ಮುಡಾ ತನಿಖೆಗೆ ಅನುಮತಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿದ್ದರಾಮಯ್ಯ

ಮುಡಾ ಭೂ ಹಗರಣದ ತನಿಖೆಯಲ್ಲಿ ಇಡಿ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ. ಮುಡಾ ಹಗರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು. ಸದ್ಯ ಈ ವಿಚಾರವಾಗಿ ಸೆಪ್ಟೆಂಬರ್‌ 24ರ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಏಕಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ. 

ಮುಡಾ ತನಿಖೆಗೆ ಅನುಮತಿ ಪ್ರಶ್ನಿಸಿ  ಮೇಲ್ಮನವಿ ಸಲ್ಲಿಸಿದ ಸಿದ್ದರಾಮಯ್ಯ
ಮುಡಾ ತನಿಖೆಗೆ ಅನುಮತಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿದ್ದರಾಮಯ್ಯImage Credit source: PTI
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on: Oct 24, 2024 | 6:44 PM

ಬೆಂಗಳೂರು, ಅಕ್ಟೋಬರ್ 24: ಮುಡಾ ಅಕ್ರಮದ ಬೆನ್ನು ಬಿದ್ದಿರುವ ಇಡಿ ಅಧಿಕಾರಿಗಳು ಇಂಚಿಂಚೂ ಶೋಧ ನಡೆಸುತ್ತಿದ್ದಾರೆ. ಈ ಮಧ್ಯೆ ಕೊಂಚ ಬಿಡುವಿನ ನಂತರ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತೆ ಕಾನೂನು ಸಮರಕ್ಕೆ ಅಣಿಯಾಗುತ್ತಿದ್ದು, ಮುಡಾ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಮುಡಾ ಹಗರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು. ಸದ್ಯ ಈ ವಿಚಾರವಾಗಿ ಸೆಪ್ಟೆಂಬರ್‌ 24ರ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಏಕಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ: ರಾಜ್ಯಪಾಲರಿಗೆ ದೂರು ನೀಡಲು ಆರ್​ಟಿಐ ಕಾರ್ಯಕರ್ತ ಸಿದ್ಧತೆ

ತನಿಖೆಯ ಅಖಾಡಕ್ಕಿಳಿದಿರುವ ಕೇಂದ್ರದ ಜಾರಿನಿರ್ದೇಶಾನಲಯ ಇತ್ತೀಚೆಗೆ ಹಲವು ಸಾಕ್ಷ್ಯಾಧಾರಗಳನ್ನು ವಶಕ್ಕೆ ಪಡೆದಿತ್ತು. ಅಕ್ಟೋಬರ್ 18 – 19ರಂದು ಎರಡು ದಿನ ನಡೆಸಿದ ದಾಳಿಯಲ್ಲಿ ಹಲವಾರು ದಾಖಲೆಗಳನ್ನು ಸಂಗ್ರಹಿಸಿದ್ದರು. ಬಂಡಲ್ ಗಟ್ಟಲೆ ದಾಖಲೆಗಳನ್ನು ತಮ್ಮೊಂದಿಗೆ ಕೊಂಡೊಯ್ದಿದ್ದಾರೆ.

ಸಿಎಂ ಪತ್ನಿ ಹೆಸರಿಗೆ ಖಾತೆ ಮಾಡಿಸಿಕೊಡಲಾಗಿತ್ತು

ಲೇಔಟ್ ನಿರ್ಮಾಣಕ್ಕಾಗಿ ಕೆಸರೆ ಗ್ರಾಮದ 462ನೇ ಸರ್ವೇ ನಂಬರ್​ನಲ್ಲಿರುವ 3 ಎಕರೆ 16 ಗುಂಟೆ ಜಾಗವನ್ನು ಮುಡಾ ತನ್ನ ಸುಪರ್ದಿಗೆ ತಗೆದುಕೊಂಡಿತ್ತು. ಆದರೆ, ಸ್ವಾಧೀನಪಡಿಸಿಕೊಳ್ಳುವಾಗ ತಮಗೆ ಮಾಹಿತಿ ನೀಡಿಲ್ಲ. ಹಾಗಾಗಿ, ತಮಗೆ ಪರಿಹಾರ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ಪಾರ್ವತಿ ಸಿದ್ದರಾಮಯ್ಯನವರು ಮುಡಾ ಕಡೆಯಿಂದ ಪರಿಹಾರದ ರೂಪವಾಗಿ 2021ರಲ್ಲಿ ಮೈಸೂರಿನ ವಿಜಯನಗರದ ಮೂರನೇ ಹಂತದಲ್ಲಿ ಬೆಲೆಬಾಳುವ 14 ಸೈಟುಗಳನ್ನು ಖರೀದಿಸಿದ್ದರು. ಅವರ ಹೆಸರಿಗೆ ಆ ಸೈಟುಗಳ ಖಾತೆಯನ್ನೂ ಮಾಡಿಸಿಕೊಡಲಾಗಿತ್ತು.

ಇದನ್ನೂ ಓದಿ: ಮುಡಾ ಹಗರಣ: ಸೈಟ್ ವಾಪಸ್ ಕೊಟ್ಟರೆ ಸಿದ್ದರಾಮಯ್ಯ ಸಂಕಷ್ಟ ಕಡಿಮೆಯಾಗುತ್ತಾ? ಕಾನೂನು ತಜ್ಞರು ಹೇಳಿದ್ದಿಷ್ಟು

ಪರಿಹಾರ ರೂಪವಾಗಿ ಅವರಿಗೆ ಸೈಟುಗಳನ್ನು ಕೊಟ್ಟು ಅವರಿಗೆ ಖಾತೆಯನ್ನೂ ಮಾಡಿಸಿರುವ ಮುಡಾ, ಇತ್ತ, ಬಡಾವಣೆಗಾಗಿ ತಾನು ವಶಪಡಿಸಿಕೊಂಡಿದ್ದ ಭೂಮಿಯ ಮಾಲೀಕತ್ವವನ್ನು ತಿದ್ದುಪಡಿ ಮಾಡಿಯೇ ಇಲ್ಲ. ಅದರಿಂದಾಗಿ, ವಶಪಡಿಸಿಕೊಂಡು ಬಡಾವಣೆ ನಿರ್ಮಿಸಲಾಗಿರುವ ಭೂಮಿಯ ಮಾಲೀಕತ್ವ ಇನ್ನೂ ಪಾರ್ವತಿಯವರ ಹೆಸರಿನಲ್ಲೇ ಇದೆ. ಕಾರ್ಡ್ಸ್ ಆಫ್ ರೈಟ್ಸ್‌ನಲ್ಲಿ, ಆರ್​ಟಿಸಿ ದಾಖಲೆಗಳಲ್ಲಿ ಈಗಲೂ ಪಾರ್ವತಿಯವರ ಹೆಸರೇ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ