ಒಮ್ಮೆ ಟಿಕೆಟ್ ರದ್ದು, ಮತ್ತೆ ಟಿಕೆಟ್ ಕಾಯ್ದಿರಿಸಿ ವಿಮಾನ ಏರದ ಪ್ರಜ್ವಲ್: ಎಸ್​ಐಟಿ ಅಧಿಕಾರಿಗಳು ಬೇಸ್ತು

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ಕಲಬೆರಸಿಕೊಂಡಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಕಣ್ಣಾಮುಚ್ಚಾಲೆ ಆಟ ಮುಂದುವರೆದಿದೆ., ಜರ್ಮನಿಯಿಂದ ಬುಧವಾರ ಕರ್ನಾಟಕಕ್ಕೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಒಂದು ಬಾರಿ ವಿಮಾನ ಟಿಕೆಟ್ ಮುಂದೂಡಿಕೆ ಮಾಡಿ ನಂತರ ರದ್ದು ಮಾಡಿದ್ದಾರೆ. ಮರಳಿ ಗುರುವಾರ ಬೆಳಗ್ಗೆಯ ವಿಮಾನಕ್ಕೆ ಟಿಕೆಟ್ ಕಾಯ್ದಿರಿಸಿದ್ದರೂ ಆ ವಿಮಾನದಲ್ಲಿಯೂ ಬಂದಿಲ್ಲ.

ಒಮ್ಮೆ ಟಿಕೆಟ್ ರದ್ದು, ಮತ್ತೆ ಟಿಕೆಟ್ ಕಾಯ್ದಿರಿಸಿ ವಿಮಾನ ಏರದ ಪ್ರಜ್ವಲ್: ಎಸ್​ಐಟಿ ಅಧಿಕಾರಿಗಳು ಬೇಸ್ತು
ಪ್ರಜ್ವಲ್ ರೇವಣ್ಣ
Follow us
| Updated By: ಗಣಪತಿ ಶರ್ಮ

Updated on: May 16, 2024 | 6:53 AM

ಬೆಂಗಳೂರು, ಮೇ 16: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಲೆಮರೆಸಿಕೊಂಡು ಜರ್ಮನಿಯಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಬುಧವಾರ ಬೆಂಗಳೂರಿಗೆ ಬರುತ್ತಾರೆ ಎಂದು ಹೇಳಲಾಗಿತ್ತು. ಎರಡು ಬಾರಿ ಟಿಕೆಟ್ ರದ್ದು ಮಾಡಿದ್ದ ಪ್ರಜ್ವಲ್, ಒಮ್ಮೆ ಟಿಕೆಟ್ ಮುಂದೂಡಿಕೆ ಮಾಡಿಕೊಂಡರು. ನಂತರ ಆ ಟಿಕೆಟನ್ನೂ ರದ್ದು ಮಾಡಿದರು. ಇದಾದ ಬಳಿಕ ಗುರುವಾರ ಬೆಳಗ್ಗೆಗೆ ಮತ್ತೆ LH764 ಲುಫ್ತಾನ್ಸ್ ವಿಮಾನದ ಟಿಕೆಟ್ ಕಾಯ್ದಿರಿಸಿದ್ದರು. ಹೀಗಾಗಿ ಬೆಂಗಳೂರಿಗೆ (Bengaluru) ಬರುತ್ತಾರೆ ಎಂದು ಎಸ್ಐಟಿ ಅಧಿಕಾರಿಗಳು (SIT Officials) ಕಾದು ಕುಳಿತಿದ್ದರು. ಆದರೆ ಅವರಿಗೆ ಪ್ರಜ್ವಲ್ ಮತ್ತೆ ಚಳ್ಳೆಹಣ್ಣು ತಿನ್ನಿಸಿದ್ದಾರೆ.

ಕೊನೇ ಕ್ಷಣದಲ್ಲಿ ಟಿಕೆಟ್ ಬುಕ್ ಆಗಿದ್ದರಿಂದ ಪ್ರಜ್ವಲ್ ಬರಬಹುದು ಎಂಬ ನಿರೀಕ್ಷೆ ಎಸ್​ಐಟಿ ಅಧಿಕಾರಿಗಳಲ್ಲಿ ಇತ್ತು. ಆದರೆ, ಜರ್ಮನಿಯ ಕಾಲಮಾನ ಪ್ರಕಾರ 12.20ಕ್ಕೆ ವಿಮಾನ ಟೇಕಾಫ್ ಆಗಿದೆ. ಅತ್ತ ಟೇಕಾಫ್ ಆಗುತ್ತಿದ್ದಂತೆಯೇ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರ ಪಟ್ಟಿ ಬಂದಿದೆ. ಏರ್‌ಪೋರ್ಟ್‌ನಲ್ಲೇ ಇದ್ದ ಎಸ್​ಐಟಿ ಅಧಿಕಾರಿಗಳು, ಪ್ರಯಾಣಿಕರ ಹೆಸರು ಪರಿಶೀಲಿಸಿದ್ದಾರೆ. ಆದರೆ, ವಿಮಾನದಲ್ಲಿರುವ ಪ್ರಯಾಣಿಕರ ಪಟ್ಟಿಯಲ್ಲಿ ಪ್ರಜ್ವಲ್ ಹೆಸರು ಇರಲಿಲ್ಲ. ಬೆಳಗ್ಗೆ ಟಿಕೆಟ್ ಬುಕ್ ಮಾಡಿದ್ದರೂ ಪ್ರಜ್ವಲ್ ಪ್ರಯಾಣ ಮಾಡಿರಲಿಲ್ಲ.

ಪ್ರಜ್ವಲ್ ಆಗಮನದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಅವರು ಬರುವ ಬಗ್ಗೆ ಎಸ್‌ಐಟಿಗೆ ಗೊತ್ತಿರುತ್ತದೆ. ಎಲ್ಲವನ್ನೂ ಹೇಳಲು ಆಗಲ್ಲ ಅಂದರು. ಈ ಮಧ್ಯೆ ಪ್ರಜ್ವಲ್ ಎಲ್ಲಿದ್ದಾನೆ ಎಂಬುದು ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ.

ಇದನ್ನೂ ಓದಿ: ‘ತಪ್ಪು ಮಾಡಿಲ್ಲ, ಎಲ್ಲವನ್ನೂ ದೇವರಿಗೆ ಬಿಟ್ಟಿದ್ದೇನೆ’: ಕಾನೂನು ಹೋರಾಟದ ಜೊತೆಗೆ ರೇವಣ್ಣ ಟೆಂಪಲ್ ರನ್

ಚನ್ನರಾಯಪಟ್ಟಣದಲ್ಲಿ ಮಂಗವಾರ 18 ಕಡೆ ದಾಳಿ ನಡೆಸಿದ್ದ ಎಸ್ಐಟಿ, ಇಡೀ ರಾತ್ರಿ ಶೋಧ ನಡೆಸಿತ್ತು. ಮುಂಜಾನೆ ಮೂರುವರೆರೆಗೂ ಶೋಧ ನಡೆಸಿ ಮಹತ್ವದ ದಾಖಲೆಗಳನ್ನ ಸಂಗ್ರಹಿಸಿತ್ತು. ಪ್ರೀತಂಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್‌ಗೌಡ, ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್ ಸೇರಿ ಹಲವರ ಮನೆ ಮೇಲೆ ದಾಳಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ