SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸಂಬಂಧಿಸಿದ ಮಹತ್ವದ ಮಾರ್ಗಸೂಚಿ ಬಿಡುಗಡೆ: ವಿವರ ಇಲ್ಲಿದೆ

ಕೆಮ್ಮು, ನೆಗಡಿ, ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಇಲ್ಲವೇ ಈ ಲಕ್ಷಣಗಳಿರುವ ಅಭ್ಯರ್ಥಿಗಳಿಗಾಗಿ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಬೇಕೆಂದೂ ಸೂಚಿಸಲಾಗಿದೆ.__

SSLC Exam 2021: ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸಂಬಂಧಿಸಿದ ಮಹತ್ವದ ಮಾರ್ಗಸೂಚಿ ಬಿಡುಗಡೆ: ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: guruganesh bhat

Updated on:Jun 23, 2021 | 4:35 PM

ಬೆಂಗಳೂರು: ಜುಲೈನಲ್ಲಿ ನಡೆಯಲಿರುವ 2022-21ನೇ ಸಾಲಿನ ಎಸ್​ಎಸ್​ಲ್​ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು, ಇದರ ಆಧಾರದ ಮೇಲೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪರೀಕ್ಷೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಜಿಲ್ಲಾಡಳಿತದ ಸಹಕಾರದಿಂದ ಕೊವಿಡ್ ಲಸಿಕೆ ಪಡೆಯಬೇಕಿದೆ. ಪರೀಕ್ಷಾ ವೇಳೆಯೊಳಗೆ ಒಂದು ಡೋಸ್ ಲಸಿಕೆಯನ್ನಾದರೂ ಪಡೆಯುವುದನ್ನು ಖಚಿತಪಡಿಸಿಕೊಳ್ಳಬೇಕಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಎಸ್​ಒಪಿ ಅನುಷ್ಠಾನಗೊಳಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರೀಕ್ಷಾ ಪೂರ್ವದಲ್ಲಿ ಪರಿಶೀಲಿಸುವುದು ಮತ್ತು ಅನುಷ್ಠಾನವನ್ನು ಜಿಲ್ಲಾಧಿಕಾರಿಗಳು, ಸಿಇಒ ಎಸ್​ಒಪಿ ಖಾತರಿಪಡಿಸುವುದರೊಂದಿಗೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರತಿದಿನವೂ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ಪರೀಕ್ಷೆ ನಂತರ ಸೋಂಕು ನಿವಾರಕ ದ್ರಾವಣದಿಂದ ಸ್ಥಳೀಯಾಡಳಿತ ಸಂಸ್ಥೆಗಳ ನೆರವಿನಿಂದ ಪರೀಕ್ಷಾ ಕೇಂದ್ರ, ಪರೀಕ್ಷಾ ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳನ್ನು ಸ್ಯಾನಿಟೈಜೇಷನ್ ಮಾಡುಬೇಕಿದೆ ಪರೀಕ್ಷಾ ಕೇಂದ್ರಕ್ಕೆ ಆಗಮನ ಮತ್ತು ನಿರ್ಗಮನ ಹಾಗೆಯೇ ಕೊಠಡಿ ಪ್ರವೇಶ ಸಮಯದಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳುವುದು. ಪರೀಕ್ಷಾ ಕೇಂದ್ರದ ಪ್ರವೇಶದ ಸಂದರ್ಭದಲ್ಲಿ ಮಕ್ಕಳ ಕೈಗೆ ಸ್ಯಾನಿಟೈಸ್ ಮಾಡುವುದು. ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿ. ಒಂದುಗೆ ಮಾತ್ರ ಅವಕಾಶ ಮಾಡಿಕೊಡಬೇಕು. ಒಂದು ಡೆಸ್ಕ್ ಗೆ ಒಬ್ಬ ಪರೀಕ್ಷಾರ್ಥಿ ಮಾತ್ರವೇ ಇರಬೇಕು. ಮಕ್ಕಳು ಯಾವ ಸಮಯದಲ್ಲೂ ಗುಂಪುಗೂಡುವುದನ್ನು ತಡೆಯುವುದು. ಮನೆಯಿಂದ ನೀರಿನ ಬಾಟಲ್ ಮತ್ತು ಊಟದ ಡಬ್ಬಿ ತರುವುದಕ್ಕೆ ಅವಕಾಶ ಕಲ್ಪಿಸುವುದು. ಪರೀಕ್ಷಾ ಕೊಠಡಿಯಲ್ಲಿ ಮಳೆ ನೀರು ಸಿಂಪಡಿಸದಂತೆ ಕ್ರಮ ವಹಿಸುವುದು. ಗ್ರಾಮೀಣ ವಿಭಾಗದ ಅಭ್ಯರ್ಥಿಗಳು ಸಾಧ್ಯವಾದಷ್ಟು ತಾಲೂಕು ಕೇಂದ್ರಗಳಿಗೆ ಹೋಗದಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದನ್ನು ಖಾತರಿಪಡಿಸಿಕೊಳ್ಳಬೇಕೆಂದು ಎಸ್​ಒಪಿಯಲ್ಲಿ ಸೂಚಿಸಲಾಗಿದೆ.

ವಿಶೇಷ ಕೊಠಡಿ ಕೆಮ್ಮು, ನೆಗಡಿ, ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಇಲ್ಲವೇ ಈ ಲಕ್ಷಣಗಳಿರುವ ಅಭ್ಯರ್ಥಿಗಳಿಗಾಗಿ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಬೇಕೆಂದೂ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಪ್ರವೇಶವಾದೊಡನೆ ನೇರವಾಗಿ ಆರೋಗ್ಯ ತಪಾಸಣಾ ಕೌಂಟರ್ ಪ್ರವೇಶಿಸುವಂತೆ ನಿರ್ದೇಶಿಸುವುದು. ಆರೋಗ್ಯ ಕೌಂಟರ್ ಗಳು ಬೆಳಗ್ಗೆ 8.30ಕ್ಕೆ ಅರಂಭವಾಗಿ ಪರೀಕ್ಷಾ ಪ್ರಕ್ರಿಯೆ ಮುಗಿಯುವ ತನಕ ತೆರದಿರಲಿವೆ. ಥರ್ಮಲ್ ಸ್ಕ್ಯಾನರ್, ಪಲ್ಸ್ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳಿರುವುದನ್ನು ಖಾತರಿಪಡಿಸಬೇಕೆಂದು ಸೂಚಿಸಲಾಗಿದೆ. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ ಗಳಲ್ಲೇ ಮಾಸ್ಕ್ ನೀಡಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ತುರ್ತು ಚಿಕಿತ್ಸಾ ವಾಹನ ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನವನ್ನು ಮೀಸಲಿಡುವುದು. ಪರೀಕ್ಷಾ ಸಿಬ್ಬಂದಿಯೂ ಯಾವುದೇ ಸಂದರ್ಭದಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು. ಅಗತ್ಯ ಬಿದ್ದರೆ ಸಿಬ್ಬಂದಿ ಫೇಸ್ ಶೀಲ್ಡ್ ಬಳಸುವುದು. ಗಡಿ ಭಾಗದ ಪರೀಕ್ಷಾ ಕೇಂದ್ರಗಳಿಗೆ ಹೊರ ರಾಜ್ಯದಿಂದ ಬರುವ ಪರೀಕ್ಷಾರ್ಥಿಗಳಿಗೆ ಅನುವಾಗುವಂತೆ ಪರೀಕ್ಷೆಗಳ ದಿವಸದಂದು ರಾಜ್ಯದ ಗಡಿ ಪ್ರವೇಶಕ್ಕೆ ಜಿಲ್ಲಾಡಳಿತದ ಸಮನ್ವಯದೊಂದಿಗೆ ಕ್ರಮ ವಹಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ರವಾನೆ, ಪರೀಕ್ಷೆ ನಂತರ ಒಎಂಆರ್ ಶೀಟ್ ಗಳ ರವಾನೆ ಕುರಿತು ನಿಗದಿತ ಸೂಚನೆಗಳನ್ನು ಒದಗಿಸಲಾಗಿದ್ದು, ಹಾಗೂ ಆರೋಗ್ಯಕರ ವಾತಾವರಣದಲ್ಲಿ ಪರೀಕ್ಷೆ ಯಶಸ್ಸಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಜೂನ್ 28ರಂದು ವಿಡಿಯೋ ಕಾನ್ಫೆರೆನ್ಸ್ ಪರೀಕ್ಷೆಯನ್ನು ಸುಲಲಿತ ಹಾಗೂ ಆರೋಗ್ಯಕರ ಪರಿಸರದಲ್ಲಿ ನಡೆಸುವ ಸಲುವಾಗಿ ಜೂ. 28ರಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್.ಪಿ ಗಳು, ಡಿಎಚ್ಒ, ಖಜಾನಾಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ. ಸಭೆಯಲ್ಲಿ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರು ಭಾಗಿಯಾಗುವರು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಜುಲೈ 15ರಿಂದ ಪಿಯು ಶೈಕ್ಷಣಿಕ ವರ್ಷ ಆರಂಭ; ಸ್ನೇಹಲ್ ಆರ್ ಮಾಹಿತಿ

CET-KSET Free Coaching: ವಿದ್ಯಾರ್ಥಿಗಳೇ ಗಮನಿಸಿ: ಸಿಇಟಿ, ಕೆಸಿಇಟಿ ಪರೀಕ್ಷೆಗಳಿಗೆ ಉಚಿತ ತರಬೇತಿ; ಎಲ್ಲಿ ಎಂಬ ವಿವರ ಇಲ್ಲಿದೆ

(Karnataka SSLC Exam 2021 education Minister Suresh Kumar released SOP for conducting exam)

Published On - 4:34 pm, Wed, 23 June 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್