AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 3ನೇ ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ, ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಕೊವಿಡ್ ಲಸಿಕೆ: ಸಚಿವ ಸುರೇಶ್ ಕುಮಾರ್ ಘೋಷಣೆ

Karnataka SSLC Exam 2021: ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಲಸಿಕೆ ವಿತರಿಸುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.

ಜುಲೈ 3ನೇ ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ, ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಕೊವಿಡ್ ಲಸಿಕೆ: ಸಚಿವ ಸುರೇಶ್ ಕುಮಾರ್ ಘೋಷಣೆ
ಸಚಿವ ಎಸ್. ಸುರೇಶ್ ಕುಮಾರ್
TV9 Web
| Edited By: |

Updated on:Jun 14, 2021 | 4:55 PM

Share

ಬೆಂಗಳೂರು: ಜುಲೈ ತಿಂಗಳ 3ನೇ ವಾರದಲ್ಲಿ ಎರಡು ದಿನಗಳ ಕಾಲ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಲಸಿಕೆ ವಿತರಿಸುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. 6,000  ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಎಲ್ಲಾ ಸಿಬ್ಬಂದಿಗೆ ಲಸಿಕೆ ವಿತರಿಸಲಾಗುವುದು. ಹೀಗಾಗಿ ಜಿಲ್ಲಾ ಉಪನಿರ್ದೇಶಕರು ಮತ್ತು ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳ ಗಮನಕ್ಕೆ ತರುವಂತೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಸೂಚನೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. 

ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವ ಅವಧಿ ಪ್ರಕಟಿಸಿರು ಅವರು, ಜತೆಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಮೌಲ್ಯಾಂಕನ ಅವಧಿ ವಿಸ್ತರಣೆ ಮಾಡಲಾಗಿದೆ ಂದೂ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಿಯು ಉಪನ್ಯಾಸಕ ಸಂಘಟನೆಗಳ ಕೋರಿಕೆ ಮೇರೆಗೆ ಪ್ರಥಮ ಪಿಯುಸಿ ಮೌಲ್ಯಾಂಕನ ಪ್ರಕ್ರಿಯೆ ಅವಧಿ ವಿಸ್ತರಣೆ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಲಾಕ್​ಡೌನ್ ಪೂರ್ಣಗೊಳ್ಳುವವರೆಗೆ ವಿಸ್ತರಣೆ ಮುಂದುವರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

SSLC ಪರೀಕ್ಷೆ ನಡೆಸುವ ಕುರಿತು  ಜೂನ್​ 28ರಂದು ಜಿಲ್ಲಾಧಿಕಾರಿಗಳು, ಸಿಇಒಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.

ಲಾಕ್​ಡೌನ್ ಇರುವ ಜಿಲ್ಲೆಗಳ ಶಿಕ್ಷಕರು ಶಾಲೆಗೆ ಬರಬೇಕಂತಿಲ್ಲ ಜತೆಗೆ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗೆ ಮಾರ್ಗಸೂಚಿ ಪ್ರಕಟವಾಗಿದ್ದು, ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಶಿಕ್ಷಕರು ಪೂರ್ವ ತಯಾರಿ ನಾಳೆಯಿಂದ ಪ್ರಾರಂಭಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.  ಆದರೆ ಲಾಕ್​ಡೌನ್​ ಜಾರಿಯಲ್ಲಿರುವ ಜಿಲ್ಲೆಗಳಿಗೆ ಮಾತ್ರ ಈ ಆದೇಶದಿಂದ ವಿನಾಯಿತಿ ನಿಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ.  ಲಾಕ್​ಡೌನ್ ಜಿಲ್ಲೆಗಳಲ್ಲಿನ ಶಿಕ್ಷಕರು ಮನೆಯಿಂದ ಕೆಲಸ ನಿರ್ವಹಿಸಬೇಕು. ಮಕ್ಕಳ ದಾಖಲಾತಿ, ಕಲಿಕಾ ಪೂರ್ವ ಸಿದ್ಧತೆ ಆರಂಭಿಸಬೇಕು. ನಿರ್ಬಂಧ ಸಡಿಲಿಕೆಯಾದ ಕೂಡಲೇ ಶಾಲೆಗೆ ತೆರಳಿ ಕಾರ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿನ ಹಾಲಿಗೆ ನೀರು ಬೆರೆಸಿ ವಂಚನೆ ಪ್ರಕರಣ ಸಿಐಡಿ ತನಿಖೆಗೆ : ಸಿಎಂ ಯಡಿಯೂರಪ್ಪ ಘೋಷಣೆ

ಪ್ರವಾಸಿ ಗೈಡ್​ಗಳಿಗೂ ಲಾಕ್​ಡೌನ್ ಪರಿಹಾರ ಘೋಷಣೆ; ತಲಾ 5 ಸಾವಿರ ನೀಡುವಂತೆ ಸಚಿವ ಸಿ.ಪಿ.ಯೋಗೇಶ್ವರ್ ಆದೇಶ

( karnataka sslc exam 2021 will be conducted in july 3rd week education minister suresh kumar announced)

Published On - 4:32 pm, Mon, 14 June 21

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ