Karnataka 2nd PUC Result 2021: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಸುರೇಶ್ ಕುಮಾರ್

Karnataka 2nd PUC Result 2021: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2021 ಇಂದು (ಜುಲೈ 20) ಪ್ರಕಟವಾಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಪ್ರಕಟಿಸಿದ್ದಾರೆ.

Karnataka 2nd PUC Result 2021: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಸುರೇಶ್ ಕುಮಾರ್
ಶಿಕ್ಷಣ ಸಚಿವ ಸುರೇಶ್ ಕುಮಾರ್
Follow us
| Updated By: ganapathi bhat

Updated on:Jul 20, 2021 | 4:57 PM

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಪ್ರಕಟಿಸಿದ್ದಾರೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಪಿಯುಸಿ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಆಧಾರದ ಮೇಲೆ ಪಿಯುಸಿ ಫಲಿತಾಂಶ ನೀಡಿದ್ದೇವೆ. ಅನೇಕ ವಿದ್ಯಾರ್ಥಿಗಳು ಎಕ್ಸಾಂ ಮಾಡುವಂತೆ ಮನವಿ ಮಾಡಿದ್ರು. ಆದರೆ, ಫಲಿತಾಂಶಕ್ಕೆ ಮಾರ್ಗಸೂಚಿ ತಂತ್ರ ಅನುಸರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಯಾವೊಬ್ಬ ವಿದ್ಯಾರ್ಥಿಗೂ ಅನ್ಯಾಯವಾಗದಂತೆ ಫಲಿತಾಂಶ ನೀಡಲಾಗಿದೆ ಎಂದು ಹೇಳಿದ್ದಾರೆ.  SSLC+1st PUC+ ದ್ವಿತೀಯ ಪಿಯುಸಿ ಕೃಪಾಂಕ ಪರಿಗಣನೆ ಮಾಡಲಾಗಿದೆ. ಪ್ರತಿಭೆಗೆ ಅನುಗುಣವಾಗಿ ಫಲಿತಾಂಶ ನೀಡಲಾಗಿದೆ. ಪ್ರಾಮಾಣಿಕ ಫಲಿತಾಂಶಕ್ಕೆ ಮುಂದಾಗಿದ್ದೇವೆ. ಫಲಿತಾಂಶವನ್ನು ಮೊಬೈಲ್​ಗೆ ಕೂಡ ಕಳಿಸಲಾಗುತ್ತೆ. ಫಲಿತಾಂಶಕ್ಕೆ ಒಪ್ಪಿಗೆ ಇಲ್ಲ ಅಂದ್ರೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅದರಂತೆ, 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​ನಲ್ಲಿ ತೇರ್ಗಡೆ ಆಗಿದ್ದಾರೆ. 4,50,706 ಡಿಸ್ಟಿಂಕ್ಷನ್​, ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​, ಪ್ರಥಮ ದರ್ಜೆಯಲ್ಲಿ ಹಾಗೂ 2,52,056 ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್​, ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ. 1,47,055 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. 68,729 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈ ಬಗ್ಗೆ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಕೊರೊನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಎಸ್ಎಸ್ಎಲ್​ಸಿ ಫಲಿತಾಂಶ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶವನ್ನು ನೀಡಲಾಗುತ್ತದೆ. ಗ್ರೇಡ್ ಬದಲಿಗೆ ಅಂಕಗಳ ಆಧಾರದಲ್ಲಿ ಫಲಿತಾಂಶ ನೀಡಲಾಗಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುತ್ತಿರುವುದು ಇದೇ ಮೊದಲ ಬಾರಿ ಆಗಿದೆ.

ಇದನ್ನೂ ಓದಿ: Karnataka 2nd PUC Result 2021: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ; ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2021 ಜುಲೈ 20, ಸಂಜೆ 4.30ಕ್ಕೆ ಪ್ರಕಟ: ಶಿಕ್ಷಣ ಸಚಿವ ಸುರೇಶ್ ಕುಮಾರ್

Published On - 4:13 pm, Tue, 20 July 21

‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ