ಮದುವೆ ಸಮಾರಂಭದಲ್ಲಿ ಮಾಸ್ಕ್ ಧರಿಸದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಸ್ಕ್ ಧರಿಸದೇ ಮದುವೆಯಲ್ಲಿ ಭಾಗವಹಿಸಿದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಆಡಿಯೋ ತುಣುಕುಗಳು ಹಡಿದಾಡುತ್ತಿವೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಡೆಯನ್ನು ಟೀಕಿಸಿ ಆಡಿಯೋದನ್ನು ಮಾತನಾಡಲಾಗಿದೆ.

ಮದುವೆ ಸಮಾರಂಭದಲ್ಲಿ ಮಾಸ್ಕ್ ಧರಿಸದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಸ್ಕ್ ಧರಿಸದೇ ಮದುವೆಯಲ್ಲಿ ಭಾಗವಹಿಸಿದ ದೃಶ್ಯ
Follow us
guruganesh bhat
|

Updated on:Apr 25, 2021 | 11:00 PM

ಕಾರವಾರ: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಖಾಸಗಿ ಮದುವೆ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೇ ಭಾಗವಹಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ನಡೆದಿದ್ದ ಮದುವೆ ಕಾರ್ಯಕ್ರಮದಲ್ಲಿ ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಸ್ಕ್ ಇಲ್ಲದೇ ಭಾಗವಹಿಸಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹಡಿದಾಡುತ್ತಿದೆ.

ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಸ್ಕ್ ಧರಿಸದೇ ಮದುವೆಯಲ್ಲಿ ಭಾಗವಹಿಸಿದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಆಡಿಯೋ ತುಣುಕುಗಳು ಹಡಿದಾಡುತ್ತಿವೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಡೆಯನ್ನು ಟೀಕಿಸಿ ಆಡಿಯೋದನ್ನು ಮಾತನಾಡಲಾಗಿದೆ. “ಬೆಂಗಳೂರಿನಿಂದ ಸಿದ್ಧಾಪುರಕ್ಕೆ ಬಂದು ಸ್ಪೀಕರ್ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇವರು ಮದುವೆಯಲ್ಲಿ ಓಡಾಡಿದ್ರೂ ನಡೆಯುತ್ತೆ, ಜನರಿದ್ದಲ್ಲಿ ನಡೆದಾಡಿದ್ರೂ ನಡೆಯುತ್ತೆ“. “ಜನಸಾಮಾನ್ಯರು ಓಡಾಡದಿದ್ರೆ ಪೊಲೀಸರು ಲಾಠಿ ತೆಗೆದುಕೊಂಡು ಹೊಡೀತಾರೆ“. “ಇವರ ವಿರುದ್ಧ ಯಾರೂ ಮಾತಾನಾಡಲು ತಯಾರಿಲ್ಲವೇಎಂದು ಆಡಿಯೋ ಮೂಲಕ ಕೆಲವು ಪ್ರಶ್ನಿಸಿದ್ದಾರೆ.

ವಾರಾಂತ್ಯದ ಕರ್ಫ್ಯೂ ನಡುವೆ ಮದುವೆ ವಾರಾಂತ್ಯದ ಕರ್ಫ್ಯೂವಿನ ಮಧ್ಯೆಯೇ ರಾಜ್ಯದ ವಿವಿಧೆಡೆ ಮದುವೆ ಸಮಾರಂಭಗಳು ನಡೆದಿವೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಕಟೀಲು ದುರ್ಗಾಪರಮೇಶ್ವರಿ ದೇಗುಲದಲ್ಲಿ ಜರುಗಿದ ಸರಳ ವಿವಾಹ ಕಾರ್ಯಕ್ರಮದಲ್ಲಿ 47 ಜೋಡಿ ಕೊವಿಡ್ ನಿಯಮವನ್ನು ಪಾಲಿಸಿಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಒಂದು ಮದುವೆಗೆ ಅರ್ಚಕರು, ಫೊಟೋಗ್ರಾಫರ್ ಸೇರಿ 10 ಜನರಿಗೆ ಅವಕಾಶ ಒದಗಿಸಲಾಗಿತ್ತು. ದೇವಳದ ಸರಸ್ವತಿ ಸದನ, ಮಹಾಲಕ್ಷ್ಮಿ ಸದನ, ಅನ್ನಛತ್ರದಲ್ಲಿ ಮದುವೆ ನಡೆದಿದ್ದು ಈ ಮುನ್ನವೇ 90 ಜೋಡಿ ಮದುವೆಯಾಗಲು ನೋಂದಣಿ ಮಾಡಿಕೊಂಡಿದ್ದರು. ಇಂದು ಕೊವಿಡ್ ನಿಯಮಾನುಸಾರ 47 ಜೋಡಿಯ ಮದುವೆ ನೆರವೇರಿತು.

ಮಾಸ್ಕ್‌ ಧರಿಸದ‌ ಮದುಮಗಳಿಗೆ ದಂಡ ಇತ್ತ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ ನಡೆದ ಮದುವೆಯೊಂದರಲ್ಲಿ ಮದುವೆ ಮುಗಿಸಿ ಹೊರಡುವ ವೇಳೆ ಮದುಮಗಳು ಮಾಸ್ಕ್ ಹಾಕಿರಲಿಲ್ಲ. ಈ ವೇಳೆ‌ ಸ್ಥಳಕ್ಕೆ ಆಗಮಿಸಿದ ಅರಕಲಗೂಡು ತಹಶೀಲ್ದಾರ್ ರೇಣುಕುಮಾರ್ ಮಾಸ್ಕ್ ಧರಿಸಿರದ ವಧುವಿಗೆ ನೂರು ರೂಪಾಯಿ ದಂಡ ವಿಧಿಸಿ ರಶೀದಿ ನೀಡಿದರು.

ಮದುವೆಗೆ ಸೇರಿದ 300 ಜನ ಬಾಗಲಕೋಟೆ ಜಿಲ್ಲೆ ಮುಚಖಂಡಿ ತಾಂಡಾ 1ರಲ್ಲಿ ಕೊವಿಡ್ ನಿಯಮಾವಳಿ ಉಲ್ಲಂಘಿಸಿ ಅದ್ದೂರಿ ಮದುವೆ ಏರ್ಪಡಿಸಲಾಗಿತ್ತು. ಮದುವೆಗೆ 300ಕ್ಕೂ ಹೆಚ್ಚು ಜನರು ಸೇರಿದ್ದರು. ಈ ವೇಳೆ ಬಾಗಲಕೋಟೆ ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ನೇತೃತ್ವದಲ್ಲಿ ದಾಳಿ ನಡೆಸಿ ವೇದಿಕೆ ಕಾರ್ಯಕ್ರಮ ರದ್ದುಗೊಳಿಸಿ ಟೆಂಟ್ ಖಾಲಿ ಮಾಡಿಸಿದರು. ಕೊರೊನಾ ನಿಯಮ ಉಲ್ಲಂಘಿಸಿ ಮದುವೆ ನಡೆಸಿದ್ದಕ್ಕಾಗಿ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Karnataka Speaker Vishweshwar Hegde Kageri did not wear mask in marriage function in Siddapur photo goes viral )

Published On - 9:12 pm, Sun, 25 April 21

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ