KSEEB Result 2022: ಶೇ. 90.29 ಫಲಿತಾಂಶದೊಂದಿಗೆ ವಿದ್ಯಾರ್ಥಿನಿಯರೇ ಮೇಲುಗೈ
KSEEB Result 2022: 2021-22ನೇ ಸಾಲಿನ ಎಸ್ಎಸ್ಎಲ್ಸಿ(SSLC) ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶವನ್ನು ಘೋಷಿಸಿದ್ದಾರೆ.
2021-22ನೇ ಸಾಲಿನ ಎಸ್ಎಸ್ಎಲ್ಸಿ(SSLC) ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶವನ್ನು ಘೋಷಿಸಿದ್ದಾರೆ.ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.85.63 ರಷ್ಟು ಫಲಿತಾಂಶ ಬಂದಿದೆ. ವಾಡಿಕೆಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 90.29ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.
ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ.625ಕ್ಕೆ 625 ಅಂಕಗಳನ್ನು 125 ಮಕ್ಕಳು ಗಳಿಸಿದ್ದಾರೆ. ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಫಲಿತಾಂಶ ವಿದ್ಯಾರ್ಥಿಗಳಿಗೆ ಸಿಕ್ಕಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
8,20,900 ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ನಗರಕ್ಕಿಂತ ಗ್ರಾಮೀಣ ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಎಂದಿನಂತೆ ಗ್ರಾಮೀಣ ವಿದ್ಯಾರ್ಥಿಗಳೇ ಉತ್ತಮ ಸಾಧನೆ ಮಾಡಿದ್ದಾರೆ. ನಗರ ಭಾಗದಲ್ಲಿ ಶೇ.86.64 ಫಲಿತಾಂಶ ದಾಖಲಾದರೆ ಗ್ರಾಮೀಣ ಭಾಗದಲ್ಲಿ ಶೇ.91.32 ರಷ್ಟು ಫಲಿತಾಂಶ ಪ್ರಕಟವಾಗಿದೆ.
ಗ್ರೇಡ್ ಮಾದರಿ: ಇಲ್ಲಿಯವರೆಗೆ ಎಸ್ ಎಸ್ ಎಲ್ ಸಿಯಲ್ಲಿ ಮೊದಲ, ದ್ವಿತೀಯ ಮತ್ತು ತೃತೀಯ ಜಿಲ್ಲೆಗಳೆಂದು ಫಲಿತಾಂಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಪ್ರೌಢ ಶಿಕ್ಷಣ ಇಲಾಖೆ ಗ್ರೇಡ್ ಮಾದರಿಯಲ್ಲಿ ಫಲಿತಾಂಶ ನೀಡಿದೆ.
20 ಶಾಲೆಗಳು ಶೂನ್ಯ ಫಲಿತಾಂಶ ಪಡೆದರೆ, 3,920 ಶಾಲೆಗಳು ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ. ರ‍್ಯಾಂಕ್ ಪದ್ದತಿ ಕೈ ಬಿಟ್ಟ ಇಲಾಖೆ ಈ ಬಾರಿ ಗ್ರೇಡ್ ವ್ಯವಸ್ಥೆಯಲ್ಲಿ ಫಲಿತಾಂಶ ಘೋಷಣೆ ಮಾಡಿದೆ. ಬೆಂಗಳೂರು ದಕ್ಷಿಣ ಮತ್ತು ಯಾದಗಿರಿ ಜಿಲ್ಲೆಗೆ ಬಿ ಗ್ರೇಡ್ ಸಿಕ್ಕಿದರೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಎ ಗ್ರೇಡ್ ಸಿಕ್ಕಿದೆ.
ರಾಜ್ಯಕ್ಕೆ ಸಂಬಂಧಿಸಿದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:41 pm, Thu, 19 May 22