
ಬೆಂಗಳೂರು, ಅಕ್ಟೋಬರ್ 19: ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ (SM Krishna) ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಅನಾರೋಗ್ಯ ಹಿನ್ನಲೆ ಇಂದು (ಅ.19) ಬೆಳಿಗ್ಗೆ ಮಣಿಪಾಲ್ ಆಸ್ಪತ್ರೆಗೆ ಎಸ್ಎಂ ಕೃಷ್ಣರನ್ನು ದಾಖಲಿಸಲಾಗಿತ್ತು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
ಇದೀಗ ವಿಧಾನ ಪರಿಷತ್ ಮಂಡ್ಯ ಶಾಸಕ ದಿನೇಶ್ ಗೂಳಿಗೌಡ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಎಸ್ ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ. ಡಾ. ಸತ್ಯನಾರಾಯಣ ಹಾಗೂ ಡಾ. ಸುನಿಲ್ ಕಾರಂತ್ ಅವರು ತಪಾಸಣೆ ನಡೆಸುತ್ತಿದ್ದಾರೆ. ಅವರು ಆರೋಗ್ಯವಾಗಿದ್ದು ಸೋಮವಾರದವರೆಗೆ ಕೆಲವು ವೈದ್ಯಕೀಯ ಪರೀಕ್ಷೆ ಗಳ ನಂತರ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
92 ವರ್ಷದ ಎಸ್ಎಮ್ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್ ಕಾರಂತ್ ನೇತೃತ್ವದಲ್ಲಿ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ.
ಇದನ್ನೂ ಓದಿ: ಎಸ್ಎಂ ಕೃಷ್ಣ ಜೊತೆಗಿನ ದೊಡ್ಡ ಗಲಾಟೆ ಹಿಂದಿನ ಸಿಕ್ರೇಟ್ ಬಿಚ್ಚಿಟ್ಟ ಡಿಕೆ ಶಿವಕುಮಾರ್
ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಅವರು ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:34 pm, Sat, 19 October 24