AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವೇನು? ಹಿರಿಯ ನಾಯಕರೊಬ್ಬರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

ಎರಡು ದಿನಗಳ ಹಿಂದೆ ರಾಜ್ಯದ ಹಿರಿಯ ನಾಯಕರೊಬ್ಬರು ಮೋದಿ ಅವರಿಗೆ ಸೋಲಿನ ಕಾರಣಗಳ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯ ಪ್ರಮುಖ ನಾಯಕರೊಬ್ಬರು ಸುಮಾರು ಒಂದೂವರೆಗೆ ಗಂಟೆ ಕಾಲ ಮೋದಿ ಜತೆ ಮಾತುಕತೆ ನಡೆಸಿದ್ದಾರೆ.

ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವೇನು? ಹಿರಿಯ ನಾಯಕರೊಬ್ಬರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ
ಪ್ರಧಾನಿ ಮೋದಿ
Ganapathi Sharma
|

Updated on: May 29, 2023 | 2:58 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections) ಹೀನಾಯ ಸೋಲು ಅನುಭವಿಸಿರುವ ಬಿಜೆಪಿಗೆ (BJP) ಇನ್ನೂ ಆಘಾತದಿಂದ ಹೊರಬರಲಾಗಿಲ್ಲ. ಈಗಾಗಲೇ ಬೆಂಗಳೂರಿನಲ್ಲಿ ಒಂದು ಹಂತದ ಆತ್ಮಾವಲೋಕನ ಸಭೆ ನಡೆದಿದ್ದು, ಸೋಲಿಗೆ ಕಾರಣಗಳು ಏನಿರಬಹುದು ಎಂಬುದನ್ನು ಚರ್ಚಿಸಲಾಗಿದೆ. ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿಗಳು, ಬಿಜೆಪಿ ವಿರುದ್ಧ ಮಾಡಿರುವ 40% ಕಮಿಷನ್ ಆರೋಕ್ಕೆ ಸೂಕ್ತ ತಿರುಗೇಟು ನೀಡದಿರುವುದು ಸೇರಿದಂತೆ ಹಲವು ಕಾರಣಗಳನ್ನು ಸೋಲಿಗೆ ಪಟ್ಟಿ ಮಾಡಲಾಗಿದೆ. ಆದಾಗ್ಯೂ, ಅರ್ಹರಿಗೆ ಟಿಕೆಟ್ ನೀಡದಿರುವುದು ಕೂಡ ಹಲವು ಕ್ಷೇತ್ರಗಳಲ್ಲಿ ಸೋಲಿಗೆ ಕಾರಣ ಎಂಬ ಮಾತು ಪಕ್ಷದ ಆಂತರಿಕ ವಲಯದಲ್ಲಿ ಕೇಳಿಬರುತ್ತಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ನಾಯಕರೊಬ್ಬರಿಂದ ಸೋಲಿನ ಕಾರಣಗಳ ಬಗ್ಗೆ ವಿವರ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಎರಡು ದಿನಗಳ ಹಿಂದೆ ರಾಜ್ಯದ ಹಿರಿಯ ನಾಯಕರೊಬ್ಬರು ಮೋದಿ ಅವರಿಗೆ ಸೋಲಿನ ಕಾರಣಗಳ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯ ಪ್ರಮುಖ ನಾಯಕರೊಬ್ಬರು ಸುಮಾರು ಒಂದೂವರೆಗೆ ಗಂಟೆ ಕಾಲ ಮೋದಿ ಜತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಮೋದಿ ಅವರು ಸೋಲಿಗೆ ಕಾರಣಗಳೇನು ಎಂಬುದನ್ನು ತಿಳಿದುಕೊಂಡಿದ್ದಾರೆ.

ಟಿಕೆಟ್ ಹಂಚಿಕೆ ಸರಿಯಾಗಿ ನಡೆದಿಲ್ಲ. ಸರ್ಕಾರ ಅಸ್ತಿತ್ವದಲ್ಲಿದ್ದಾಗ ಪಕ್ಷದ ನಾಯಕರು ಕಾರ್ಯಕರ್ತರ ಕಡೆ ಗಮನ ನೀಡಿಲ್ಲ. ಪರಿಣಾಮವಾಗಿ ಈ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಉತ್ಸಾಹವೇ ಇರಲಿಲ್ಲ. ಪಕ್ಷದ ನಾಯಕರು ಒಬ್ಬರನ್ನೊಬ್ಬರು ಸೋಲಿಸಲು ತಲ್ಲಿನರಾದರು. ಕೊನೆಗೆ ತಾವೂ ಸೋತು ಇನ್ನೊಬ್ಬರನ್ನು ಸೋಲಿಸಿದರು. ಕಾಂಗ್ರೆಸ್ ಮಾಡಿದ 40% ಕಮಿಷನ್ ಆರೋಪಕ್ಕೆ ಸರಿಯಾದ ಪ್ರತ್ಯುತ್ತರ ನೀಡಲಿಲ್ಲ. ನೀವು (ಮೋದಿ) ರಾಜ್ಯದಲ್ಲಿ ಬಂದು ಹೆಚ್ಚು ಪ್ರಚಾರ ಮಾಡದೆ ಇದ್ದರೆ 35 ಸೀಟುಗಳನ್ನು ಪಡೆಯುವುದೂ ಕಷ್ಟವಾಗುತ್ತಿತ್ತು ಎಂದು ಹಿರಿಯ ನಾಯಕ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ

ಇತ್ತೀಚೆಗೆ ರಾಜ್ಯ ವಿಧಾನಸಭೆಗೆ ನಡೆದಿದ್ದ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿತ್ತು. ಆಡಳಿತಾರೂಢ ಬಿಜೆಪಿ ಕೇವಲ 65 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವಂತಾಗಿತ್ತು. ಕೊನೆಯ ಹಂತದಲ್ಲಿ ಮೋದಿ ಅವರ ಬಿರುಸಿನ ಪ್ರಚಾರದ ಹೊರತಾಗಿಯೂ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದ್ದು, ಪಕ್ಷದ ವರಿಷ್ಠರನ್ನು ಚಿಂತೆಗೀಡು ಮಾಡಿತ್ತು.

ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಖುದ್ದು ಮೋದಿ ಅವರೇ ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ವಿಮರ್ಶೆ ನಡೆಸಿದ್ದಾರೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ