Karnataka Budget 2024​​: ಬೆಂಗಳೂರು ಬಡಜನರಿಗಾಗಿ ಹೊಸ ಭ್ಯಾಗ್ಯ ಘೋಷಿಸಿದ ಸಿದ್ದರಾಮಯ್ಯ

Karnataka Siddaramaiah Budget 2024-25: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್​ನಲ್ಲಿ ಬೆಂಗಳೂರಿನ ಬಡಜನರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಬಡಜನತೆಗೆ ಉಚಿತ ಪ್ರಯೋಗಾಲಯ ಸ್ಥಾಪಿಸಲಾಗುತ್ತದೆ.

Karnataka Budget 2024​​: ಬೆಂಗಳೂರು ಬಡಜನರಿಗಾಗಿ ಹೊಸ ಭ್ಯಾಗ್ಯ ಘೋಷಿಸಿದ ಸಿದ್ದರಾಮಯ್ಯ
ಸಿದ್ದರಾಮಯ್ಯ ಬಜೆಟ್​ 2024
Follow us
ವಿವೇಕ ಬಿರಾದಾರ
|

Updated on: Feb 16, 2024 | 1:02 PM

ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್​ (Karnataka Budget 2024​​) ನಲ್ಲಿ ಬೆಂಗಳೂರಿನ ಬಡಜನರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಬಡಜನತೆಗೆ ಉಚಿತ ಪ್ರಯೋಗಾಲಯ ಸೇವೆಯನ್ನು ಒದಗಿಸಲು Hub and Spoke ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಮುಂದಿನ ಎರಡು ವರ್ಷಗಳಲ್ಲಿ 20 ಕೋಟಿ ರೂ. ಗಳ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್​​ನಲ್ಲಿ ಘೋಷಿಸಿದ್ದಾರೆ.

ಹಾಗೆ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ First Referral Unit (FRU)ಗಳಲ್ಲಿ ರಕ್ತ ಸಂಗ್ರಹ ಘಟಕಗಳಿಲ್ಲದ ಕಾರಣ, ರೋಗಿಗಳಿಗೆ ತುರ್ತು ಸಮಯದಲ್ಲಿ ರಕ್ತ ಪೂರೈಸಲು ತೊಂದರೆ ಉಂಟಾಗುತ್ತಿದೆ. ಇದನ್ನು ನೀಗಿಸಲು 50 ಹೊಸ ರಕ್ತ ಶೇಖರಣಾ ಘಟಕಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಸ್ಥಾಪಿಸಲಾಗುತ್ತದೆ.

ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತದೆ.

ಪ್ರಸಕ್ತ ಸಾಲಿನಲ್ಲಿ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು (IPHL) ಸ್ಥಾಪನೆ. ಇದಲ್ಲದೇ ಪ್ರಸಕ್ತ ಸಾಲಿನಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪನೆ. ಇದಕ್ಕೆ ಒಟ್ಟಾರೆಯಾಗಿ 11 ಕೋಟಿ ರೂ.ಗಳ ಅನುದಾನ ಮೀಸಲಿಡಲಾಗಿದೆ.

ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಗುಡ್​ ನ್ಯೂಸ್​ ನೀಡಿದ ಸಿದ್ದರಾಮಯ್ಯ

ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು.

ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ.ಗಳ ವೆಚ್ಚದಲ್ಲಿ KKRDB ಮೂಲಕ ಸ್ಥಾಪಿಸಲಾಗುತ್ತದೆ.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6,493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 199 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗಾಗಿ 130 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು.

ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ Chemotherapy ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು.

ರಾಜ್ಯದ ಜಿಲ್ಲಾ ಆಸ್ಪತ್ರೆಗಳನ್ನು ಅಗ್ನಿ ಅವಘಡಗಳಿಂದ ರಕ್ಷಿಸಲು 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನು 6 ಕೋಟಿ ರೂ.ಗಳ ವೆಚ್ಚದಲ್ಲಿ ಅಳವಡಿಸಲಾಗುವುದು. 2025 ರೊಳಗೆ ಕ್ಷಯರೋಗ ನಿರ್ಮೂಲನೆಗೊಳಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಗಾಗಿ 87 True-Nat Machines ಗಳನ್ನು ಖರೀದಿಸಲು 6 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.

ಕಲ್ಯಾಣ ಕರ್ನಾಟಕದಲ್ಲಿ Haemophilia ಮತ್ತು Thalassemia ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಮತ್ತು ಕೊಪ್ಪಳದ ICDT ಕೇಂದ್ರಗಳ ಬಲವರ್ಧನೆಗೆ 7 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ 2021ರಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ನೇಮಿಸಿದೆ. ಆಯೋಗವು ನೀಡುವ ವರದಿಯನ್ನಾಧರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಜೆಟ್​ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್​ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ