ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿದ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 2ನೇ ಸ್ಥಾನ; ಮರಣ ಪ್ರಮಾಣದಲ್ಲಿ 3ನೇ ಸ್ಥಾನ

ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಇದೀಗ ಎರಡನೇ ಸ್ಥಾನಕ್ಕೆ ಏರಿದೆ. ಉತ್ತರಪ್ರದೇಶ ರಾಜ್ಯವನ್ನು ಹಿಂದಿಕ್ಕಿರುವ ಕರ್ನಾಟಕದಲ್ಲಿ ಪ್ರಸ್ತುತ 3.28 ಲಕ್ಷ ಕೊರೊನಾ ಸಕ್ರಿಯ ಪ್ರಕರಣಗಳಿವೆ.

ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿದ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 2ನೇ ಸ್ಥಾನ; ಮರಣ ಪ್ರಮಾಣದಲ್ಲಿ 3ನೇ ಸ್ಥಾನ
ಸೌಜನ್ಯ : ಅಂತರ್ಜಾಲ
Follow us
Skanda
| Updated By: ರಶ್ಮಿ ಕಲ್ಲಕಟ್ಟ

Updated on: Apr 29, 2021 | 12:43 PM

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಆರ್ಭಟ ನಿರೀಕ್ಷೆಗೂ ಮೀರಿ ಅವಾಂತರ ಸೃಷ್ಟಿಸಿದ್ದು, ಬಹುತೇಕ ಎಲ್ಲಾ ರಾಜ್ಯಗಳು ಒಂದಾದ ಮೇಲೊಂದರಂತೆ ಸೋಂಕಿನ ಹೊಡೆತಕ್ಕೆ ಸಿಲುಕಿ ನಲುಗುತ್ತಿವೆ. ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಇದೀಗ ಎರಡನೇ ಸ್ಥಾನಕ್ಕೆ ಏರಿದೆ. ಉತ್ತರಪ್ರದೇಶ ರಾಜ್ಯವನ್ನು ಹಿಂದಿಕ್ಕಿರುವ ಕರ್ನಾಟಕದಲ್ಲಿ ಪ್ರಸ್ತುತ 3.28 ಲಕ್ಷ ಕೊರೊನಾ ಸಕ್ರಿಯ ಪ್ರಕರಣಗಳಿವೆ. ದೇಶದ ಬೇರೆ ನಗರಗಳಿಗೆ ಹೋಲಿಸಿದರೆ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲೇ ಅತ್ಯಧಿಕ ಪ್ರಕರಣಗಳಿದ್ದು, ಸದ್ಯ 2.24 ಲಕ್ಷ ಸಕ್ರಿಯ ಪ್ರಕರಣಗಳಿರುವುದಾಗಿ ಅಂಕಿ ಅಂಶಗಳು ತಿಳಿಸಿವೆ. ಜತೆಗೆ, ಕೊರೊನಾ ಸೋಂಕಿತರ ಸಾವಿನ ಪ್ರಮಾಣದಲ್ಲಿಯೂ ಕರ್ನಾಟಕ ಆತಂಕಕಾರಿ ಬೆಳವಣಿಗೆಗೆ ಸಾಕ್ಷಿಯಾಗಿದ್ದು, ಅತಿ ಹೆಚ್ಚು ಕೊರೊನಾ ಸೋಂಕಿತರ ಸಾವಿಗೆ ಸಾಕ್ಷಿಯಾಗುತ್ತಿರುವ ರಾಜ್ಯಗಳ ಪೈಕಿ ಮೂರನೇ ಸ್ಥಾನಕ್ಕೇರಿದೆ.

ಕೊರೊನಾ ಸಕ್ರಿಯ ಪ್ರಕರಣಗಳ ವಿಚಾರದಲ್ಲಿ ನೆರೆಯ ಮಹಾರಾಷ್ಟ್ರ ರಾಜ್ಯ ಪ್ರಥಮ ಸ್ಥಾನದಲ್ಲಿದ್ದು 6.75 ಲಕ್ಷ ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿದೆ. ಮೂರನೇ ಸ್ಥಾನದಲ್ಲಿರುವ ಉತ್ತರಪ್ರದೇಶ 3 ಲಕ್ಷ ಸಕ್ರಿಯ ಪ್ರಕರಣಗಳನ್ನೂ ನಂತರದಲ್ಲಿ ಕೇರಳ 2.66 ಲಕ್ಷ, ರಾಜಸ್ಥಾನ1.63 ಲಕ್ಷ, ಗುಜರಾತ್‌ 1.33 ಲಕ್ಷ, ದೆಹಲಿ 1.03 ಲಕ್ಷ ಸಕ್ರಿಯ ಪ್ರಕರಣಗಳನ್ನೂ ಹೊಂದಿವೆ. ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈಗಿಂತ ಬೆಂಗಳೂರಿನಲ್ಲಿ ಅತಿ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಕರ್ನಾಟಕ ರಾಜ್ಯದ ಸೋಂಕಿತರ ಸಂಖ್ಯೆಯಲ್ಲಿ ಅತಿದೊಡ್ಡ ಪಾಲನ್ನು ರಾಜಧಾನಿಯೇ ಹೊಂದಿದೆ.

ಕೊರೊನಾ ಸೋಂಕಿತರ ಸಾವಿನ ಪ್ರಮಾಣದಲ್ಲಿ ಮೂರನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ 15,036 ಜನ ಮೃತಪಟ್ಟಿದ್ದು, ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ 67 ಸಾವಿರ ಜನರು ಹಾಗೂ ಎರಡನೇ ಸ್ಥಾನದಲ್ಲಿರುವ ದೆಹಲಿಯಲ್ಲಿ 15,377 ಜನರು ಕೊರೊನಾ ಸೋಂಕಿಗೆ ತುತ್ತಾಗಿ ಕೊನೆಯುಸಿರೆಳೆದಿದ್ಧಾರೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು, ವೈದ್ಯಕೀಯ ಸೌಲಭ್ಯಗಳ ಅಭಾವಕ್ಕೂ ಕಾರಣವಾಗಿದೆ. ಇನ್ನೊಂದೆಡೆ ಸೂಕ್ತ ವ್ಯವಸ್ಥೆಯ ಕೊರತೆಯಿಂದಾಗಿ ಮರಣ ಪ್ರಮಾಣವೂ ಏರುತ್ತಿರುವುದರಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲು ವೈದ್ಯರು ಹೆಣಗಾಡುವಂತಾಗಿದೆ.

ಇದನ್ನೂ ಓದಿ: Killer Coronavirus| ಭಾರತದಲ್ಲಿ ಯುದ್ಧಗಳಲ್ಲಿ ಸತ್ತವರಿಗಿಂತ ಹೆಚ್ಚಿನ ಮಂದಿ ಕೊರೊನಾದಿಂದ ಸಾವು 

ಮೇ ತಿಂಗಳಿಂದ ದೊರೆಯಲಿರುವ ಸ್ಪುಟ್ನಿಕ್ ವಿ ಲಸಿಕೆ ಭಾರತದ ಪಾಲಿಗೆ ಗೇಮ್ ಚೇಂಜರ್ ಆಗಲಿದೆಯೇ?