ಶಿಕ್ಷಣದಲ್ಲೂ ಮುಸ್ಲಿಂ ಓಲೈಕೆ: ಸಿದ್ದರಾಮಯ್ಯ ಸರ್ಕಾರದ ಎಸ್ಇಪಿ ಸಮಿತಿ ವಿರುದ್ಧ ವ್ಯಾಪಕ ಆಕ್ರೋಶ

ಕರ್ನಾಟಕ ರಾಜ್ಯ ಪಠ್ಯಕ್ರಮ ಸಮಿತಿಯು ಇತ್ತೀಚಿಗೆ ವರದಿ ಸಲ್ಲಿಕೆ ಮಾಡಿ ಕೆಲವು ಶಿಫಾರಸ್ಸುಗಳನ್ನು ಸರ್ಕಾರಕ್ಕೆ ನೀಡಿದೆ. ಇದೀಗ ಈ ವರದಿಯ ಶಿಫಾರಸ್ಸುಗಳು ವಿವಾದದ ಕೇಂದ್ರಬಿಂದುವಾಗಿವೆ. ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ ನೀಡುವ ಪ್ರಸ್ತಾಪಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಶಿಕ್ಷಣದಲ್ಲಿಯೂ ಮುಸ್ಲಿಂ ಓಲೈಕೆ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಶಿಕ್ಷಣದಲ್ಲೂ ಮುಸ್ಲಿಂ ಓಲೈಕೆ: ಸಿದ್ದರಾಮಯ್ಯ ಸರ್ಕಾರದ ಎಸ್ಇಪಿ ಸಮಿತಿ ವಿರುದ್ಧ ವ್ಯಾಪಕ ಆಕ್ರೋಶ
ಸರ್ಕಾರಕ್ಕೆ ವರದಿ ಸಲ್ಲಿಸಿದ ಎಸ್​ಇಪಿ (ಎಡ ಚಿತ್ರ) ಮತ್ತು ಮುಸ್ಲಿಂ ಬಾಲಕಿಯರು (ಸಾಂದರ್ಭಿಕ ಚಿತ್ರ)
Edited By:

Updated on: Aug 12, 2025 | 8:13 AM

ಬೆಂಗಳೂರು, ಆಗಸ್ಟ್ 12: ಬಿಜೆಪಿ ಸರ್ಕಾರ 2021ರಲ್ಲಿ ರಾಜ್ಯದಲ್ಲಿ ಜಾರಿಗೊಳಿಸಿದ ಎನ್​​​ಇಪಿಯನ್ನು (NEP) ತೆಗೆದುಹಾಕಿ ಎಸ್​​ಇಪಿ (SEP) ಅನುಸರಿಸುವ ಬಗ್ಗೆ ವಿಧಾನಸಭಾ ಚುನಾವಣಾ ಪೂರ್ವದಲ್ಲೇ ಕಾಂಗ್ರೆಸ್ ಆಶ್ವಾಸನೆ ಕೊಟ್ಟಿತ್ತು. ಪ್ರಣಾಳಿಕೆಯಲ್ಲಿ ಹೇಳಿದ ಹಾಗೆಯೇ ಕಾಂಗ್ರೆಸ್ (Congress) ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಎನ್​​ಇಪಿ ಬದಲು ಎಸ್​ಇಪಿ ಜಾರಿ ತರಲು ಸಕಲ ತಯಾರಿ ಮಾಡಿ ಕೊಂಡು ಪ್ರೊ. ಸುಖದೇವ್ ಥೋರಟ್ ನೇತೃತ್ವದಲ್ಲಿ ಆಯೋಗವನ್ನು ರಚನೆ ಮಾಡಿತ್ತು. ಆದರೆ, ಆ ಆಯೋಗ ಮಧ್ಯಂತರ ವರದಿ ಸಲ್ಲಿಕೆ ಮಾಡಿ ಮೌನವಾಗಿತ್ತು. ಈಗ ಕೊನೆಗೂ ಎರಡು ದಿನಗಳ ಹಿಂದೆ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆ ಮಾಡಿದೆ. ಸುದೀರ್ಘ ವರದಿಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆಗಳಿಗೆ ಮಹತ್ವದ ಸಲಹೆಗಳನ್ನು ಶಿಫಾರಸು ಮಾಡಿದೆ. ಆದರೆ ಈ ಸಮಿತಿಯ ಕೆಲವು ಶಿಫಾರಸ್ಸುಗಳೇ ಕೆಲವು ಸಂಘಟನೆಗಳ ವಿರೋಧಕ್ಕೆ ಕಾರಣವಾಗಿದೆ.

ಮುಸ್ಲಿಂ ವಿದ್ಯಾರ್ಥಿಗಳಿಗೆ ಸಂಪೂರ್ಣ ಆರ್ಥಿಕ ನೆರವು, ಮುಸ್ಲಿಂ ಹೆಣ್ಣುಮಕ್ಕಳ ದಾಖಲಾತಿ ಹೆಚ್ಚಿಸಲು ಪ್ರೋತ್ಸಾಹ

ಎರಡು ದಿನಗಳ ಹಿಂದೆ ರಾಜ್ಯ ಪಠ್ಯಕ್ರಮ ಸಮಿತಿ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಕೆ ಮಾಡಿದೆ. ಈ ವರದಿಯಲ್ಲಿ ಶಾಲಾ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ವಿಚಾರದಲ್ಲಿ ಕೆಲವು ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಈ ಪೈಕಿ, ಲ್ಲ ಕಡಿಮೆ ಆದಾಯದ ಮುಸ್ಲಿಂ ವಿದ್ಯಾರ್ಥಿಗಳಿಗೆ ಸಂಪೂರ್ಣ ಆರ್ಥಿಕ ಬೆಂಬಲ ನೀಡುವಂತೆ ಹಾಗೂ ಗ್ರಾಮೀಣ ಮುಸ್ಲಿಂ ಹೆಣ್ಣುಮಕ್ಕಳ ದಾಖಲಾತಿ ಹೆಚ್ಚಿಸಲು ಪ್ರೋತ್ಸಾಹ ನೀಡುವಂತೆ ಶಿಫಾರಸು ಮಾಡಿದೆ. ಸದ್ಯ ಇದು ಕೆಲವು ಪೋಷಕರು, ಶಿಕ್ಷಣ ಸಂಸ್ಥೆಗಳು ಹಾಗೂ ಹಿಂದೂಪರ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದೆ.

ಸರ್ಕಾರ ಧರ್ಮದ ಪರವಾದ ವರದಿ ಜಾರಿ ಮಾಡದಂತೆ ಆಗ್ರಹ ವ್ಯಕ್ತವಾಗಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು , ಧರ್ಮ ಜಾತಿ ಓಲೈಕೆ ಮಾಡುವುದು ಆರ್​ಟಿಇ ಕಾನೂನು ಉಲ್ಲಂಘನೆಯಾಗಿದೆ. ಹೀಗಾಗಿ ಎಸ್ಇಪಿ ವರದಿಗೆ ವ್ಯಾಪಕ ವಿರೋಧ ಕೇಳಿ ಬರುತ್ತಿದೆ. ಖಾಸಗಿ ಶಾಲಾ ಸಂಘಟನೆ ಹಾಗೂ ಪೋಷಕರಿಂದಲೂ ವಿರೋಧ ಕೇಳಿ ಬಂದಿದೆ.

ಇದನ್ನೂ ಓದಿ
ಕಾಡಾನೆ ದಾಳಿಗೆ ಒಳಗಾಗಿದ್ದ ವ್ಯಕ್ತಿಗೆ 25 ಸಾವಿರ ದಂಡ! ಎಚ್ಚರಿಕೆ ಸಂದೇಶ
ರಾಜಣ್ಣ ತಲೆದಂಡಕ್ಕೆ ಕಾರಣ ಒಂದೆರಡಲ್ಲ: ಈ ವಿಚಾರಗಳೇ ಮುಳುವಾಯ್ತು ನೋಡಿ!
ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ NEP ಗೆ ತಿಲಾಂಜಲಿ, ಎಸ್ಇಪಿ ಜಾರಿ ಫಿಕ್ಸ್
ಶಾಲಾ ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಸೇರಿದಂತೆ ಹಲವು ಶಿಫಾರಸು ಮಾಡಿದ SEP

ಇದನ್ನೂ ಓದಿ: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ NEP ಗೆ ತಿಲಾಂಜಲಿ, ಎಸ್ಇಪಿ ಜಾರಿ ಫಿಕ್ಸ್

ಒಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಎಸ್ಇಪಿ ಸಮಿತಿ ವರದಿ ಸಲ್ಲಿಕೆ ಜೊತೆಗೆ ಕೆಲವು ಶಿಫಾರಸುಗಳನ್ನೂ ಮಾಡಿದ್ದು, ಈಗ ಇದರಲ್ಲಿನ ಕೆಲವು ಅಂಶಗಳು ಧರ್ಮ ದಂಗಲ್​ಗೆ ಕಾರಣವಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us