ಬೆಂಗಳೂರು: ಜುಲೈ ತಿಂಗಳ 3ನೇ ವಾರದಲ್ಲಿ ಎರಡು ದಿನಗಳ ಕಾಲ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಲಸಿಕೆ ವಿತರಿಸುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. 6,000 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಎಲ್ಲಾ ಸಿಬ್ಬಂದಿಗೆ ಲಸಿಕೆ ವಿತರಿಸಲಾಗುವುದು. ಹೀಗಾಗಿ ಜಿಲ್ಲಾ ಉಪನಿರ್ದೇಶಕರು ಮತ್ತು ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳ ಗಮನಕ್ಕೆ ತರುವಂತೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಸೂಚನೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಅವಧಿ ಪ್ರಕಟಿಸಿರು ಅವರು, ಜತೆಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಮೌಲ್ಯಾಂಕನ ಅವಧಿ ವಿಸ್ತರಣೆ ಮಾಡಲಾಗಿದೆ ಂದೂ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಿಯು ಉಪನ್ಯಾಸಕ ಸಂಘಟನೆಗಳ ಕೋರಿಕೆ ಮೇರೆಗೆ ಪ್ರಥಮ ಪಿಯುಸಿ ಮೌಲ್ಯಾಂಕನ ಪ್ರಕ್ರಿಯೆ ಅವಧಿ ವಿಸ್ತರಣೆ ನಿರ್ಧಾರ
ಕೈಗೊಳ್ಳಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಲಾಕ್ಡೌನ್ ಪೂರ್ಣಗೊಳ್ಳುವವರೆಗೆ ವಿಸ್ತರಣೆ ಮುಂದುವರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
SSLC ಪರೀಕ್ಷೆ ನಡೆಸುವ ಕುರಿತು ಜೂನ್ 28ರಂದು ಜಿಲ್ಲಾಧಿಕಾರಿಗಳು, ಸಿಇಒಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.
ಲಾಕ್ಡೌನ್ ಇರುವ ಜಿಲ್ಲೆಗಳ ಶಿಕ್ಷಕರು ಶಾಲೆಗೆ ಬರಬೇಕಂತಿಲ್ಲ
ಜತೆಗೆ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗೆ ಮಾರ್ಗಸೂಚಿ ಪ್ರಕಟವಾಗಿದ್ದು, ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಶಿಕ್ಷಕರು ಪೂರ್ವ ತಯಾರಿ ನಾಳೆಯಿಂದ ಪ್ರಾರಂಭಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. ಆದರೆ ಲಾಕ್ಡೌನ್ ಜಾರಿಯಲ್ಲಿರುವ ಜಿಲ್ಲೆಗಳಿಗೆ ಮಾತ್ರ ಈ ಆದೇಶದಿಂದ ವಿನಾಯಿತಿ ನಿಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ. ಲಾಕ್ಡೌನ್ ಜಿಲ್ಲೆಗಳಲ್ಲಿನ ಶಿಕ್ಷಕರು ಮನೆಯಿಂದ ಕೆಲಸ ನಿರ್ವಹಿಸಬೇಕು. ಮಕ್ಕಳ ದಾಖಲಾತಿ, ಕಲಿಕಾ ಪೂರ್ವ ಸಿದ್ಧತೆ ಆರಂಭಿಸಬೇಕು. ನಿರ್ಬಂಧ ಸಡಿಲಿಕೆಯಾದ ಕೂಡಲೇ ಶಾಲೆಗೆ ತೆರಳಿ ಕಾರ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲಿನ ಹಾಲಿಗೆ ನೀರು ಬೆರೆಸಿ ವಂಚನೆ ಪ್ರಕರಣ ಸಿಐಡಿ ತನಿಖೆಗೆ : ಸಿಎಂ ಯಡಿಯೂರಪ್ಪ ಘೋಷಣೆ
ಪ್ರವಾಸಿ ಗೈಡ್ಗಳಿಗೂ ಲಾಕ್ಡೌನ್ ಪರಿಹಾರ ಘೋಷಣೆ; ತಲಾ 5 ಸಾವಿರ ನೀಡುವಂತೆ ಸಚಿವ ಸಿ.ಪಿ.ಯೋಗೇಶ್ವರ್ ಆದೇಶ
( karnataka sslc exam 2021 will be conducted in july 3rd week education minister suresh kumar announced)
Published On - 4:32 pm, Mon, 14 June 21