ಎಸ್​ಎಸ್​ಎಲ್​ಸಿ, ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯ ಮುಖ್ಯ ಆರೋಪಿ ಶಿವಕುಮಾರ್ ಕೊವಿಡ್​ನಿಂದ ನಿಧನ

ಎಸ್​ಎಸ್​ಎಲ್​ಸಿ, ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯ ಮುಖ್ಯ ಆರೋಪಿ ಶಿವಕುಮಾರ್ ಕೊವಿಡ್​ನಿಂದ ನಿಧನ
ಸಾಂಕೇತಿಕ ಚಿತ್ರ

ಇಂದು ತುಮಕೂರು ಜಿಲ್ಲೆಯಲ್ಲಿ 1,562 ಜನರು ಕೊವಿಡ್​ ಸೋಂಕಿಗೆ ತುತ್ತಾಗಿರುವುದು ಪತ್ತೆಯಾಗಿದೆ. ಜಿಲ್ಲೆಯಲ್ಲಿ ದಿನೇ ದಿನೇ ಕೊವಿಡ್ ಸೋಂಕು ವೇಗವಾಗಿ ಹರಡುತ್ತಿದ್ದು ಗ್ರಾಂಮೀಣ ಭಾಗಗಳಲ್ಲಿ ಆತಂಕ ಹೆಚ್ಚಿದೆ.

guruganesh bhat

|

May 18, 2021 | 8:35 PM

ತುಮಕೂರು: ಈ ಹಿಂದೆ ರಾಜ್ಯದಲ್ಲಿ ನಡೆದಿದ್ದ ಎಸ್​ಎಸ್​ಎಲ್​ಸಿ, ಪಿಯುಸಿ ಮತ್ತು ಪೊಲೀಸ್ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಡಿ ವಿಚಾರಣೆ ಎದುರಿಸುತ್ತಿದ್ದ ತುಮಕೂರು ಜಿಲ್ಲೆಯ ಶಿವಕುಮಾರ್ (65) ಕೊವಿಡ್​ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಗುಬ್ಬಿ ತಾಲೂಕಿನ ಬಿದರೆಕಾಗ್ಗೆರೆ ಗ್ರಾಮದ ಶಿವಕುಮಾರ್, ತೀವ್ರ ಉಸಿರಾಟ ಸಮಸ್ಯೆಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಇಂದು ತುಮಕೂರು ಜಿಲ್ಲೆಯಲ್ಲಿ 1,562 ಜನರು ಕೊವಿಡ್​ ಸೋಂಕಿಗೆ ತುತ್ತಾಗಿರುವುದು ಪತ್ತೆಯಾಗಿದೆ. ಜಿಲ್ಲೆಯಲ್ಲಿ ದಿನೇ ದಿನೇ ಕೊವಿಡ್ ಸೋಂಕು ವೇಗವಾಗಿ ಹರಡುತ್ತಿದ್ದು ಗ್ರಾಂಮೀಣ ಭಾಗಗಳಲ್ಲಿ ಆತಂಕ ಹೆಚ್ಚಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡಿಕೆ ಜೂನ್​ 21ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಮುಂದೂಡಿದ್ದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ತಿಳಿಸಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೆ ಯಾವಾಗ ನಡೆಯುತ್ತದೆ ಎಂದು ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ. ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದ್ದು, ನಂತರದ ದಿನಗಳಲ್ಲಿ ಹೊಸ ದಿನಾಂಕ ತಿಳಿಸುವುದಾಗಿ ಅವರು ಹೇಳಿದ್ದಾರೆ.  ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು, ಶಾಲಾ ಸಂಘಟನೆಗಳು, ಶಿಕ್ಷಕರು, ಪಾಲಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನು ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಬಹುತೇಕ ಎಲ್ಲ ರೀತಿಯ ಆಫ್​ಲೈನ್ ಪರೀಕ್ಷೆಗಳನ್ನೂ ಮುಂದೂಡಲಾಗುತ್ತಿದೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಈಗಾಗಲೇ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಇದೀಗ ಮುಂದೆ ಹೋದ ತಕ್ಷಣ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೊವಿಡ್ ಎರಡನೇ ಅಲೆಯ ಪ್ರಭಾವ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಹೊಸ ದಿನಾಂಕವನ್ನು ಪ್ರಕಟಿಸುತ್ತೇವೆ.  ವಿದ್ಯಾರ್ಥಿಗಳು ವಿಚಲಿತರಾಗದೆ ಅಧ್ಯಯನ ಮುಂದುವರಿಸಬೇಕು ಎಂದೂ ಶಿಕ್ಷಣ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊವಿಡ್ ಸೋಂಕು ಪ್ರಸರಣ ಹೆಚ್ಚಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಆಫ್​ಲೈನ್ ಪರೀಕ್ಷೆಗಳನ್ನೂ ಮುಂದೂಡಬೇಕು. ಆನ್​ಲೈನ್​ ಪರೀಕ್ಷೆಗಳನ್ನು ನಿಗದಿಪಡಿಸಿದ ಸಮಯದಲ್ಲಿ ನಡೆಸಲು ಯಾವುದೇ ಸಮಸ್ಯೆಯಿಲ್ಲ ಎಂದು ಇತ್ತೀಚೆಗಷ್ಟೇ ಕೇಂದ್ರ ಸರ್ಕಾರವೂ ಹೇಳಿದೆ. ಇನ್ನು ಕರ್ನಾಟಕದಲ್ಲಿ ಮೇ 24ರವರೆಗೂ ಲಾಕ್​ಡೌನ್​ ಇದ್ದು, ಅದು 24ಕ್ಕೆ ಕೊನೆಯಾಗುವ ಸೂಚನೆಯೂ ಕಾಣುತ್ತಿಲ್ಲ. ಈ ಸಮಯದಲ್ಲಿ ಮಕ್ಕಳನ್ನು ಪರೀಕ್ಷೆ ನೆಪದಲ್ಲಿ ಮತ್ತೆ ಹೊರಗೆ ಕರೆದರೆ ಪಾಲಕರಿಗೂ ಆತಂಕ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರೀಕ್ಷೆಯನ್ನೇ ಮುಂದೂಡುವ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: Karnataka Lockdown: ಕರ್ನಾಟಕ ಲಾಕ್​ಡೌನ್ ವಿಸ್ತರಣೆ; ನಾಳೆ ನಡೆಯಲಿರುವ ಸಭೆಯಲ್ಲೇ ಅಂತಿಮ ತೀರ್ಮಾನ ಖಚಿತ 

1 ತಿಂಗಳು ಲಾಕ್​ಡೌನ್ ವಿಸ್ತರಿಸಿ, ಇಲ್ಲದಿದ್ದರೆ ದೊಡ್ಡ ಅನಾಹುತವೇ ಆಗಲಿದೆ; ಎಚ್ ಡಿ ಕುಮಾರಸ್ವಾಮಿ

(Karnataka SSLC PUC Question Paper Leak Accused Shivakumar died by Covid 19)

Follow us on

Related Stories

Most Read Stories

Click on your DTH Provider to Add TV9 Kannada