ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಲು ಸೂಚನೆ; ಸಚಿವ ಮಹದೇವಪ್ಪ

ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ; ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್​​ಸಿ ಮಹದೇವಪ್ಪ

ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಲು ಸೂಚನೆ; ಸಚಿವ ಮಹದೇವಪ್ಪ
ಸಂವಿಧಾನದ ಪ್ರತಿ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on: Jun 01, 2023 | 7:43 PM

ಬೆಂಗಳೂರು: ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ (Indian Constitution) ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್​​ಸಿ ಮಹದೇವಪ್ಪ (HC Mahadevappa) ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆ ಓದಿದ್ದಲ್ಲದೆ, ನಂತರ ಶಾಲೆಗಳಲ್ಲಿ ಓದಿಸುವ ವಿಚಾರವಾಗಿ ಟ್ವೀಟ್ ಮಾಡಿದ್ದಾರೆ.

‘ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರು ಇಂದು ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ‌ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕವಾಗಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು’ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಿಂದ ಟ್ವೀಟ್ ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಲು ಮತ್ತು ಅರ್ಥೈಸಲು ಆದೇಶಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?