AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಆರೋಪ: ಇಲಾಖೆಯಿಂದ ಅಧಿಕೃತ ಸ್ಪಷ್ಟನೆ ಸಾಧ್ಯತೆ

SSLC preparatory exam: ಎಸ್​ಎಸ್​ಎಲ್​​ಸಿ ಪೂರ್ವಸಿದ್ಧತಾ ಪರೀಕ್ಷೆ ಸಹ ರಾಜಕೀಯ ವಿವಾದದ ವಸ್ತುವಾಗಿ ಪರಿಣಮಿಸಿದೆ. ಮಾರ್ಚ್ 1ರ ಶುಕ್ರವಾರ ನಡೆಯಲಿರುವ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಮಾಡಿರುವ ಬದಲಾವಣೆಯೇ ಇದಕ್ಕೆ ಕಾರಣ. ಈ ವಿಚಾರವಾಗಿ ಪರೀಕ್ಷಾ ಮಂಡಲಿ ಈಗಾಗಲೇ ಸ್ಪಷ್ಟನೆ ನೀಡಿದ್ದರೂ ಇಂದು ಶಿಕ್ಷಣ ಇಲಾಖೆ ಅಧಿಕೃತ ಸ್ಪಷ್ಟೀಕರಣ ನೀಡುವ ನಿರೀಕ್ಷೆ ಇದೆ.

ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಆರೋಪ: ಇಲಾಖೆಯಿಂದ ಅಧಿಕೃತ ಸ್ಪಷ್ಟನೆ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 05, 2024 | 7:44 AM

Share

ಬೆಂಗಳೂರು, ಫೆಬ್ರವರಿ 5: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ (sslc preparatory exam) ಮುಸ್ಲಿಂ ತುಷ್ಟೀಕರಣ (Muslim appeasement) ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಶಿಕ್ಷಣ ಇಲಾಖೆ ಇಂದು (ಸೋಮವಾರ) ಅಧಿಕೃತವಾಗಿ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ. ಫೆಬ್ರವರಿ 26ರಿಂದ ಮಾರ್ಚ್ 3ರವರೆಗೆ ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದ್ದು, ಪ್ರತಿ ದಿನ ಬೆಳಗ್ಗೆ 10.15ರಿಂದ ಆರಂಭವಾಗಲಿದೆ. ಆದರೆ ಮಾರ್ಚ್ 1ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವಿಜ್ಞಾನ ಪರೀಕ್ಷೆ ನಿಗದಿಯಾಗಿದೆ. ಮುಸ್ಲಿಮರ ನಮಾಜ್​ಗೆ ಅನುಕೂಲ ಮಾಡಿಕೊಡಲು ವೇಳಾಪಟ್ಟಿ ಬದಲಾವಣೆ ಎಂಬ ಆರೋಪ ಕೇಳಿಬಂದಿದ್ದು, ಪ್ರತಿಪಕ್ಷ ಬಿಜೆಪಿ ನಾಯಕರು ಸಹ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾರ್ಚ್ 1ರಂದು ದ್ವಿತೀಯ ಪಿಯು ಮುಖ್ಯ ಪರೀಕ್ಷೆ ನಡೆಯಲಿದೆ. ಮಾರ್ಚ್ 1ರಂದು ದ್ವಿತೀಯ ಪಿಯುಸಿ ಕನ್ನಡ, ಅರೇಬಿಕ್ ಪರೀಕ್ಷೆ ನಿಗದಿಯಾಗಿದೆ. ಮಾರ್ಚ್ 1ರ ಶುಕ್ರವಾರ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ. ಹೀಗಾಗಿ ಮಾರ್ಚ್ 1ರಂದು ಎಸ್​ಎಸ್​ಎಲ್​ಸಿ ಪ್ರಿಪರೇಟರಿ ಎಕ್ಸಾಂ​ ಮಧ್ಯಾಹ್ನ ನಿಗದಿ ಮಾಡಲಾಗಿದೆ. ಮಾರ್ಚ್ 1ರ ಮಧ್ಯಾಹ್ನ 2 ಗಂಟೆಯಿಂದ ಎಸ್​ಎಸ್​ಎಲ್​ಸಿ ವಿಜ್ಞಾನ ಪ್ರಿಪರೇಟರಿ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಮಂಡಳಿ ಹೇಳುವುದೇನು?

ಮಾರ್ಚ್ 1ರಂದು ದ್ವಿತೀಯ ಪಿಯು ಮುಖ್ಯ ಪರೀಕ್ಷೆ ಬೆಳಗ್ಗೆ ನಡೆಯುವ ಕಾರಣ ಎಸ್​ಎಸ್​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ ನಿಗದಿಮಾಡಲಾಗಿದೆ. ನಮಾಜ್​ಗೆ ಅನುಕೂಲ ಮಾಡಿಕೊಡಲು ಮಧ್ಯಾಹ್ನ ಪರೀಕ್ಷೆ ನಡೆಸುತ್ತಿಲ್ಲ ಎಂದು ಕರ್ನಾಟಕ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಲಾಖೆ ಈ ಸ್ಪಷ್ಟನೆ ನೀಡಿದೆ. ಇದೀಗ ಶಿಕ್ಷಣ ಇಲಾಖೆ ಅಧಿಕೃತವಾಗಿ ಸ್ಪಷ್ಟೀಕರಣ ನೀಡುವ ನಿರೀಕ್ಷೆ ಇದೆ.

ಭಟ್ಕಳ ಹಿಂದೂ ಮುಖಂಡರಿಂದ ಖಂಡನೆ

ಎಸ್‌ಎಸ್ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಮುಸ್ಲಿಂ ತುಷ್ಟೀಕರಣ ಆರೋಪಕ್ಕೆ ಸಂಬಂಧಿಸಿ, ಸರಕಾರದ ನಿಯಮವನ್ನು ಭಟ್ಕಳದ ಹಿಂದೂ ಮುಖಂಡ ಶ್ರೀಕಾಂತ ನಾಯ್ಕ ಖಂಡಿಸಿದ್ದಾರೆ. ಬೆಳಗ್ಗಿನ ನಮಾಜ್‌ಗೆ ಅನುಕೂಲ ಮಾಡಿಕೊಡಲು ಪರೀಕ್ಷೆಯ ವೇಳಾಪಟ್ಟಿಯನ್ನೇ ಸರಕಾರ ಬದಲಾಯಿಸಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಬೆಳಿಗ್ಗೆ ನಮಾಜ್‌ಗೆ ಅನುಕೂಲವಾಗಲು ಪರೀಕ್ಷೆ ವೇಳಾಪಟ್ಟಿಯನ್ನೇ ಶಿಕ್ಷಣ ಇಲಾಖೆ ಬದಲಾಯಿಸಿದೆ-ಹಿಂದೂ ಮುಖಂಡ ಗಂಭೀರ ಆರೋಪ

ಕಾಂಗ್ರೆಸ್ ಸರ್ಕಾರದ ನಿರ್ದೇಶನದಂತೆ ಮುಸ್ಲಿಂ ತುಷ್ಟೀಕರಣಕ್ಕಾಗಿ ರಾಜ್ಯ ಶಿಕ್ಷಣ ಇಲಾಖೆ ಸಮಯ ಬದಲಾಯಿಸಿದೆ. ಶಿಕ್ಷಣ ಕ್ಷೇತ್ರದಲ್ಲೂ ನೇರವಾಗಿ ಸರಕಾರ ಮುಸ್ಲಿಂ ತುಷ್ಟೀಕರಣದ ನಡೆಸುತ್ತಿದೆ ಎಂದು ಹಿಂದೂ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:03 am, Mon, 5 February 24

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ