AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ: ಇಲ್ಲಿದೆ ಮಾರ್ಗಸೂಚಿ

ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು, ಸರ್ಕಾರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳೆ ಮಕ್ಕಳ ರಕ್ಷಣೆಗಾಗಿ ಸಮಗ್ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ. ಧ್ವಜಾರೋಹಣ, ವಿದ್ಯಾರ್ಥಿ ಸಾರಿಗೆ, ಆಹಾರ ಶುಚಿತ್ವ, ಬೆಂಕಿ ಅವಘಡಗಳ ತಡೆಗಟ್ಟುವಿಕೆ ಮತ್ತು ತುರ್ತು ಪರಿಸ್ಥಿತಿ ನಿರ್ವಹಣೆ ಕುರಿತು ಸೂಚನೆ ನೀಡಲಾಗಿದೆ.

ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ: ಇಲ್ಲಿದೆ ಮಾರ್ಗಸೂಚಿ
ಪ್ರಾತಿನಿಧಿಕ ಚಿತ್ರ
Vinay Kashappanavar
| Edited By: |

Updated on: Jan 23, 2026 | 10:23 PM

Share

ಬೆಂಗಳೂರು, ಜನವರಿ 23: ಶಾಲೆಗಳಲ್ಲಿ ವಿದ್ಯಾರ್ಥಿಗಳ (students) ಸುರಕ್ಷತೆ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ (education department) ಕೆಲವು ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು, ಸಾಂಸ್ಕೃತಿಕ, ಆಡಳಿತಾತ್ಮಕ ಮತ್ತು ಸರ್ಕಾರಿ ಕಾರ್ಯಕ್ರಮಗಳ ಆಯೋಜನೆ ವೇಳೆ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಶಾಲಾ ಕಾಲೇಜುಗಳು ಕಡ್ಡಾಯವಾಗಿ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಗಿದೆ.

ಮಾರ್ಗಸೂಚಿಗಳು ಏನೇನು?

  • ಧ್ವಜಾರೋಹಣ ವೇಳೆ ವಿದ್ಯುತ್ ತಂತಿ ಹಾದುಹೋಗದಂತೆ ಕ್ರಮಕೈಗೊಳ್ಳುವುದು. ಧ್ವಜ ಏರಿಸುವಾಗ, ಇಳಿಸುವಾಗ ಮಕ್ಕಳನ್ನು ಬಳಸಿಕೊಳ್ಳಬಾರದು. ಧ್ವಜಾರೋಹಣ ವೇಳೆ ಅನಿರೀಕ್ಷಿತವಾಗಿ ಬಾವುಟ ಸಿಕ್ಕಿಹಾಕಿಕೊಂಡರೆ ಧ್ವಜಸ್ತಂಭಕ್ಕೆ ಮಕ್ಕಳನ್ನು ಹತ್ತಿಸಬಾರದು.
  • ಮಕ್ಕಳ ಕವಾಯತು ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ, ಮಕ್ಕಳು ಕುಳಿತುಕೊಳ್ಳುವ ಸ್ಥಳಗಳು ಸುರಕ್ಷಿತವಾಗಿರುವ ಬಗ್ಗೆ ಆಗಿಂದಾಗ್ಗೆ ಪರಿಶೀಲಿಸುವುದು.

ಇದನ್ನೂ ಓದಿ: ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ಖಾಸಗಿ ಬಸ್​​​ಗಳಿಂದ ದುಪ್ಪಟ್ಟು ದರ ವಸೂಲಿ

  • ಮಕ್ಕಳನ್ನು ಕಾರ್ಯಕ್ರಮ, ಸ್ಪರ್ಧೆಗಳಿಗೆ ಕರೆದುಕೊಂಡು ಹೋಗುವ ಮತ್ತು ಹಿಂದಿರುಗಿ ಕರೆತರುವ ವಾಹನಗಳ ಬಗ್ಗೆ ಪರಿಶೀಲಿಸಬೇಕು.
  • ವಾಹನ ಚಾಲಕರು ವೇಗಮಿತಿಯಲ್ಲಿ ಚಲಿಸುವಂತೆ ಸೂಚನೆ ನೀಡುವುದು. ಪ್ರಮುಖವಾಗಿ ಚಾಲಕರು ಮದ್ಯಪಾನ ಮಾಡಿರದ ಬಗ್ಗೆ ಖಚಿತಪಡಿಸಿಕೊಳ್ಳುವುದು ಮತ್ತು ವಾಹನದ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕರೆದುಕೊಂಡು ಹೋಗಬಾರದು.
  • ಕಾರ್ಯಕ್ರಮ ನಡೆಸುವ ಸ್ಥಳಗಳಲ್ಲಿ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು.
  • ಮಕ್ಕಳು ಸೇರಿದಂತೆ ಸಾರ್ವಜನಿಕರ ಸಂಪರ್ಕಕ್ಕೆ ಬಾರದಂತೆ ವಿದ್ಯುತ್ ತಂತಿಗಳನ್ನು ಅಳವಡಿಸಲು ತಂತ್ರಜ್ಞರಿಗೆ ಸೂಚಿಸುವುದು.
  • ವಿದ್ಯುತ್ ತಂತಿಗಳು ಇರುವಲ್ಲಿ ಮಳೆ ನೀರು ಸೋರದಂತೆ ಮತ್ತು ಇತರೆ ಯಾವುದೇ ಮೂಲದಿಂದ ನೀರು ಹರಿಯದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು.
  • ಮಕ್ಕಳಿಗೆ ನೀಡುವ ನೀರು, ಪಾನೀಯ, ಆಹಾರದ ಶುಚಿತ್ವದ ಬಗ್ಗೆ ಪರಿಶೀಲಿಸುವುದು. ಆಹಾರ ತಯಾರಿಸುವ ಸ್ಥಳಗಳಿಗೆ ಮಕ್ಕಳ ಪ್ರವೇಶವನ್ನು ನಿರ್ಬಂಧಿಸುವುದು.
  • ಗ್ಯಾಸ್ ಹಾಗೂ ಒಲೆಗಳು ಸಮರ್ಪಕವಾಗಿರುವ ಬಗ್ಗೆ ಪರಿಶೀಲಿಸಿ ನಿಗಾವಹಿಸುವುದು. ಯಾವುದೇ ರೀತಿ ಬೆಂಕಿ ಅವಘಡವಾಗದಂತೆ ಕ್ರಮವಹಿಸುವುದು.
  • ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸಮರ್ಪಕವಾಗಿ ವಾಹನ ನಿಲುಗಡೆ ಮಾಡಲು ಸೂಚನಾ ಫಲಕಗಳನ್ನು ಅಳವಡಿಸುವುದು. ಕಾರ್ಯಕ್ರಮದ ಸ್ಥಳದಿಂದ ಕನಿಷ್ಟು 100 ಮೀಟರ್ ದೂರದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸುವುದು.

ಇದನ್ನೂ ಓದಿ: ಸತತ 3 ದಿನ ರಜೆ: ಪ್ರಯಾಣಿಕರಿಗಾಗಿ KSRTC ಜತೆ BMTC ಬಸ್ಸುಗಳ ಸಂಚಾರ

  • ಅನಿರೀಕ್ಷಿತವಾಗಿ ಸಂಭವಿಸಬಹುದಾದ ಸನ್ನಿವೇಶಗಳನ್ನು ಎದುರಿಸುವ ಕುರಿತು ಮಕ್ಕಳಿಗೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಹಿರಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೂಕ್ತ ತರಬೇತಿ ನೀಡುವುದು.
  • ಸ್ಥಳೀಯ ಆಡಳಿತಗಳು ಮಕ್ಕಳ ಸುರಕ್ಷತೆ ಕುರಿತು ಗಮನ ಹರಿಸುವುದು. ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸ್ಥಳೀಯ ಪೊಲೀಸ್, ವೈದ್ಯಕೀಯ ವ್ಯವಸ್ಥೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಆಡಳಿತಕ್ಕೆ ಮಕ್ಕಳ ಕಾರ್ಯಕ್ರಮದ ಕುರಿತು ಕಡ್ಡಾಯವಾಗಿ ಮಾಹಿತಿ ಒದಗಿಸುವುದು. ಯಾವುದೇ ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಲು ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ತಿಳಿಸುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!