School Reopening: ಶಾಲೆಗಳ ಆರಂಭಕ್ಕೆ ತಜ್ಞರಿಂದ ಸಲಹೆ; ಸಮ, ಬೆಸ ಮಾದರಿಯಲ್ಲಿ ಆರಂಭ

Karnataka Schools Reopen: ಮಾಸ್ಕ್ ಕಡ್ಡಾಯವಾಗಿದ್ದು, ಸರ್ಕಾರವೇ ಮಾಸ್ಕ್ ನೀಡಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಕಡ್ಡಾಯವಾಗಿ ಶಿಕ್ಷಕರು, ಶಾಲೆಯ ಇತರೆ ಸಿಬ್ಬಂದಿಗೆ ಲಸಿಕೆ ಹಾಕಿಸಿಕೊಳ್ಳಬೇಕು. ಶಾಲಾ ಆವರಣಕ್ಕೆ ಅನ್ಯರಿಗೆ ಪ್ರವೇಶ ನಿರ್ಬಂಧಿಸಬೇಕು. ಆರೋಗ್ಯವಂತ ಮಕ್ಕಳು ಮಾತ್ರ ಶಾಲೆಗೆ ಬರಬೇಕು.

School Reopening: ಶಾಲೆಗಳ ಆರಂಭಕ್ಕೆ ತಜ್ಞರಿಂದ ಸಲಹೆ; ಸಮ, ಬೆಸ ಮಾದರಿಯಲ್ಲಿ ಆರಂಭ
ಸಾಂಕೇತಿಕ ಚಿತ್ರ
Follow us
| Updated By: sandhya thejappa

Updated on:Jun 22, 2021 | 10:12 AM

ಬೆಂಗಳೂರು: ಕೊರೊನಾ ಕಾರಣ ಬಂದ್ ಆಗಿದ್ದ ಶಾಲೆಗಳನ್ನು ಆರಂಭಿಸುವುದಕ್ಕೆ ತಜ್ಞರು ಸಲಹೆಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲು ಡಾ.ದೇವಿಪ್ರಸಾದ್ ಶೆಟ್ಟಿ ಸಲಹೆ ನೀಡಿದ್ದಾರೆ. ಈ ಬಗ್ಗೆ ಡಾ.ದೇವಿ ಪ್ರಸಾದ್ ಶೆಟ್ಟಿ ಇಂದು (ಜೂನ್ 22) ಮಧ್ಯಾಹ್ನ 12.30ಕ್ಕೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪಗೆ ವರದಿ ಸಲ್ಲಿಸಲಿದ್ದಾರೆ. ಸಮ, ಬೆಸ ಮಾದರಿಯಲ್ಲಿ ತರಗತಿಗಳನ್ನು ಆರಂಭಿಸುವುದಕ್ಕೆ ಸಲಹೆಯನ್ನು ನೀಡಿದ ತಜ್ಞರು, ಮೊದಲ ಹಂತದಲ್ಲಿ ಕಾಲೇಜುಗಳನ್ನು ಆರಂಭಿಸುವುದು. ಎರಡನೇ ಹಂತದಲ್ಲಿ 7ರಿಂದ 10ನೇ ತರಗತಿ, ಮೂರನೇ ಹಂತದಲ್ಲಿ 5ರಿಂದ 7ನೇ ತರಗತಿ ಆರಂಭಿಸಬೇಕು ಎಂದು ಹೇಳಿದ್ದಾರೆ.

ಮಾಸ್ಕ್ ಕಡ್ಡಾಯವಾಗಿದ್ದು, ಸರ್ಕಾರವೇ ಮಾಸ್ಕ್ ನೀಡಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಕಡ್ಡಾಯವಾಗಿ ಶಿಕ್ಷಕರು, ಶಾಲೆಯ ಇತರೆ ಸಿಬ್ಬಂದಿಗೆ ಲಸಿಕೆ ಹಾಕಿಸಿಕೊಳ್ಳಬೇಕು. ಶಾಲಾ ಆವರಣಕ್ಕೆ ಅನ್ಯರಿಗೆ ಪ್ರವೇಶ ನಿರ್ಬಂಧಿಸಬೇಕು. ಆರೋಗ್ಯವಂತ ಮಕ್ಕಳು ಮಾತ್ರ ಶಾಲೆಗೆ ಬರಬೇಕು. ವಾರಕ್ಕೊಮ್ಮೆ ಸ್ಥಳೀಯ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಬೇಕು. ಮಕ್ಕಳಿಗೆ ಸರ್ಕಾರವೇ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಕೊರೊನಾ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಶಾಲಾ ಆವರಣ, ಸುತ್ತಮುತ್ತ ತಿನಿಸು ಮಾರಾಟವನ್ನು ನಿಷೇಧಿಸಬೇಕು. ಪೋಷಕರು ಸಮ್ಮತಿಸಿದರೆ ಮಕ್ಕಳನ್ನ ಶಾಲೆಗೆ ಕರೆತರುವುದು. ಮಕ್ಕಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಅಲ್ಲದೆ ಆನ್‌ಲೈನ್ ಮತ್ತು ಆಫ್‌ಲೈನ್ ಎರಡು ಮಾದರಿಯ ಕಲಿಕೆಗೆ ಅವಕಾಶ ನೀಡಬಹುದು. ಮಕ್ಕಳಿಗೆ ಸರ್ಕಾರದಿಂದ ಪೌಷ್ಟಿಕಾಂಶ ಆಹಾರ ನೀಡಬೇಕು. ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಟವನ್ನು ಆಡಿಸಬೇಕು. ಊಟವನ್ನ ಸ್ಥಳೀಯ ಮಟ್ಟದಲ್ಲಿ ನೀಡಬೇಕೆಂದು ತಜ್ಞರು ತಿಳಿಸಿದ್ದಾರೆ.

ಶಾಲೆಗಳಲ್ಲಿ ದೈಹಿಕ ಅಂತರಕ್ಕೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳ ಒಬ್ಬರ ವಸ್ತುಗಳು ಒಬ್ಬರು ಮುಟ್ಟದಂತೆ ನಿಗಾವಹಿಸಬೇಕು. ದಿನದಲ್ಲಿ 2ರಿಂದ 3 ಗಂಟೆ ಮಾತ್ರ ತರಗತಿ ನಡೆಯಬೇಕು. 12ರಿಂದ 18 ವರ್ಷದ ಮಕ್ಕಳಿಗೆ ಆದಷ್ಟು ಬೇಗ ಲಸಿಕೆ ನೀಡುವುದಕ್ಕೆ ಅನುಮೋದನೆ ಕೊಡುವುದು ಉತ್ತಮ. ಈ ನಿಯಮ ಪಾಲಿಸದಿದ್ದರೆ ಮಕ್ಕಳಿಗೆ ಹೆಚ್ಚು ಅಪಾಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ 18 ವರ್ಷದೊಳಗಿನ 2.38 ಕೋಟಿ ಮಕ್ಕಳಿದ್ದಾರೆ. ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಸೋಂಕು ಹರಡುತ್ತದೆ. 3.40 ಲಕ್ಷ ಮಕ್ಕಳಿಗೆ ಸೋಂಕು ಹರಡುತ್ತದೆ ಎಂದು ಅಂದಾಜಿಸಲಾಗಿದೆ. ಮಕ್ಕಳಿಗೆ ಚಿಕಿತ್ಸೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಸುಮಾರು 6,801 ಐಸಿಯು, ಹೆಚ್​ಡಿಯು, ವೆಂಟಿಲೇಟರ್ ಬೆಡ್ 23,804 ಸಾಮಾನ್ಯ ಬೆಡ್‌ಗಳು ಬೇಕಾಗಬಹುದು. ಕೊವಿಡ್ ಕೇರ್ ಸೆಂಟರ್‌ಗಳಲ್ಲಿ 43,000 ಬೆಡ್ ಅಗತ್ಯವಿದೆ ಎಂದು ತಿಳಿಸಿದ ಡಾ.ದೇವಿಪ್ರಸಾದ್ ಶೆಟ್ಟಿ, ಮಧ್ಯಂತರ ವರದಿ ಕೊಟ್ಟಿದ್ದಾರೆ. ಈ ಬಗ್ಗೆ ಚರ್ಚೆ ಮಾಡಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ.

ಇದನ್ನೂ ಓದಿ

ಖಾಸಗಿ ಶಾಲೆಗಳು, ಪೋಷಕರ ನಡುವೆ ಫೀಸ್ ಫೈಟ್; ಫೇಸ್​ಬುಕ್​ನಲ್ಲಿ ಸಚಿವ ಸುರೇಶ್​ ಕುಮಾರ್​ ಪ್ರತಿಕ್ರಿಯೆ

School Reopening: ಕೊವಿಡ್ 3ನೇ ಅಲೆ ಕುರಿತು ಡಾ.ದೇವಿಪ್ರಸಾದ್ ಶೆಟ್ಟಿ ನಾಳೆ ನೀಡುವ ವರದಿ ಪರಿಶೀಲಿಸಿ ಶಾಲೆ ಆರಂಭದ ನಿರ್ಧಾರ: ಸಚಿವ ಸುರೇಶ್ ಕುಮಾರ್

(Karnataka Schools Reopen guideline advised by experts amid Karnataka Unlock and here are the details in Kannada)

Published On - 9:54 am, Tue, 22 June 21