AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಶಾಲೆಯಲ್ಲೂ ಕನಿಷ್ಠ ಒಂದು ಗುಂಟೆಯಾದರೂ ಆಟದ ಮೈದಾನ ಇರಬೇಕು: ಕ್ರೀಡಾ ಸಚಿವ ನಾರಾಯಣಗೌಡ

ಪಾಠದ ಜೊತೆಗೆ ಆಟವೂ ಮುಖ್ಯ. ಒಂದು ವೇಳೆ ಮಕ್ಕಳಿಗೆ ಆಟಕ್ಕೆ ಅವಕಾಶ ನೀಡದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಪ್ರತಿ ಶಾಲೆಯಲ್ಲೂ ಕನಿಷ್ಠ ಒಂದು ಗುಂಟೆಯಾದರೂ ಆಟದ ಮೈದಾನ ಇರಬೇಕು: ಕ್ರೀಡಾ ಸಚಿವ ನಾರಾಯಣಗೌಡ
ಸಚಿವ ಕೆ.ಸಿ. ನಾರಾಯಣ ಗೌಡ
TV9 Web
| Updated By: guruganesh bhat|

Updated on:Aug 31, 2021 | 5:29 PM

Share

ಹಾವೇರಿ: ರಾಜ್ಯದ ಬಹುತೇಕ ಶಾಲೆಗಳಲ್ಲಿ ಮೈದಾನಗಳೇ ಇಲ್ಲ. ಹೀಗಾಗಿ ಪ್ರತಿ ಶಾಲೆಯಲ್ಲೂ ಕನಿಷ್ಠ ಒಂದು ಗುಂಟೆಯಾದರೂ ಮೈದಾನ ಇರಬೇಕೆಂದು ನೋಟಿಸ್ ಹೊರಡಿಸಲಾಗುವುದು ಎಂದು ಹಾವೇರಿಯಲ್ಲಿ ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದರು. ಕ್ರೀಡಾ ಉತ್ತೇಜನಕ್ಕೆ ನಮ್ಮ ಸರಕಾರ ಬದ್ಧವಾಗಿದೆ. ಬಹುತೇಕ ಶಾಲೆಗಳಲ್ಲಿ ಕ್ರೀಡಾಂಗಣಗಳಿಲ್ಲ. ಹೀಗಾಗಿ ಪ್ರತಿ ಶಾಲೆಯಲ್ಲೂ ಆಟದ ಮೈದಾನ ಇರುವಂತೆ ವ್ಯವಸ್ಥೆ ಮಾಡುವಂತೆ ನೊಟೀಸ್ ನೀಡಲಾಗುವುದು. ಕನಿಷ್ಠ ಒಂದು ಗಂಟೆ ಆಟವಾಡಲು ಅವಕಾಶ ಆಗುವಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗುವುದು. ಪಾಠದ ಜೊತೆಗೆ ಆಟವೂ ಮುಖ್ಯ. ಒಂದು ವೇಳೆ ಮಕ್ಕಳಿಗೆ ಆಟಕ್ಕೆ ಅವಕಾಶ ನೀಡದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ನಾವು ಸರಕಾರದ ಅಭಿವೃದ್ಧಿಗೆ ಹೊರಟವರು‌. ಟೀಕೆ ಟಿಪ್ಪಣಿಗಳಿಗೆ ಹೋಗಿ ಕಾಲ‌ ಕಳೆಯೋದು ಬೇಡ. ಅವರು ಮಾತಾಡಿಕೊಳ್ಳಲಿ, ಏಕೆಂದರೆ ಅವರು ವಿರೋಧ ಪಕ್ಷದಲ್ಲಿರುವವರು. ಟೀಕೆ ಟಿಪ್ಪಣಿಗಳನ್ನ ಮಾಡದಿದ್ದರೆ ಅವರಿಗೆ ಜೀರ್ಣಕ್ರಿಯೆ ಆಗುವುದಿಲ್ಲ. ಅಭಿವೃದ್ಧಿ ಮಾಡೋಣ, ಒಳ್ಳೆಯ ಮುಖ್ಯಮಂತ್ರಿಗಳು ಇದ್ದಾರೆ. ಮಾಜಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅವರ ನಿರ್ದೇಶನವೂ ಇದೆ. ಬಸವರಾಜ ಬೊಮ್ಮಾಯಿ ಅವರಿಗೂ ಒಳ್ಳೆಯ ಕೆಲಸಗಳನ್ನ ಮಾಡುವ ಇಚ್ಛೆಯಿದೆ. ನಾವೆಲ್ಲ ಸೇರಿ ಶಕ್ತಿ ತುಂಬಿ, ಅಭಿವೃದ್ಧಿ ಕಡೆಗೆ ಹೋಗೋಣ ಎಂದು ಅವರು ಹಾವೇರಿಯ ಜಿಲ್ಲಾ ಕ್ರೀಡಾಂಗಣ ಮತ್ತು ಒಳಾಂಗಣ ಕ್ರೀಡಾಂಗಣ ವೀಕ್ಷಣೆ ನಂತರ ಅವರು ಕರೆ ನೀಡಿದರು. ಅಲ್ಲದೇ, ಜಿಲ್ಲಾ ಕ್ರೀಡಾಂಗಣದ ವ್ಯವಸ್ಥೆ ಕಂಡು ಬೇಸರ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಮನೆ ಕಟ್ಟಿಸಲು ಮುಂದಾದ ಸಂಸದೆ ಸುಮಲತಾ ಅಂಬರೀಶ್; ಬುಧವಾರವೇ ಭೂಮಿ ಪೂಜೆ ಸಂಸದೆ ಸುಮಲತಾ ಅಂಬರೀಶ್ ಸ್ವಕ್ಷೇತ್ರ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಿಸಲು ಮುಂದಾಗಿದ್ದಾರೆ. ನಾಳೆ ಬುಧವಾರ (ಸೆಪ್ಟೆಂಬರ್ 1) ಸಂಸದೆ‌ ಸುಮಲತಾ ಅಂಬರೀಶ್ ಮಂಡ್ಯ ಪ್ರವಾಸ ಕೈಗೊಳ್ಳಲಿದ್ದು, ನಾಳೆಯೇ ಅವರು ಸ್ವಂತ ಮನೆ ಕಟ್ಟಲು ಗುದ್ದಲಿ ಪೂಜೆ ನಡೆಸಲಿದ್ದಾರೆ. ಚುನಾವಣೆಗೂ ಮುನ್ನ ಕ್ಷೇತ್ರದಲ್ಲಿ ಗೆದ್ದ ಬಳಿಕ ಮಂಡ್ಯದಲ್ಲಿ ಮನೆ ನಿರ್ಮಾಣ ಮಾಡಿ ಅಲ್ಲಿಯೇ ವಾಸಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಭರವಸೆ ನೀಡಿದ್ದರು. ಈ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ ಸಂಸದೆ ಸುಮಲತಾ ಅಂಬರೀಶ್ ಸ್ವಂತ ಮನೆ ಕಟ್ಟಿಸಲಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಅವರು ನೆರವೇರಿಸಲಿದ್ದಾರೆ.

ಇದನ್ನೂ ಓದಿ: 

Tokyo Paralympics: ಚೊಚ್ಚಲ ಪ್ಯಾರಾಲಿಂಪಿಕ್ಸ್​ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಭಾರತೀಯ ಕ್ರೀಡಾಪಟುಗಳು ಇವರೇ ನೋಡಿ 

ರಾಜ್ಯದ ಕ್ರೀಡಾಪಟುಗಳಿಗೆ ಅಂತರಾಷ್ಟ್ರೀಯ ಮಟ್ಟದ ಕೋಚ್, ಬಜೆಟ್​ನಲ್ಲಿ ಕ್ರೀಡೆಗೆ ಹೆಚ್ಚಿನ ಅನುದಾನ: ಸಿಎಂ ಬಸವರಾಜ ಬೊಮ್ಮಾಯಿ

(Karnataka Sports Minister Narayana Gowda says Every school must have play ground)

Published On - 4:48 pm, Tue, 31 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ