ಹುಬ್ಬಳ್ಳಿ: ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ವರೆಗೆ ಎಕ್ಸಾಂ ನಡೆಯಲಿದೆ. ಎರಡು ದಿನದಲ್ಲಿ SSLCಯ ಒಟ್ಟು 6 ವಿಷಯಗಳನ್ನ ಕವರ್ ಮಾಡಲಾಗ್ತಿದೆ. ಇಂದು ಗಣಿತ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ಪರೀಕ್ಷೆ ನಡೆದ್ರೆ, ಜುಲೈ 22 ರಂದು ಕನ್ನಡ, ಹಿಂದಿ, ಇಂಗ್ಲಿಷ್ ಸೇರಿದಂತೆ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಅಂದ್ರೆ ಗಣಿತ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ಸೇರಿ ಒಂದು ಪ್ರಶ್ನೆ ಪತ್ರಿಕೆ ಇರುತ್ತೆ. ಮತ್ತೊಂದು ಪ್ರಶ್ನೆ ಪತ್ರಿಕೆ ಮೂರು ಭಾಷಾ ವಿಷಯಗಳನ್ನ ಸೇರಿಸಿ ಸಿದ್ಧಪಡಿಸಲಾಗಿರುತ್ತದೆ. ಪ್ರತಿ ಪಶ್ನೆ ಪತ್ರಿಕೆ ಒಟ್ಟು 120 ಅಂಕಗಳನ್ನ ಒಳಗೊಂಡಿದ್ದು, ಮೂರು ಮೂರು ವಿಷಯಗಳಿಗೆ ತಲಾ 40 ಅಂಕಗಳ ಪ್ರಶ್ನೆಗಳಿರುತ್ತೆ. ಸದ್ಯ ಇಂದು ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ಪರೀಕ್ಷೆ ಬರೆಯಲು ಆರಂಭಿಸಿದ್ದಾರೆ. ಆದ್ರೆ ಈ ನಡುವೆ ಹುಬ್ಬಳ್ಳಿಯಲ್ಲಿ ಪೊಲೀಸ್ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ.
ಪರೀಕ್ಷಾ ಕೇಂದ್ರ ಕನ್ಫ್ಯೂಶನ್ನಲ್ಲಿದ್ದ ವಿದ್ಯಾರ್ಥಿನಿಗೆ ಪೊಲೀಸ್ ಕಾನ್ಸ್ ಟೇಬಲ್ ಸಹಾಯ ಮಾಡಿದ ಘಟನೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ನಡೆದಿದೆ. ಆದರೆ ಲ್ಯಾಮಿಂಗ್ಟನ್ ಬದಲಾಗಿ ನಗರದ ಬೇರೊಂದು ಕೇಂದ್ರದಲ್ಲಿ ವಿದ್ಯಾರ್ಥಿನಿಯ ಪರೀಕ್ಷೆ ಇತ್ತು. ಪರೀಕ್ಷೆಯ ಟೈಂ ಆದ ಹಿನ್ನೆಲೆ ಪೊಲೀಸ್ ಕಾನ್ಟಟೇಬಲ್ ತನ್ನ ಬೈಕ್ನಲ್ಲೇ ವಿದ್ಯಾರ್ಥಿನಿ ಕರೆದುಕೊಂಡು ಹೋಗಿ ಸರಿಯಾದ ಪರಿಕ್ಷಾ ಕೇಂದ್ರ ಅಂದ್ರೆ ಲ್ಯಾಮಿಂಗ್ಟನ್ ಶಾಲೆಯಿಂದ ದುರ್ಗಾದೇವಿ ಶಾಲೆಗೆ ಕರೆದುಕೊಂಡು ಹೋಗಿ ಸಹಾಯ ಮಾಡಿದ್ದಾರೆ.
ಕೊವಿಡ್ ಕೇರ್ ಸೆಂಟರ್ನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿ
ಇನ್ನು ರಾಮನಗರದಲ್ಲಿ ಪರೀಕ್ಷೆ ಬರೆಯಲು ಕೊರೊನಾ ಪಾಸಿಟಿವ್ ವಿದ್ಯಾರ್ಥಿ ಆಗಮಿಸಿದ್ದು ಆತನಿಗೆ ಕೊವಿಡ್ ಸೆಂಟರ್ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಬಾದಗೆರೆ ಕೊವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ಮಾಡಿಕೊಟ್ಟಿದೆ. ವಿದ್ಯಾರ್ಥಿ ಪೋಷಕರಿಂದ ಪ್ರಮಾಣ ಪತ್ರ ಪಡೆದು ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಜುಲೈ 12 ರಂದು ವಿದ್ಯಾರ್ಥಿಗೆ ಕೊವಿಡ್ ಪಾಸಿಟಿವ್ ಧೃಡವಾಗಿತ್ತು. ಸದ್ಯ ವಿದ್ಯಾರ್ಥಿ ಕೊವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ರೀತಿ ಮತ್ತೊಂದು ಕಡೆ ಕೊಪ್ಪಳ ಜಿಲ್ಲಾಸ್ಪತ್ರೆಯ ಕೊವಿಡ್ ಕೇರ್ ಸೆಂಟರ್ನಲ್ಲಿ ವಿದ್ಯಾರ್ಥಿ ಪರೀಕ್ಷೆ ಬರೆಯುತ್ತಿದ್ದಾರೆ. ನಿನ್ನೆ ಕುಕನೂರ ತಾಲೂಕಿನ ತಳಕಲ್ ಗ್ರಾಮದ ವಿದ್ಯಾರ್ಥಿಗೆ ಕೊರೊನಾ ಸೋಂಕು ಧೃಡಪಟ್ಟಿತ್ತು. ಕುಕನೂರು ತಾಲೂಕಿನ ಇಟಗಿ ಸರ್ಕಾರಿ ಶಾಲೆಯಲ್ಲಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ, ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಕೊವಿಡ್ ಕೇರ್ ಸೆಂಟರ್ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಕೊವಿಡ್ ಕೇರ್ ಸೆಂಟರ್ನಲ್ಲಿ ಓರ್ವ ಪರೀಕ್ಷಾ ಸಿಬ್ಬಂದಿ, ಓರ್ವ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2021 ಜುಲೈ 20, ಸಂಜೆ 4.30ಕ್ಕೆ ಪ್ರಕಟ: ಶಿಕ್ಷಣ ಸಚಿವ ಸುರೇಶ್ ಕುಮಾರ್
Published On - 11:19 am, Mon, 19 July 21