಸಿದ ಅಧ್ಯಯನದಲ್ಲಿ ಶಾಲೆಗಳು ನಡೆಯದ ಕಾರಣ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ಹೊರಗುಳಿದು ಶೈಕ್ಷಣಿಕ ಚಟುವಟಿಕೆಗಳಿಂದ ಹೊರಗುಳಿದಿದ್ದಾರೆ ಎಂಬ ಅಂಶವು ಬಹಿರಂಗಗೊಂಡಿದೆ. ಈ ಅಧ್ಯಯನ ವರದಿಯ ಬೆಳಕಿನಲ್ಲಿ ನಾವು ಈ ವರ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಹೆಚ್ಚಿನ ರೀತಿಯ ಗಮನಹರಿಸುವ ಸವಾಲು ನಮ್ಮ ಮುಂದಿದೆ. ಸರ್ಕಾರಕ್ಕೆ ಶಾಲೆಗಳನ್ನು ತೆರೆಯಬೇಕೆಂಬ ಉತ್ಸುಕತೆ, ತರಗತಿ ಕಲಿಕೆ ಮುಖ್ಯವೆನ್ನುವುದು ಸಾಮಾನ್ಯ ಅಭಿಪ್ರಾಯವಾಗಿದ್ದರೂ ಹಲವಾರು ಅಂಶಗಳನ್ನು ಗಮನಿಸಬೇಕಾದ ಅನಿವಾರ್ಯತೆ ಇದೆ. ಹಾಗಾಗಿ  ಡಾ.ದೇವಿಶೆಟ್ಟಿ ಅವರು ಸಲ್ಲಿಸಲಿರುವ ವರದಿಯನ್ನು ಪರಿಪೂರ್ಣವಾಗಿ ಗಮನಿಸಿ ಕ್ಲಪ್ತ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.

ಹೊಸ ಶಿಕ್ಷಣ ನೀತಿ ಜಾರಿಗೊಳಿಸುತ್ತಿರುವ ಈ ಸಂದರ್ಭದಲ್ಲಿ ನಮ್ಮ ಶಿಕ್ಷಕ ತರಬೇತಿ ಸಂಸ್ಥೆಗಳು ಬಲಿಷ್ಠಗೊಳ್ಳಬೇಕಾಗಿದ್ದು, ಆ ನಿಟ್ಟಿನಲ್ಲಿ ಡಿ.ಎಸ್‍.ಇ.ಆರ್.ಟಿ ಸೇರಿದಂತೆ   ಸಂಶೋಧನಾ  ಹಾಗೂ ತರಬೇತಿ  ಸಂಸ್ಥೆಗಳು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಹೆಚ್ಚಿನ ಗಮನಹರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ವಿದ್ಯಾರ್ಥಿಗಳಿಗೆ ಆನ್​ಲೈನ್ ಕ್ಲಾಸ್​ಗಳಿಗೆ ಕೂರಲು ಮೊಬೈಲ್ ನೆಟ್​ವರ್ಕ್, ಅಂತರ್ಜಾಲ ಸಮಸ್ಯೆ ಪರಿಹರಿಸಿ: ಸಚಿವ ಸುರೇಶ್ ಕುಮಾರ್ ಮನವಿ

ಸೋಮವಾರ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯದ ಪ್ರಗತಿ ಪರಾಮರ್ಶನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿಎಸ್‍ಇಆರ್‍ಟಿ ಸಂಸ್ಥೆಯು ಶಿಕ್ಷಣ ಸಂಶೋಧನೆಯಲ್ಲಿ ಪ್ರಧಾನವಾದ  ಜವಾಬ್ದಾರಿ ಹೊಂದಿದ್ದು, ಈ ಸ್ವಾಯತ್ತ ಸಂಸ್ಥೆ  ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು  ಸಂಶೋಧನಾ ವಿದ್ವಾಂಸರ ಸೇವೆಯನ್ನು ಪಡೆಯಲು ಆಲೋಚಿಸಲಾಗಿದೆ ಎಂದರು.

ಗುಣಾತ್ಮಕ ಶಿಕ್ಷಣದ ಪರಿಕಲ್ಪನೆ ಸಾಕಾರವಾಗಬೇಕಾದಲ್ಲಿ ತರಬೇತಿ ಪ್ರಕ್ರಿಯೆ ವಸ್ತುನಿಷ್ಠವಾಗಬೇಕಿದೆ. ತರಬೇತಿ ಮೌಲ್ಯಮಾಪನ ವ್ಯವಸ್ಥೆ ಬಲಗೊಳ್ಳಬೇಕಿದೆ. ಶಿಕ್ಷಣ ಗುಣಮಟ್ಟ ಸುಧಾರಣೆಯ ಹಿನ್ನೆಲೆಯಲ್ಲಿ ಈ ತರಬೇತಿಯ ಫಲಿತಾಂಶ ಶಾಲಾ ತರಗತಿಯಲ್ಲಿ  ಪ್ರತಿಫಲನಗೊಂಡು  ನಮ್ಮ ಮಕ್ಕಳು ಅದರ ಪ್ರಯೋಜನವನ್ನು ಪಡೆಯುವಂತಾಗಬೇಕು. ಈ ತರಬೇತಿಯ ಅನುಪಾಲನಾ ವ್ಯವಸ್ಥೆ ಮೇಲಿಂದ ಮೇಲೆ ನಡೆಯುವಂತಹ ವ್ಯವಸ್ಥೆ ರೂಪುಗೊಳ್ಳಲು ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು.

ಪ್ರಸ್ತುತ ವ್ಯವಸ್ಥೆಯಲ್ಲಿ ತರಬೇತಿಗಳಷ್ಟೇ ನಡೆಯುತ್ತಿವೆ.  ಸಂಶೋಧನೆಗಳು ಅಷ್ಟಾಗಿ ಕಂಡುಬರುತ್ತಿಲ್ಲ. ಶಿಕ್ಷಣದ ಗುಣಮಟ್ಟ ಸುಧಾರಣೆಗೆ ತರಬೇತಿಗಳಷ್ಟೇ ಸಾಕಾಗದು. ಬದಲಾದ ಕಾಲಮಾನಕ್ಕನುಗುಣವಾಗಿ ನಮ್ಮ ಸಂಶೋಧನಾ ಸಂಸ್ಥೆಗಳೂ ಬದಲಾಗಬೇಕಿದೆ. ಹೊಸ ಶಿಕ್ಷಣ ನೀತಿ ಜಾರಿಗೊಳಿಸುತ್ತಿರುವ ಈ ಸಂದರ್ಭದಲ್ಲಿ ಇಂತಹ ಸಂಶೋಧನಾ ಮತ್ತು ತರಬೇತಿ ಸಂಸ್ಥೆಯನ್ನು ಪುನರ್‍ರೂಪಿಸಬೇಕಾದ ಅಗತ್ಯವಿದ್ದು, ಈ ಕುರಿತು ಅಗತ್ಯ ಕ್ರಿಯಾ ಯೋಜನೆ ರೂಪಿಸಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪರೀಕ್ಷೆಗಳನ್ನು ರದ್ದುಪಡಿಸಲು ಉನ್ನತ ಶಿಕ್ಷಣ ಇಲಾಖೆಗೆ ವಿದ್ಯಾರ್ಥಿಗಳಿಂದ ಒತ್ತಡ

ವಿದ್ಯಾರ್ಥಿಗಳಿಗೆ ಆನ್​ಲೈನ್ ಕ್ಲಾಸ್​ಗಳಿಗೆ ಕೂರಲು ಮೊಬೈಲ್ ನೆಟ್​ವರ್ಕ್, ಅಂತರ್ಜಾಲ ಸಮಸ್ಯೆ ಪರಿಹರಿಸಿ: ಸಚಿವ ಸುರೇಶ್ ಕುಮಾರ್ ಮನವಿ

(Karnataka School reopening will decide by Dr Deviprasad Shetty report on Covid 3rd wave says Education minister Suresh Kumar)

Published On - 7:03 pm, Mon, 21 June 21

ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​