Karnataka SSLC Exam 2021: ಸಿಬಿಎಸ್​ಇ ಪರೀಕ್ಷೆ ರದ್ದಿನಂತೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬಗ್ಗೆ ತಕ್ಷಣಕ್ಕೆ ಯಾವುದೇ ತೀರ್ಮಾನವಿಲ್ಲ: ಸಚಿವ ಸುರೇಶ್ ಕುಮಾರ್

Karnataka SSLC Exam News Today: ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಕುರಿತು ಯಾವುದೇ ವದಂತಿ, ಊಹಾಪೋಹಗಳಿಗೂ ಕಿವಿಗೊಡದಿರಿ ಎಂದು ಶಿಕ್ಷಣ ಸಚಿವರೇ ಖಚಿತಪಡಿಸಿದಂತಾಗಿದೆ.

Karnataka SSLC Exam 2021: ಸಿಬಿಎಸ್​ಇ ಪರೀಕ್ಷೆ ರದ್ದಿನಂತೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬಗ್ಗೆ ತಕ್ಷಣಕ್ಕೆ ಯಾವುದೇ ತೀರ್ಮಾನವಿಲ್ಲ: ಸಚಿವ ಸುರೇಶ್ ಕುಮಾರ್
ಸಚಿವ ಎಸ್. ಸುರೇಶ್ ಕುಮಾರ್
Follow us
guruganesh bhat
|

Updated on:Apr 14, 2021 | 5:08 PM

ಬೆಂಗಳೂರು: ಕೇಂದ್ರೀಯ CBSE 10ನೇ ತರಗತಿ ಪರೀಕ್ಷೆ ರದ್ದಾದ ಕಾರಣ ರಾಜ್ಯದ SSLC ಪರೀಕ್ಷೆ ಬಗ್ಗೆಯೂ ಕೆಲವು ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಈ ಕುರಿತು ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್ ಅವರೇ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ SSLC ಪರೀಕ್ಷೆ ಜೂನ್ 21ರಿಂದ ಪ್ರಾರಂಭವಾಗಲಿದೆ. ಪರೀಕ್ಷೆ ನಡೆಯಲು ಇನ್ನೂ ಸಮಯಾವಕಾಶವಿದೆ. ಹೀಗಾಗಿ CBSE ಪರೀಕ್ಷೆಗಳನ್ನು ರದ್ಧು ಮಾಡಿದಂತೆ ರಾಜ್ಯದ ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಕುರಿತು ಈಗಲೇ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಕುರಿತು ಯಾವುದೇ ವದಂತಿ, ಊಹಾಪೋಹಗಳಿಗೆ ಕಿವಿಗೊಡದಿರಿ ಎಂದು ಶಿಕ್ಷಣ ಸಚಿವರೇ ಖಚಿತಪಡಿಸಿದಂತಾಗಿದೆ.

ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯಿಂದಾಗಿ ಶೈಕ್ಷಣಿಕ ವಲಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದಾಗಿ ಸಿಬಿಎಸ್​ಇ ಬೋರ್ಡ್​ನ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ, ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್​ ನಿಶಾಂಕ್​ ಹಾಗೂ ಶಿಕ್ಷಣ ಇಲಾಖೆಯ ಪ್ರಮುಖರು ಸಭೆ ನಡೆಸಿದ್ದರು. ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಇಂದು ಬೆಳಗ್ಗೆ ಆದೇಶ ಹೊರಡಿಸಲಾಗಿತ್ತು. ಈ ಸಂದರ್ಭ ವಿದ್ಯಾರ್ಥಿಗಳ ಹಿತರಕ್ಷಣೆ ಮುಖ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾಗಿ ತಿಳಿದುಬಂದಿತ್ತು.

ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಕಷ್ಟವಿದೆ, ಹಾಗಂತ ಆನ್​ಲೈನ್​ ಪರೀಕ್ಷೆ ನಡೆಸಿದರೂ ದೇಶದ ಎಲ್ಲಾ ಭಾಗಗಳ ಮಕ್ಕಳಿಗೂ ಒಂದೇ ತೆರನಾಗಿ ತಂತ್ರಜ್ಞಾನ ಸೌಲಭ್ಯ ಸಿಗುತ್ತಿದೆ ಎಂದು ಹೇಳಲಾಗುವುದಿಲ್ಲ. ಹೀಗಾಗಿ ಪರೀಕ್ಷೆಗಳನ್ನು ರದ್ದುಪಡಿಸಬೇಕು ಅಥವಾ ಮುಂದೂಡಬೇಕು ಎಂಬ ಕೂಗು ಕೇಳಿಬಂದಿತ್ತು. ಇದೀಗ ಶಿಕ್ಷಣ ಇಲಾಖೆಯ ಜತೆ ನಡೆದ ಸಭೆಯ ಬಳಿಕ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿದ್ದು ಅತಿ ಶೀಘ್ರದಲ್ಲಿ ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದು ಹಾಗೂ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸಿಬಿಎಸ್​ಎ 10ನೆ ತರಗತಿಯ ಪರೀಕ್ಷೆ ರದ್ದುಗೊಳಿಸಿದ ನಂತರ ತಿಳಿಸಿತ್ತು.

ಸಿಬಿಎಸ್​ಇ 10ನೇ ತರಗತಿಯ ಪರೀಕ್ಷೆ ರದ್ದುಗೊಂಡಿರುವುದು ರಾಜ್ಯದಲ್ಲಿಯೂ ಎಸ್​ಎಸ್​ಎಲ್​ಸಿ ಪರೀಕ್ಷೆ ರದ್ದಾಗಲಿದೆ ಎಂಬ ಊಹಾಪೋಹ ಹುಟ್ಟಿಸಿತ್ತು. ಕರ್ನಾಟಕದಲ್ಲಿಯೂ ಕೊವಿಡ್ ಸೋಂಕು ಶರವೇಗದಲ್ಲಿ ಹಬ್ಬುತ್ತಿದೆ. ಕೊರೊನಾ ಸೋಂಕಿನ ಹೆಚ್ಚಲ ಆದ ಕಾರಣ ಪರೀಕ್ಷೆ ನಡೆಯುವುದು ಅನುಮಾನ ಎಂಬ ವದಂತಿಗಳು ಸೃಷ್ಟಿಯಾಗಿದ್ದವು.  ಹೀಗಾಗಿ ಶಿಕ್ಷಣ ಸಚಿವ ಎಸ್​. ಸುರೇಶ್ ಕುಮಾರ್ ಅವರೇ ಸ್ವತಃ ಸ್ಪಷ್ಟನೆ ನೀಡಿದ್ದಾರೆ. CBSE ಪರೀಕ್ಷೆಗಳನ್ನು ರದ್ಧು ಮಾಡಿದಂತೆ ರಾಜ್ಯದ ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಕುರಿತು ಈಗಲೇ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: CBSE Board Exams 2021: ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ದಿನಾಂಕ ಮುಂದೂಡಿಕೆ

Karnataka Exam 2021 News: ಎಲ್ಲವೂ ಸರಿಹೋದ ತಕ್ಷಣ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ; ಡಾ.ಅಶ್ವತ್ಥ ನಾರಾಯಣ

(Karnataka SSLC exams not canceled as CBSE exams Education Minister Suresh Kumar clarifies)

Published On - 4:53 pm, Wed, 14 April 21

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ