SSLC Exam-2: ಜೂನ್​ 14ರಿಂದ 22ರವರೆಗೆ ಎಸ್​ಎಸ್​​ಎಲ್​ಸಿ-2 ಪರೀಕ್ಷೆ: ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಎಸ್​ಎಸ್​​ಎಲ್​ಸಿ-2 ಪರೀಕ್ಷೆಯ ವೇಳಾಪಟ್ಟಿ ಶನಿವಾರ ಪ್ರಕಟಿಸಿದೆ. ಜೂನ್​ 14ರಿಂದ 22ರವರೆಗೆ ಪರೀಕ್ಷೆ ನಡೆಯಲಿವೆ. ಇತ್ತೀಚೆಗೆ ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಮುಂದುಡಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.

SSLC Exam-2: ಜೂನ್​ 14ರಿಂದ 22ರವರೆಗೆ ಎಸ್​ಎಸ್​​ಎಲ್​ಸಿ-2 ಪರೀಕ್ಷೆ: ವೇಳಾಪಟ್ಟಿ ಪ್ರಕಟ
ಜೂನ್​ 7ರಿಂದ 14ರವರೆಗೆ ಎಸ್​ಎಸ್​​ಎಲ್​ಸಿ-2 ಪರೀಕ್ಷೆ: ವೇಳಾಪಟ್ಟಿ ಪ್ರಕಟ
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on:May 18, 2024 | 5:23 PM

ಬೆಂಗಳೂರು, ಮೇ 18: ಎಸ್​ಎಸ್​​ಎಲ್​ಸಿ-2 (SSLC-2) ಪರೀಕ್ಷೆಯ ವೇಳಾಪಟ್ಟಿ ಶನಿವಾರ ಪ್ರಕಟವಾಗಿದ್ದು, ಜೂನ್​ 14ರಿಂದ 22ರವರೆಗೆ ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಜೂನ್​​ 07 ರಿಂದ ನಡೆಯಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ-2 (Karnataka SSLC 2024 Exam 2) ನ್ನು ಇತ್ತೀಚೆಗೆ ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಮುಂದುಡಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ https://kseab.karnataka.gov.in/english ಪ್ರಕಟಿಸಲಾಗಿದೆ.

ಎಸ್​ಎಸ್​​ಎಲ್​ಸಿ ಪರೀಕ್ಷೆ 2 ವೇಳಾಪಟ್ಟಿ ಹೀಗಿದೆ

  • ಜೂನ್ 14: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
  • ಜೂನ್ 15: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ಸಂಸ್ಕೃತ, ಕೊಂಕಣಿ, ಉರ್ದು, ತುಳು, ಮತ್ತು NSQF ವಿಷಯಗಳು
  • ಜೂನ್ 18: ಗಣಿತ/ಸಮಾಜ ಶಾಸ್ತ್ರ
  • ಜೂನ್ 19: ಎಲಿಮೆಂಟ್ಸ್​​ ಆಫ್​ ಮೆಕ್ಯಾನಿಕಲ್​ ಇಂಜಿನಿಯರಿಂಗ್​​ IV, ಇಂಜಿನಿಯರಿಂಗ್ ಗ್ರಾಫಿಕ್ಸ್​​2, ಎಲಿಮೆಂಟ್ಸ್​ ಆಫ್​ ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್​​ IV, ಎಲಿಮೆಂಟ್ಸ್​ ಆಫ್​ ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್, ‘ಸಿ’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್​​, ಅರ್ಥಶಾಸ್ತ್ರ
  • ಜೂನ್ 20: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
  • ಜೂನ್ 21: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
  • ಜೂನ್ 22: ಸಮಾಜ ವಿಜ್ಞಾನ

ಇದನ್ನೂ ಓದಿ: SSLC Grace Mark: ಎಸ್​​ಎಸ್​ಎಲ್​ಸಿ ಗ್ರೇಸ್ ಮಾರ್ಕ್​ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇದೇ ಮೇ.9 ರಂದು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ ಕಂಡಿದೆ.

ಇದನ್ನೂ ಓದಿ: SSLC ಟಾಪರ್ಸ್​ಗೆ ಬಂಪರ್ ಬಹುಮಾನ, ಅವರು ಕಲಿತ ಶಾಲೆಗಳಿಗೂ ಅನುದಾನ ಘೋಷಿಸಿದ ಸಿಎಂ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿಯ ಅಂತಿಮ ಪರೀಕ್ಷೆಯ ಫಲಿತಾಂಶಗಳನ್ನು ಮೇ 9 ರಂದು ಬಿಡುಗಡೆ ಮಾಡಲಾಗಿತ್ತು. ಈ ವರ್ಷ ಒಟ್ಟಾರೆ ಉತ್ತೀರ್ಣ ಶೇಕಡಾ 73.40 ರಷ್ಟಿದೆ. ಪರೀಕ್ಷೆಗೆ ಹಾಜರಾದ ಒಟ್ಟು 859,967 ವಿದ್ಯಾರ್ಥಿಗಳ ಪೈಕಿ 631,204 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:44 pm, Sat, 18 May 24

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್