AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಮತದಾರರ ಪಟ್ಟಿಯಿಂದ 716 ವಿದೇಶಿ ಪ್ರಜೆಗಳ ಹೆಸರು ಡಿಲೀಟ್

ಎಸ್​ಐಆರ್ ಪ್ರಕ್ರಿಯೆ ವೇಳೆ ಕರ್ನಾಟಕದ ಮತದಾರರ ಪಟ್ಟಿಯಿಂದ 716 ವಿದೇಶಿ ಪ್ರಜೆಗಳ ಹೆಸರುಗಳನ್ನು ಚುನಾವಣಾ ಆಯೋಗ ತೆಗೆದುಹಾಕಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನೇಪಾಳದ 545 ಪ್ರಜೆಗಳ ಹೆಸರುಗಳು ಡಿಲೀಟ್ ಆಗಿದ್ದು, ವಿವಿಧ ಜಿಲ್ಲೆಗಳಲ್ಲಿ ನಡೆದ ದಾಖಲೆ ಪರಿಶೀಲನೆಯ ವೇಳೆ ಅನರ್ಹ ಹೆಸರುಗಳು ಪತ್ತೆಯಾಗಿವೆ.

ಕರ್ನಾಟಕದ ಮತದಾರರ ಪಟ್ಟಿಯಿಂದ 716 ವಿದೇಶಿ ಪ್ರಜೆಗಳ ಹೆಸರು ಡಿಲೀಟ್
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Oct 28, 2026 | 10:58 AM

Share

ಮುಖ್ಯಾಂಶಗಳು

  • ಕರ್ನಾಟಕದ ಮತದಾರರ ಪಟ್ಟಿಯಿಂದ 716 ವಿದೇಶಿ ಹೆಸರು ಡಿಲೀಟ್
  • ಬೆಂಗಳೂರು ಉತ್ತರದಲ್ಲಿ ನೇಪಾಳದ 545 ಹೆಸರಿಗೆ ಕೊಕ್
  • ದಾಖಲೆ ಪರಿಶೀಲನೆ ವೇಳೆ ವಿದೇಶಿ ಪ್ರಜೆಗಳ ಪತ್ತೆ

ಬೆಂಗಳೂರು, ಅಕ್ಟೋಬರ್ 28: ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಅನರ್ಹವಾಗಿ ಸೇರ್ಪಡೆಯಾಗಿದ್ದ 716 ವಿದೇಶಿ ಪ್ರಜೆಗಳ ಹೆಸರುಗಳನ್ನು ಭಾರತೀಯ ಚುನಾವಣಾ ಆಯೋಗ ತೆಗೆದುಹಾಕಿದೆ. ಬೆಂಗಳೂರಿನ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಸ್​ಐಆರ್ ವೇಳೆ ಅತಿ ಹೆಚ್ಚು ನೇಪಾಳದ ಪ್ರಜೆಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾದ 583 ಅನರ್ಹ ಮತದಾರರ ಪೈಕಿ ನೇಪಾಳದ 545 ಪ್ರಜೆಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಅಮೆರಿಕ, ದುಬೈ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಕೆನಡಾದ ಪ್ರಜೆಗಳು ಮತದಾರರ ಗುರುತಿನ ಚೀಟಿ ಹೊಂದಿರುವುದು ಪರಿಶೀಲನೆ ವೇಳೆ ಪತ್ತೆಯಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಹೆಸರು ಡಿಲೀಟ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 40 ವಿದೇಶಿ ಪ್ರಜೆಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇವರಲ್ಲಿ ನೇಪಾಳದ 17, ಕೆನಡಾದ 5, ಆಸ್ಟ್ರೇಲಿಯಾದ 6, ಅಮೆರಿಕದ 6 ಮತ್ತು ಬ್ರಿಟನ್‌ನ 2 ಪ್ರಜೆಗಳು ಸೇರಿದ್ದಾರೆ. ನೆದರ್ಲೆಂಡ್ಸ್, ದಕ್ಷಿಣ ಆಫ್ರಿಕಾ, ಐರ್ಲೆಂಡ್ ಮತ್ತು ನಾರ್ವೆಯ ತಲಾ ಒಬ್ಬರ ಹೆಸರನ್ನೂ ತೆಗೆದುಹಾಕಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ನೇಪಾಳ, ಪಾಕಿಸ್ತಾನ, ಅಮೆರಿಕ ಮತ್ತು ಬಾಂಗ್ಲಾದೇಶದ ಪ್ರಜೆಗಳಿಗೆ ಸಂಬಂಧಿಸಿದ 22 ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ನೇಪಾಳ, ಅಮೆರಿಕ, ಬ್ರಿಟನ್, ಫ್ರಾನ್ಸ್ ಮತ್ತು ಕೆನಡಾ ಸೇರಿದಂತೆ ವಿವಿಧ ದೇಶಗಳ 44 ಪ್ರಜೆಗಳ ಹೆಸರುಗಳನ್ನು ತೆಗೆದುಹಾಕಲಾಗಿದೆ. ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿಯೂ ನೇಪಾಳ ಹಾಗೂ ಶ್ರೀಲಂಕಾದ ಪ್ರಜೆಗಳ ಹೆಸರುಗಳು ಪತ್ತೆಯಾಗಿವೆ.

ದಾಖಲೆ ಪರಿಶೀಲನೆ ವೇಳೆ ಪತ್ತೆ

2002ರ ಮತದಾರರ ಪಟ್ಟಿಯ ಮ್ಯಾಪಿಂಗ್‌ ಮಾಹಿತಿ ಲಭ್ಯವಾಗದ ಮತ್ತು ಮತದಾರರ ಗಣತಿ ನಮೂನೆಗಳ ಪರಿಶೀಲನೆ ನಡೆಯುತ್ತಿದ್ದ ವ್ಯಕ್ತಿಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಈ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮತದಾರರ ಪಟ್ಟಿಯಿಂದ ಶೇ 45.5 ರಷ್ಟು ಹೆಸರುಗಳು ಹೊರಗೆ!

ಮತದಾರರ ಗುರುತಿನ ಚೀಟಿ ಹೊಂದಿದ್ದರೂ, ಸಂಬಂಧಪಟ್ಟ ವ್ಯಕ್ತಿಗಳು ಶಾಲಾ ಪ್ರಮಾಣಪತ್ರ, ಆಸ್ತಿ ದಾಖಲೆಗಳು ಸೇರಿದಂತೆ ಸೂಚಿಸಲಾದ ಇತರ ದಾಖಲೆಗಳನ್ನು ಒದಗಿಸಲು ಸಾಧ್ಯವಾಗಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಪರಿಶೀಲನೆಯ ಬಳಿಕ ಒಟ್ಟು 716 ವಿದೇಶಿ ಪ್ರಜೆಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More