AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಕಾಲೇಜುಗಳ ಶುಲ್ಕ ಏರಿಕೆಗೆ ಬೀಳುತ್ತಾ ಕಡಿವಾಣ? ಶುಲ್ಕ ನಿಯಂತ್ರಣ ಕಾಯ್ದೆಗೆ ಎಸ್ಇಪಿ ಶಿಫಾರಸು

ಪ್ರತಿ ವರ್ಷವೂ ಖಾಸಗಿ ಕಾಲೇಜುಗಳು ಶುಲ್ಕ ಏರಿಕೆ ಮಾಡಿ ಬರೆ ಎಳೆಯಲು ಮುಂದಾಗುತ್ತವೆ. ಹೀಗಾಗಿ ಕಂಗಾಲಾಗಿರುವ ಪೋಷಕರು ಸರ್ಕಾರಕ್ಕೆ ಕಳೆದ ಕೆಲ ವರ್ಷಗಳಿಂದ ಶುಲ್ಕ ನಿಯಂತ್ರಣ ಕಾಯ್ದೆ ಜಾರಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈಗ ಈ ಬಗ್ಗೆ ರಾಜ್ಯ ಪಠ್ಯಕ್ರಮ ಸಮಿತಿ ಶಿಫಾರಸು ಮಾಡಿದೆ.

ಖಾಸಗಿ ಕಾಲೇಜುಗಳ ಶುಲ್ಕ ಏರಿಕೆಗೆ ಬೀಳುತ್ತಾ ಕಡಿವಾಣ? ಶುಲ್ಕ ನಿಯಂತ್ರಣ ಕಾಯ್ದೆಗೆ ಎಸ್ಇಪಿ ಶಿಫಾರಸು
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Aug 16, 2025 | 6:20 PM

Share

ಬೆಂಗಳೂರು, ಆಗಸ್ಟ್ 16: ಪ್ರತಿ ವರ್ಷ ಖಾಸಗಿ ಶಾಲಾ ಕಾಲೇಜುಗಳು (Private Colleges) ಲಕ್ಷ ಲಕ್ಷ ರೂಪಾಯಿ ಶುಲ್ಕ ಏರಿಕೆ ಮಾಡಿ ಸುಲಿಗೆ ಮಾಡುತ್ತವೆ. ಇದಕ್ಕೆ ಕಡಿವಾಣ ಹಾಕುವಂತೆ ಪೋಷಕರು ಆಗ್ರಹಿಸುತ್ತಲೇ ಬಂದಿದ್ದಾರೆ. ಈಗ ಪ್ರೊಫೆಸರ್ ಥೋರಟ್ ನೇತೃತ್ವದ ರಾಜ್ಯ ಪಠ್ಯಕ್ರಮ ಸಮಿತಿ (SEP) ಶುಲ್ಕ ನಿಯಂತ್ರಣ ಕಾಯ್ದೆ ಜಾರಿ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಶುಲ್ಕ ನಿಯಂತ್ರಣ ವಿಚಾರದಲ್ಲಿ ಕಾಯ್ದೆ ರೂಪಿಸಲು ಪ್ರತ್ಯೇಕ ಸಮಿತಿ ರಚಿಸಲು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಇದರೊಂದಿಗೆ, ಖಾಸಗಿ ಶಾಲೆಗಳಿಗೆ ಮೂಗುದಾರ ಹಾಕಲು ಶಿಕ್ಷಣ (Education) ಇಲಾಖೆ ತಯಾರಿ ಮಾಡಿದಂತಾಗಿದೆ.

ಪ್ರತ್ಯೇಕ ಶಾಲಾ ಶುಲ್ಕ ನಿಯಂತ್ರಣ ಮಂಡಳಿಗೆ ಎಸ್​ಇಪಿ ಶಿಫಾರಸು ಮಾಡಿದ್ದು, ಈ ಸಂಬಂಧ ಮುಖ್ಯಮಂತ್ರಿಗಳಿಗೂ ವರದಿ ಸಲ್ಲಿಸಿದೆ. ಈ ವರದಿಯಲ್ಲಿ, ಶಾಲಾ ಹಂತದಲ್ಲಿ ಆಗಬೇಕಾದ ಬದಲಾವಣೆಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಖಾಸಗಿ ಕಾಲೇಜುಗಳು ಆಡಿದ್ದೇ ಆಟ ಎಂಬಂತಾಗಿದೆ. ಅವರು ನಿಗದಿ ಮಾಡಿದ್ದೇ ಶುಲ್ಕ ಎನ್ನುವಂತಾಗಿದೆ. ಪ್ರತಿವರ್ಷ ಶೇ 20 ರಿಂದ 30 ರಷ್ಟು ಶುಲ್ಕ ಏರಿಕೆ ಮಾಡಿಕೊಂಡು ಪೋಷಕರ ಪರದಾಟಕ್ಕೆ ಕಾರಣವಾಗಿದೆ. ಹೀಗಾಗಿ ಎಸ್ಇಪಿ ಖಾಸಗಿ ಶಾಲಾ ಕಾಲೇಜುಗಳ ಶುಲ್ಕಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಎಸ್​ಇಪಿ ಮಾಡಿರುವ ಶಿಫಾರಸಿಗೆ ಕೆಲವು ಖಾಸಗಿ ಶಾಲಾ ಒಕ್ಕೂಟಗಳಿಂದಲೂ ಬೆಂಬಲ ವ್ಯಕ್ತವಾಗಿದೆ.

ಇದನ್ನೂ ಓದಿ: ಶಿಕ್ಷಣದಲ್ಲೂ ಮುಸ್ಲಿಂ ಓಲೈಕೆ: ಸಿದ್ದರಾಮಯ್ಯ ಸರ್ಕಾರದ ಎಸ್ಇಪಿ ಸಮಿತಿ ವಿರುದ್ಧ ವ್ಯಾಪಕ ಆಕ್ರೋಶ

ಒಟ್ಟಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮಾತ್ರ ಯಾವುದನ್ನೂ ಲೆಕ್ಕಿಸದೇ, ಪ್ರತಿ ವರ್ಷ ಶುಲ್ಕ ಏರಿಕೆ ಮಾಡಿಕೊಂಡು ಕಾಸು ಮಾಡಲು ಮುಂದಾಗಿದ್ದು ಪೋಷಕರು ಪರದಾಡುವ ಸ್ಥಿತಿ ಎದುರಗಿದೆ. ಹೀಗಾಗಿ ಶುಲ್ಕ ನಿಯಂತ್ರಣ ಸಮಿತಿ ರಚನೆಗೆ ಎಸ್ಇಪಿ ಈಗ ಶಿಫಾರಸು ಮಾಡಿದ್ದು, ಸರ್ಕಾರ ಮುಂದಿನ ವರ್ಷದಿಂದಲೇ ಸಮಿತಿ ರಚಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು