ಅಂತೂ SSLC ಪರೀಕ್ಷೆ ವೇಳಾಪಟ್ಟಿ ಪ್ರಕಟವಾಯ್ತು! PUC ಎಕ್ಸಾಂ ಯಾವಾಗ?
ಬೆಂಗಳೂರು: ಮಾರ್ಚ್ 27ರಿಂದ ಏಪ್ರಿಲ್ 9ರವರೆಗೆ ನಡೆಯಬೇಕಿದ್ದ SSLC ಪರೀಕ್ಷೆಗಳು ಮಹಾಮಾರಿ ಕೊರೊನಾದಿಂದಾಗಿ ಮುಂದೂಡಲಾಗಿತ್ತು. ಇಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ SSLC ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಜೂನ್ 25ರಿಂದ ಪರೀಕ್ಷೆಗಳು ಆರಂಭವಾಗಲಿವೆ. ಜೂನ್ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, 4 ವಿಷಯಗಳಿಗೆ ಒಂದೊಂದು ದಿನದ ಅಂತರವಿರಲಿದೆ. ಜೂನ್ 18ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಇರುತ್ತದೆ. ವಿದ್ಯಾರ್ಥಿಗಳು ತಂಗಿರುವ ಕಡೆಯೇ ಪರೀಕ್ಷೆ ಬರೆಯಬಹುದು: ಕೊರೊನಾದಿಂದಾಗಿ ಬೇರೆ ಊರುಗಳಲ್ಲಿ ತಂಗಿರುವ ವಿದ್ಯಾರ್ಥಿಗಳಿಗಾಗಿ ಅವರು […]
ಬೆಂಗಳೂರು: ಮಾರ್ಚ್ 27ರಿಂದ ಏಪ್ರಿಲ್ 9ರವರೆಗೆ ನಡೆಯಬೇಕಿದ್ದ SSLC ಪರೀಕ್ಷೆಗಳು ಮಹಾಮಾರಿ ಕೊರೊನಾದಿಂದಾಗಿ ಮುಂದೂಡಲಾಗಿತ್ತು. ಇಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ SSLC ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಜೂನ್ 25ರಿಂದ ಪರೀಕ್ಷೆಗಳು ಆರಂಭವಾಗಲಿವೆ. ಜೂನ್ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, 4 ವಿಷಯಗಳಿಗೆ ಒಂದೊಂದು ದಿನದ ಅಂತರವಿರಲಿದೆ. ಜೂನ್ 18ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಇರುತ್ತದೆ.
ವಿದ್ಯಾರ್ಥಿಗಳು ತಂಗಿರುವ ಕಡೆಯೇ ಪರೀಕ್ಷೆ ಬರೆಯಬಹುದು: ಕೊರೊನಾದಿಂದಾಗಿ ಬೇರೆ ಊರುಗಳಲ್ಲಿ ತಂಗಿರುವ ವಿದ್ಯಾರ್ಥಿಗಳಿಗಾಗಿ ಅವರು ಈಗಿರುವ ಊರುಗಳಲ್ಲಿಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬಹುದಾಗಿದೆ. ಇದಕ್ಕಾಗಿ ಮೇ 25ರೊಳಗೆ ಪರೀಕ್ಷಾ ಕೇಂದ್ರ ಆಯ್ಕೆ ಮಾಡಿಕೊಳ್ಳಬಹುದು. ಒಟ್ಟು 10 ದಿನಗಳ ಕಾಲ SSLC ಪರೀಕ್ಷೆ ನಡೆಯಲಿದೆ. ಈ ಬಾರಿ ಒಟ್ಟು 8,48,196 ವಿದ್ಯಾರ್ಥಿಗಳು SSLC ಪರೀಕ್ಷೆ ಬರೆಯಲಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಾಸ್ಕ್ ಧರಿಸುವುದು ಕಡ್ಡಾಯ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 2879 ಪರೀಕ್ಷಾ ಕೇಂದ್ರಗಳಲ್ಲಿ 43,720 ಕೊಠಡಿಗಳನ್ನ ಬಳಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪರೀಕ್ಷೆ ವೇಳೆ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಇರುತ್ತದೆ. ಥರ್ಮಲ್ ಸ್ಕ್ರೀನಿಂಗ್ ಸಹ ಪರೀಕ್ಷಾ ಕೇಂದ್ರದಲ್ಲಿ ಬಳಕೆ ಮಾಡಲಾಗುವುದು. ಆರೋಗ್ಯದ ಸಮಸ್ಯೆ ಇದ್ದವರಿಗೆ ಪ್ರತ್ಯೇಕ ವ್ಯವಸ್ಥೆಯಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸುಲು ನಿರ್ಧರಿಸಲಾಗಿದೆ. ಹಾಗೂ ಪರೀಕ್ಷೆ ವೇಳೆ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಇರುತ್ತದೆ. ಥರ್ಮಲ್ ಸ್ಕ್ರೀನಿಂಗ್ ಸಹ ಪರೀಕ್ಷಾ ಕೇಂದ್ರದಲ್ಲಿ ಬಳಕೆ ಮಾಡಲಾಗುತ್ತೆ.
Published On - 3:06 pm, Mon, 18 May 20