AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿಅಂತಿಮ ಹಂತ ತಲುಪಿದ SIR: ಅ.27ಕ್ಕೆ ಪಟ್ಟಿ ಪ್ರಕಟ; ಪ್ರಕ್ರಿಯೆಯ ಸಂಪೂರ್ಣ ವಿವರ ಇಲ್ಲಿದೆ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಸಂಬಂಧಿಸಿದಂತೆ ನೋಟಿಸ್‌ ಜಾರಿ, ವಿತರಣೆ ಮತ್ತು ವಿಚಾರಣೆಯ ಪ್ರಕ್ರಿಯೆಯು ಪೂರ್ಣಗೊಂಡಿದೆ. ಈ ಕುರಿತಾಗಿ ರಾಜ್ಯ ಚುನಾವಣಾ ಆಯೋಗ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಇನ್ನು ಅಂತಿಮ ಮತದಾರರ ಪಟ್ಟಿ ಇದೇ ಅಕ್ಟೋಬರ್​​ 27ರಂದು ಪ್ರಕಟವಾಗಲಿದೆ.

ಕರ್ನಾಟಕದಲ್ಲಿಅಂತಿಮ ಹಂತ ತಲುಪಿದ SIR: ಅ.27ಕ್ಕೆ ಪಟ್ಟಿ ಪ್ರಕಟ; ಪ್ರಕ್ರಿಯೆಯ ಸಂಪೂರ್ಣ ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Oct 23, 2026 | 3:53 PM

Share

ಬೆಂಗಳೂರು, ಅಕ್ಟೋಬರ್​ 23: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಗ್ರಮ ಪರಿಷ್ಕರಣೆ ಪ್ರಕ್ರಿಯೆ ಇದೀಗ ಮುಕ್ತಾಯ ಹಂತಕ್ಕೆ ತಲುಪಿದೆ. ಆಕ್ಷೇಪಣೆ ಸಲ್ಲಿಸಲು ಇದ್ದ ಕಾಲಾವಕಾಶ ಅಕ್ಟೋಬರ್​ 22ರಂದು ಮುಕ್ತಾಯಗೊಂಡಿದೆ. ಅಕ್ಟೋಬರ್​​ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ. ಹಾಗಾಗಿ ಇದೀಗ ರಾಜ್ಯ ಚುನಾವಣಾ ಆಯೋಗ ಮತದಾರರ ಪಟ್ಟಿ ವಿಶೇಷ ಸಗ್ರಮ ಪರಿಷ್ಕರಣೆಯ ಮಾಹಿತಿಯನ್ನು ನೀಡಿದೆ.

ನೋಟಿಸ್‌ಗಳ ವಿಚಾರಣೆ ಪೂರ್ಣ

ಈ ಕುರಿತಾಗಿ ರಾಜ್ಯ ಚುನಾವಣಾ ಆಯೋಗ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಪರಿಶೀಲನೆಗಾಗಿ ಅನೇಕ ಜನರಿಗೆ ನೋಟಿಸ್‌ಗಳನ್ನು ನೀಡಲಾಗಿತ್ತು. ರಾಜ್ಯಾದ್ಯಂತ ಒಟ್ಟು 43,82,313 ನೋಟಿಸ್‌ ಜಾರಿ ಮಾಡಲಾಗಿತ್ತು. ವಿತರಿಸಲಾದ ಎಲ್ಲಾ 43,82,824 ನೋಟಿಸ್‌ಗಳ ವಿಚಾರಣೆಯನ್ನು ಪೂರ್ಣಗೊಳಿಸಲಾಗಿದೆ.

ಯಾವ ಫಾರ್ಮ್​ ಎಷ್ಟು ಸಲ್ಲಿಸಲಾಗಿದೆ

  • ಜೂನ್​​ 16ರಿಂದ ಅಕ್ಟೋಬರ್ 22 ರವರೆಗೆ 25,87,461 ಅರ್ಜಿಗಳನ್ನು ಸ್ವೀಕರಿಸಲಾಗಿದೆ.
  • ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಒಟ್ಟು 10,42,863 ಫಾರ್ಮ್ 6 ಸಲ್ಲಿಕೆ ಮಾಡಲಾಗಿದೆ.
  • ವಿದೇಶದಲ್ಲಿ ವಾಸಿಸುವ ಭಾರತೀಯ ಮತದಾರರ ನೋಂದಣಿಗಾಗಿ ಒಟ್ಟು 4,840 6ಎ ಫಾರ್ಮ್ ಸಲ್ಲಿಸಲಾಗಿದೆ.
  • ಹೆಸರು ಸೇರ್ಪಡೆಗೆ ಆಕ್ಷೇಪಣೆ ಅಥವಾ ಹೆಸರು ತೆಗೆದುಹಾಕಲು ಒಟ್ಟು 2,28,917 ಫಾರ್ಮ್ 7 ಸಲ್ಲಿಸಲಾಗಿದೆ.
  • ಹೆಸರು, ವಿಳಾಸ ಮುಂತಾದ ವಿವರಗಳನ್ನು ತಿದ್ದುಪಡಿ ಮಾಡಲು ಒಟ್ಟು 13,10,841 ಫಾರ್ಮ್ 8 ಸಲ್ಲಿಸಲಾಗಿದೆ.

ಇದನ್ನೂ ಓದಿ: ಫಾರ್ಮ್-7 ಸಲ್ಲಿಸಿದ್ರೆ ಮತದಾರರನ್ನು ತಕ್ಷಣ ಕೈಬಿಡಲ್ಲ: ಫಾರ್ಮ್​-7 ದುರ್ಬಳಕೆ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಸ್ಪಷ್ಟನೆ

ಇನ್ನು ಮುಖ್ಯವಾಗಿ, ಸೆಪ್ಟೆಂಬರ್ 23ರವರೆಗೆ ಬಂದ ಎಲ್ಲಾ ಫಾರ್ಮ್ 7 ಅರ್ಜಿಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ. ಅಂದರೆ ಅರ್ಜಿಗಳನ್ನು ಪರಿಶೀಲಿಸಿ ಅವುಗಳ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಜಿಬಿಎ ವ್ಯಾಪ್ತಿಯ ಎಲ್ಲಾ ವಲಯಗಳಲ್ಲಿ ನೋಟಿಸ್‌ಗಳ ವಿತರಣೆ ಮತ್ತು ವಿಚಾರಣೆ ಪೂರ್ಣಗೊಳಿಸಲಾಗಿದೆ. ಆ ಮೂಲಕ ಕರ್ನಾಟಕ ರಾಜ್ಯಾದ್ಯಂತ ನೋಟಿಸ್‌ಗಳ ವಿತರಣೆ ಮತ್ತು ವಿಚಾರಣೆ ಪ್ರಕ್ರಿಯೆಯಲ್ಲಿ ಯಾವುದೇ ಬಾಕಿ ಉಳಿದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:50 pm, Fri, 23 October 26

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More