AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Exam 2021: ಜೂ.21ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆ

Karnataka SSLC Exam 2021 Postponed: ಎಸ್​ಎಸ್​ಎಲ್​ಸಿ ಪರೀಕ್ಷೆ ಜೂ.21ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಕೊವಿಡ್​ ಸೋಂಕಿನ ತೀವ್ರತೆ ಹೆಚ್ಚಾಗಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಮುಂದೂಡಿದ್ದಾಗಿ ಸಚಿವ ಸುರೇಶ್​ ಕುಮಾರ್ ತಿಳಿಸಿದ್ದಾರೆ.

Karnataka SSLC Exam 2021: ಜೂ.21ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆ
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
Follow us
Lakshmi Hegde
|

Updated on:May 13, 2021 | 5:05 PM

ಬೆಂಗಳೂರು: ಜೂನ್​ 21ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಮುಂದೂಡಿದ್ದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ತಿಳಿಸಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೆ ಯಾವಾಗ ನಡೆಯುತ್ತದೆ ಎಂದು ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ. ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದ್ದು, ನಂತರದ ದಿನಗಳಲ್ಲಿ ಹೊಸ ದಿನಾಂಕ ತಿಳಿಸುವುದಾಗಿ ಅವರು ಹೇಳಿದ್ದಾರೆ.  ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು, ಶಾಲಾ ಸಂಘಟನೆಗಳು, ಶಿಕ್ಷಕರು, ಪಾಲಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನು ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಬಹುತೇಕ ಎಲ್ಲ ರೀತಿಯ ಆಫ್​ಲೈನ್ ಪರೀಕ್ಷೆಗಳನ್ನೂ ಮುಂದೂಡಲಾಗುತ್ತಿದೆ.  

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಈಗಾಗಲೇ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಇದೀಗ ಮುಂದೆ ಹೋದ ತಕ್ಷಣ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೊವಿಡ್ ಎರಡನೇ ಅಲೆಯ ಪ್ರಭಾವ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಹೊಸ ದಿನಾಂಕವನ್ನು ಪ್ರಕಟಿಸುತ್ತೇವೆ.  ವಿದ್ಯಾರ್ಥಿಗಳು ವಿಚಲಿತರಾಗದೆ ಅಧ್ಯಯನ ಮುಂದುವರಿಸಬೇಕು ಎಂದೂ ಶಿಕ್ಷಣ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊವಿಡ್ ಸೋಂಕು ಪ್ರಸರಣ ಹೆಚ್ಚಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಆಫ್​ಲೈನ್ ಪರೀಕ್ಷೆಗಳನ್ನೂ ಮುಂದೂಡಬೇಕು. ಆನ್​ಲೈನ್​ ಪರೀಕ್ಷೆಗಳನ್ನು ನಿಗದಿಪಡಿಸಿದ ಸಮಯದಲ್ಲಿ ನಡೆಸಲು ಯಾವುದೇ ಸಮಸ್ಯೆಯಿಲ್ಲ ಎಂದು ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವೂ ಹೇಳಿದೆ. ಇನ್ನು ಕರ್ನಾಟಕದಲ್ಲಿ ಮೇ 24ರವರೆಗೂ ಲಾಕ್​ಡೌನ್​ ಇದ್ದು, ಅದು 24ಕ್ಕೆ ಕೊನೆಯಾಗುವ ಸೂಚನೆಯೂ ಕಾಣುತ್ತಿಲ್ಲ. ಈ ಸಮಯದಲ್ಲಿ ಮಕ್ಕಳನ್ನು ಪರೀಕ್ಷೆ ನೆಪದಲ್ಲಿ ಮತ್ತೆ ಹೊರಗೆ ಕರೆದರೆ ಪಾಲಕರಿಗೂ ಆತಂಕ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರೀಕ್ಷೆಯನ್ನೇ ಮುಂದೂಡುವ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: ಆರ್​ಸಿಬಿ ಆಟಗಾರ ಯಜ್ವೇಂದ್ರ ಚಹಲ್ ತಂದೆ- ತಾಯಿಗೆ ಕೊರೊನಾ ಪಾಸಿಟಿವ್; ಮಾಹಿತಿ ಹಂಚಿಕೊಂಡ ಧನಶ್ರೀ ವರ್ಮಾ

UPSC Prelims Exam 2021 Postponed: ಜೂನ್ 27ರ ಯುಪಿಎಸ್​ಸಿ ಪ್ರಿಲಿಮಿನರಿ ಪರೀಕ್ಷೆ ಅಕ್ಟೋಬರ್ 10ಕ್ಕೆ ಮುಂದೂಡಿಕೆ

Published On - 4:50 pm, Thu, 13 May 21

VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ