ಬೆಂಗಳೂರು, ಮೇ 18: ಎಸ್‌ಎಸ್‌ಎಲ್‌ಸಿ-2 (SSLC-2) ಪರೀಕ್ಷೆಯ ವೇಳಾಪಟ್ಟಿ ಶನಿವಾರ ಪ್ರಕಟವಾಗಿದ್ದು, ಜೂನ್ 14ರಿಂದ 22ರವರೆಗೆ ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಜೂನ್ 07 ರಿಂದ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 (Karnataka SSLC 2024 Exam 2) ನ್ನು ಇತ್ತೀಚೆಗೆ ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಮುಂದುಡಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ https://kseab.karnataka.gov.in/english ಪ್ರಕಟಿಸಲಾಗಿದೆ.
ಇದನ್ನೂ ಓದಿ: SSLC Grace Mark: ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಇದೇ ಮೇ.9 ರಂದು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ ಕಂಡಿದೆ.
ಇದನ್ನೂ ಓದಿ: SSLC ಟಾಪರ್ಸ್ಗೆ ಬಂಪರ್ ಬಹುಮಾನ, ಅವರು ಕಲಿತ ಶಾಲೆಗಳಿಗೂ ಅನುದಾನ ಘೋಷಿಸಿದ ಸಿಎಂ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿಯ ಅಂತಿಮ ಪರೀಕ್ಷೆಯ ಫಲಿತಾಂಶಗಳನ್ನು ಮೇ 9 ರಂದು ಬಿಡುಗಡೆ ಮಾಡಲಾಗಿತ್ತು. ಈ ವರ್ಷ ಒಟ್ಟಾರೆ ಉತ್ತೀರ್ಣ ಶೇಕಡಾ 73.40 ರಷ್ಟಿದೆ. ಪರೀಕ್ಷೆಗೆ ಹಾಜರಾದ ಒಟ್ಟು 859,967 ವಿದ್ಯಾರ್ಥಿಗಳ ಪೈಕಿ 631,204 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:44 pm, Sat, 18 May 24