Karnataka Budget 2022 Highlights : ಈ ಬಾರಿಯ ಬಜೆಟ್​ನಲ್ಲಿ ಕೃಷಿ, ಆರೋಗ್ಯ, ಶಿಕ್ಷಣಕ್ಕೆ ಭರಪೂರ ಕೊಡುಗೆ; ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ.

Karnataka State Budget 2022-23 Highlights : ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಆರಂಭಿಸಿದ್ದಾರೆ. 2022-23 ನೇ ಸಾಲಿನ ಬಜೆಟ್​ ಮಂಡನೆ ವಿಧಾನಸೌಧದಲ್ಲಿ ಆರಂಭವಾಗಿದೆ. ಕಾಂಗ್ರೆಸ್​ ಆಗ್ರಹಿಸಿದ್ದ ಮೇಕೆದಾಟು ಯೋಜನೆಗೆ1 ಸಾವಿರ ಕೋಟಿ ಕೊಡುಗೆ.

Karnataka Budget 2022 Highlights : ಈ ಬಾರಿಯ ಬಜೆಟ್​ನಲ್ಲಿ ಕೃಷಿ, ಆರೋಗ್ಯ, ಶಿಕ್ಷಣಕ್ಕೆ ಭರಪೂರ ಕೊಡುಗೆ; ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ.
ಸಿಎಂ ಬಸವರಾಜ ಬೊಮ್ಮಾಯಿ

| Edited By: Pavitra Bhat Jigalemane

Mar 04, 2022 | 3:26 PM


Karnataka State Budget 2022-23 Highlights : ಇಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಚೊಚ್ಚಲ ಬಜೆಟ್ (Budget)​ ಮಂಡಿಸುತ್ತಿದ್ದಾರೆ. ಕೊರೊನಾ ನಡುವೆ ಬಿಜೆಪಿ ಸರ್ಕಾರ ಬಜೆಟ್​ ಮಂಡಿಸಲು ತಯಾರಿ ನಡೆಸಿದ್ದು, ಯಾವೆಲ್ಲಾ ಕ್ಷೇತ್ರಕ್ಕೆ ಮೊದಲ ಬಜೆಟ್​ ಬಜೆಟ್​ನಲ್ಲಿ ಸಿಎಂ ಬೊಮ್ಮಾಯಿ ಕೊಡುಗೆ ನೀಡಲಿದ್ದಾರೆ ಎನ್ನುವ ಕುತೂಹಲ ಗರಿಗೆದರಿದೆ. ಮುಂಬರುವ ಚುನಾವಣೆ, ಕೋವಿಡ್​ನಿಂದ ಹದಗೆಟ್ಟ ಆರ್ಥಿಕ ಪರಿಸ್ಥಿತಿ ಯನ್ನು ಗಮನದಲ್ಲಿರಿಸಿ ಈ ಬಾರಿಯ ಬಜೆಟ್​ ಮಂಡನೆಯಾಗುತ್ತಿದೆ. ಬಜೆಟ್ ಮಂಡನೆಗೂ ಮುನ್ನ ದೇವಾಲಯಕ್ಕೆ ಸಿಎಂ ಭೇಟಿ ನೀಡಿದ್ದಾರೆ.  ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸಿಎಂ ಪೂಜೆ ಸಲ್ಲಿಸಿ, ಸಮಸ್ತ ಕರ್ನಾಟಕ ಕ್ಷೇಮೋದಯ ಹೆಸರಲ್ಲಿ ಸಿಎಂ ಅರ್ಚನೆ ಮಾಡಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ 2022-23 ನೇ ಸಾಲಿನ ರಾಜ್ಯ ಬಜೆಟ್​ ಮಂಡನೆ ಆರಂಭಿಸಿದ್ದಾರೆ.

ಕರ್ನಾಟಕ ರಾಜ್ಯ ಬಜೆಟ್​ ಲೈವ್​

LIVE NEWS & UPDATES

The liveblog has ended.
 • 04 Mar 2022 03:20 PM (IST)

  Karnataka Budget 2022 Live: ಹಾಸನಕ್ಕೆ ಹೊಸ ಮಾದರಿಯ ವಿವಿ ಘೋಷಣೆ ಸ್ವಾಗತ- ಸಂಸದ ಪ್ರಜ್ವಲ್​ ರೇವಣ್ಣ

  ಹಾಸನಕ್ಕೆ ಹೊಸ ಮಾದರಿಯ ವಿವಿ ಘೋಷಣೆ ಸ್ವಾಗತ ಎಂದು ಸಂಸದ ಪ್ರಜ್ವಲ್​ ರೇವಣ್ಣ ಹೇಳಿದ್ದಾರೆ.  ಸಿಎಂ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಜ್ಚಲ್, ಇದು ಕೇವಲ‌ ಘೋಷಣೆ ಆಗದೆ,ಜಾರಿ ಮಾಡಲು ಪ್ರಯತ್ನ ಮಾಡಲಿ ಎಂದು ಮನವಿ ಮಾಡಿದ್ದಾರೆ. ನಮ್ಮ ಜಿಲ್ಲೆಯ ಹಲವು ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಕಳೆದ ಮೂರು ವರ್ಷದಿಂದ ನಾವು ಹಳೆ ಯೋಜನೆಗೆ ಬಾಕಿ ಕೇಳಿದ್ದೆ ಆಗಿದೆ. ಇದು ಹಾಗಾಗದಿರಲಿ ಎಂದು ಸಂಸದ ಪ್ರಜ್ಚಲ್ ರೇವಣ್ಣ ಹೇಳಿದ್ದಾರೆ.

 • 04 Mar 2022 03:17 PM (IST)

  Karnataka Budget 2022 Live: ಬೊಮ್ಮಾಯಿ ಮಂಡನೆ ಮಾಡಿರುವ ಬಜೆಟ್ ರಾಜ್ಯದ ಸರ್ವತೋಮುಖ ಬಜೆಟ್- ಬಿ ಎಸ್​ ಯಡಿಯೂರಪ್ಪ

  ಇವತ್ತಿನ ಬೊಮ್ಮಾಯಿ ಮಂಡನೆ ಮಾಡಿರುವ ಬಜೆಟ್ ರಾಜ್ಯದ ಸರ್ವತೋಮುಖ ಬಜೆಟ್ ಆಗಿದೆ.  ಕೃಷಿ , ನೀರಾವರಿ , ನೇಕಾರ ಸಮುದಾಯಕ್ಕೆ ಅನುಕೂಲ ಮಾಡಿದೆ, ಪ್ರಾದೇಶಿಕ ಸಮತೋಲನ ಮಾಡಿದ್ದಾರೆ, ಕರೋನ ನಂತರ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಆಗ್ತಿದೆ. 2,65,720 ಕೋಟಿ ಬಜೆಟ್ ಮಂಡನೆ ಮಾಡಿದ್ದಾರೆ. ಮೋದಿ ಆಶಯದಂತೆ ರೈತರ ಬಗ್ಗೆ ಕಾಳಜಿ ತೋರಿಸಲಾಗಿದೆ
  ಹೈನುಗಾರಿಕೆ ಪ್ರೋತ್ಸಾಹ ನೀಡಿದ್ದಾರೆ, ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ , ಅನುದಾನ ನೀಡಿ ಹೆಚ್ಚು ಒತ್ತು ನೀಡಲಾಗಿದೆ ಎಂದು ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಹೇಳಿದ್ದಾರೆ

 • 04 Mar 2022 03:03 PM (IST)

  ರಾಜ್ಯ ಬಜೆಟ್ ನಮಗೆ ಬೇಸರ ತರಿಸಿದೆ; ಬೆಂಗಳೂರು ಹೊಟೇಲ್ ಸಂಘದ ಅಧ್ಯಕ್ಷ ಪಿ.ಸಿ ರಾವ್

  ರಾಜ್ಯ ಬಜೆಟ್ ನಮಗೆ ಬೇಸರ ತರಿಸಿದೆ ಅಂತ ಬೆಂಗಳೂರು ಹೊಟೇಲ್ ಸಂಘದ ಅಧ್ಯಕ್ಷ ಪಿ.ಸಿ ರಾವ್ ಹೇಳಿಕೆ ನೀಡಿದ್ದಾರೆ. ಪಿಎಫ್ ನೆಪದಲ್ಲಿ ಕಡಿಮೆ ವೇತನ ಪಡೆಯುವವರಿಗೆ 200 ರೂ ತೆರಿಗೆ ಕಡಿತ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, ಕೂಡಲೇ ಈ ತೀರ್ಮಾನವನ್ನ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. ಕರೋನಾದಿಂದ ಹೊಟೇಲ್, ಪ್ರವಾಸೋದ್ಯಮ ವಲಯ ಕೆಳಮಟ್ಟಕ್ಕೆ ಕುಸಿದಿದೆ. ಈ ಬಗ್ಗೆ ಯಾವುದೇ ವಿಚಾರ ಪ್ರಸ್ತಾಪ ಮಾಡದೆ ಇರುವುದು ಬೇಸರದ ಸಂಗತಿ. ಲೈಸನ್ಸ್ ಪಡೆಯುವ ವಿಚಾರದಲ್ಲಿ ತೊಂದರೆ ಆಗ್ತಿರೋದನ್ನ ಬಗೆಹರಿಸೋ ನಿಟ್ಟಿನಲ್ಲಿ ಕ್ರಮ ಕೈಗೊಂಡಿಲ್ಲ ಎಂದರು.

 • 04 Mar 2022 03:00 PM (IST)

  ಬೆಂಗಳೂರು ನಮ್ಮ ಮೆಟ್ರೋ 3ನೇ ಹಂತ ಯೋಜನೆಗೆ 11,250 ಕೋಟಿ

  ಬೆಂಗಳೂರು ನಮ್ಮ ಮೆಟ್ರೋ 3ನೇ ಹಂತ ಯೋಜನೆಗೆ 11,250 ಕೋಟಿ ಅನುದಾನ ನೀಡಲಾಗುತ್ತದೆ. ಮೆಟ್ರೋ ರೈಲು ಯೋಜನೆ ವಿಸ್ತರಣೆ ಸ್ಕೀಮ್‌ಗೆ ಕೇಂದ್ರಕ್ಕೆ ಪ್ರಸ್ತಾವನೆ ನೀಡಲಾಗುವುದು. 15 ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಮೆಟ್ರೋ ಮಾರ್ಗಕ್ಕೆ DPR ತಯಾರಿ ಮಾಡಲಾಗುತ್ತದೆ. 55 ಕೋಟಿ ವೆಚ್ಚದಲ್ಲಿ ಹೊಸ ಮೆಟ್ರೋ ನಿಲ್ದಾಣಗಳ ಸಂಪರ್ಕ ಕಾಮಗಾರಿ ನಡೆಸಲಾಗುತ್ತದೆ. ವೈಟ್‌ಫೀಲ್ಡ್‌, ಕೆ.ಆರ್.ಪುರಂ, ಬೈಯ್ಯಪ್ಪನಹಳ್ಳಿ, ಯಶವಂತಪುರ ನಿಲ್ದಾಣ ಮಾಡಲಾಗುತ್ತದೆ. ಜ್ಞಾನಭಾರತಿ, ಯಲಹಂಕ ರೈಲುನಿಲ್ದಾಣಕ್ಕೆ ಮೆಟ್ರೋ ರೈಲು ನಿಲ್ದಾಣ ಲಿಂಕ್ ಇರುತ್ತದೆ.

 • 04 Mar 2022 02:58 PM (IST)

  ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡಿದ್ದಾರೆ-  ಹೆಚ್ ಕೆ ಪಾಟೀಲ್ ಹೇಳಿಕೆ

  ಅವರೇ ಹೇಳಿರುವ ಹಾಗೇ ರಾಜಸ್ವ ಕೊರತೆ ಆಗಿದೆ. ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡಿದ್ದಾರೆ. ಈ ವರ್ಷದ ಅಂತ್ಯದೊಳಗೆ ನಮ್ಮ ಆರ್ಥಿಕ ಹೊಣೆಗಾರಿಗೆ 5 ಲಕ್ಷ ಕೋಟಿ ರೂಪಾಯಿ ಆಗುತ್ತೆ. ನಾವು ಆರ್ಥಿಕ ಕುಂಟಿತದೆಡೆ ಹೆಜ್ಜೆ ಹಾಕ್ತಾ ಇದಿವಿ. ಈ‌ ಅಂಕಿ ಅಂಶಗಳು ಅದರತ್ತ ಬೆರಳು ತೋರಿಸುತ್ತಾ ಇದೆ. ಹೆಚ್ಚು ಸಾರಾಯಿ ಮಾರ್ತಿವಿ, ಲಾಭ ಮಾಡ್ತಿವಿ ಎನ್ನೋದು ಬಿಟ್ರೆ, ಬಜೆಟ್ ನಲ್ಲಿ ಬೇರೆ ಏನು ಸ್ಪಷ್ಟನೆ ಇಲ್ಲ. ದೊಡ್ಡ ಯೋಜನೆಯೇ ಇಲ್ಲ. ಸಮಗ್ರ ಯೋಜನೆಯ ಬಗ್ಗೆ ಯಾವುದೆ ಚಿಂತನೆ ಇಲ್ಲ. ಹಾವೇರಿ ಜಿಲ್ಲೆ ಬಿಟ್ರೆ ಉ.ಕ. ಭಾಗಕ್ಕೆ ಯಾವುದೇ ಲಾಭ ಇಲ್ಲ ಅಂತ ಹೆಚ್ ಕೆ ಪಾಟೀಲ್ ಹೇಳಿದರು.

 • 04 Mar 2022 02:56 PM (IST)

  2022 ಗ್ರಾಮಿಣ ಕರ್ನಾಟಕಕ್ಕೆ ಅರ್ಥಿಕವಾಗಿ ಶಕ್ತಿ ನೀಡಲಿದೆ- ಸಚಿವ ಗೋವಿಂದ ಕಾರಜೋಳ

  2022 ಗ್ರಾಮಿಣ ಕರ್ನಾಟಕಕ್ಕೆ ಅರ್ಥಿಕವಾಗಿ ಶಕ್ತಿ ನೀಡಲಿದೆ. ನೀರಾವರಿಗೆ ವಿಶೇಷವಾಗಿ 21 ಸಾವಿರ ಕೋಟಿ ಅನುದಾನ ನೀಡಿ ಜನರಿಗೆ ಸಹಾಯ ಮಾಡಿದ್ದಾರೆ.ಭದ್ರಾ , ಮಹದಾಯಿ, ಮೇಕೆದಾಟುವಿಗೂ ಕೂಡ ಹಣ ನೀಡಿದ್ದಾರೆ. ಎಸ್ ಸಿ ಎಸ್ ಟಿ ಮಕ್ಕಳ ವಿದ್ಯಾಭ್ಯಾಸಕ್ಕೂ ಸಹ ಮಾಡಿದ್ದಾರೆ.
  ದಲಿತರ ಹಾಸ್ಟೆಲ್ ಗಳ ನಿರ್ಮಾಣಕ್ಕೆ ಸಹ ಹಣ ನೀಡಿದ್ದಾರೆ. ಇದು ಸಾಮಾಜಿಕ ನ್ಯಾಯದ ಬಜೆಟ್. ಈಗ ನೀಡಿರುವ 21 ಸಾವಿರ ಕೋಟಿ ರೂಪಾಯಿ ಈ ವರ್ಷಕ್ಕೆ ಸಂಬಂಧಿಸಿದ್ದು. ಹಿಂದಿನ ಯಾವುದೇ ರೀತಿಯ ಬಾಕಿ ಇದರಲ್ಲಿ ಇಲ್ಲ ಅಂತ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.

 • 04 Mar 2022 02:54 PM (IST)

  ಮೇಕೆದಾಟು ಯೋಜನೆಗಳಿಗೂ ಅನುದಾನ ಒದಗಿಸಿದ್ದು ವಿಶೇಷ ಬಜೆಟ್- ಗೋವಿಂದ ಕಾರಜೋಳ

  ಗ್ರಾಮೀಣ ಕರ್ನಾಟಕಕ್ಕೆ ಚೈತನ್ಯ ನೀಡುವ ಗಟ್ಟಿ ಧ್ವನಿ ಬಜೆಟ್​ನಲ್ಲಿದೆ. ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಮಹದಾಯಿ, ಮೇಕೆದಾಟು ಯೋಜನೆಗಳಿಗೂ ಅನುದಾನ ಒದಗಿಸಿದ್ದು ವಿಶೇಷ ಬಜೆಟ್. ಕರ್ನಾಟಕದಲ್ಲಿ ನೀರಾವರಿ ಯೋಜನೆ ವೇಗವಾಗಿ ಮಾಡುವುದಕ್ಕೆ ಸಿಎಂ ಒತ್ತು ಕೊಟ್ಟಿದ್ದಾರೆ. ಹೊಸ ಹಾಸ್ಟೆಲ್ ಗಳ ನಿರ್ಮಾಣ ಕ್ಕೆ ಎಸ್​ಸಿ ಎಸ್​ಟಿ ಮಕ್ಕಳಿಗೆ 900ಕೋಟಿ ಅನುದಾನ ನೀಡಲಾಗಿದೆ. ಇದೊಂದು ಸಾಮಾಜಿಕ ನ್ಯಾಯ ಗಮನದಲ್ಲಿಟ್ಟುಕೊಂಡು ಮಂಡಿಸಿದ  ಬಜೆಟ್ ನಲ್ಲಿ ಅನುದಾನ ಮೀಸಲಿಟ್ಡಿರುವುದು ಹೊಸ ಯೋಜನೆಗಳಿಗೆ
  ಆನ್ ಗೋಯಿಂಗ್ ಪ್ರೊಜೆಕ್ಟ್ ಗಳಿಗೆ ಇದು ಹೊರತುಪಡಿಸಿ ಅನುದಾನ ಬಿಡುಗಡೆಯಾಗಿದೆ. 21ಸಾವಿರ ಕೋಟಿ ನಮ್ಮ ಇಲಾಖೆಗೆ ಬಿಡುಗಡೆ ಮಾಡಲಾಗಿದೆ ಅಂತ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.

   

 • 04 Mar 2022 02:51 PM (IST)

  ಬಜೆಟ್ ಮಂಡನೆಗೆ FKCCI ಅಧ್ಯಕ್ಷ IS ಪ್ರಸಾದ್ ಪ್ರತಿಕ್ರಿಯೆ

  ಬಜೆಟ್ ಮಂಡನೆಗೆ FKCCI ಅಧ್ಯಕ್ಷ IS ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. FKCCI ಮುಖ್ಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯಿಸಲಿರುವ ಐಎಸ್ ಪ್ರಸಾದ್, ಕೈಗಾರಿಕೆ, ವಾಣಿಜ್ಯ ವಲಯಕ್ಕೆ ಅನುದಾ‌ನ ಕೇಳಿದ್ವಿ. ಕೈಗಾರಿಕೋದ್ಯಮಕ್ಕೆ 56ಸಾವಿರ ಕೋಟಿ ಅನುದಾನ ಇಟ್ಟಿದ್ದಾರೆ. GST ಸಂಗ್ರಹ ಈ ಆಯವ್ಯಯ ದಿಂದ ಹೆಚ್ಚಳವಾಗುವ ನಿರೀಕ್ಷೆಯಿದೆ. ಬೆಂಗಳೂರಿನ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೂ 31 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. 13 ಸಾವಿರ ಕೋಟಿ ಆರೋಗ್ಯ ಕ್ಷೇತ್ರಕ್ಕೆ ಅನುದಾನ ಕೊಟ್ಟಿದ್ದಾರೆ. ಕೃಷಿ ವಲಯಕ್ಕೆ 36ಸಾವಿರ ಕೋಟಿ ಅನುದಾನ ನೀಡಿದ್ದಾರೆ ಎಂದರು.

 • 04 Mar 2022 02:45 PM (IST)

  ರೈತರಿಗೆ ಪರಿಷ್ಕೃತ ರೂಪದಲ್ಲಿ ಯಶಸ್ವಿನಿ ಯೋಜನೆ ಮರುಜಾರಿ

  ರೈತರಿಗೆ ಪರಿಷ್ಕೃತ ರೂಪದಲ್ಲಿ ಯಶಸ್ವಿನಿ ಯೋಜನೆ ಮರುಜಾರಿ ಮಾಡಲು ಬಜೆಟ್​ನಲ್ಲಿ ನಿರ್ಧರಿಸಲಾಗಿದೆ. ಯೋಜನೆಗೆ ರಾಜ್ಯ ಸರ್ಕಾರದಿಂದ 300 ಕೋಟಿ ರೂ. ಅನುದಾನ ನೀಡಲಾಗುವುದು. 57 ತಾಲೂಕುಗಳಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಮಾಡಲಾಗುತ್ತದೆ. ಜಲಾನಯನ ಅಭಿವೃದ್ಧಿ ಘಟಕ 2.0 ಜಾರಿ ಮಾಡಲಾಗುವುದು. ಬಳ್ಳಾರಿ ಜಿಲ್ಲೆ ಹಗರಿ, ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಕೃಷಿ ಕಾಲೇಜು ನಿರ್ಮಾಣ ಮಾಡಲಾಗುತ್ತದೆ.

 • 04 Mar 2022 02:43 PM (IST)

  ಬಜೆಟ್ ಭಾಷಣ ಮುಗಿಸಿದ ಸಿಎಂ

  ಸುಮಾರು 2 ಗಂಟೆಗಳ ಕಾಲ ಬಜೆಟ್ ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಮುಕ್ತಗೊಳಿಸಿದ್ದಾರೆ.

 • 04 Mar 2022 02:42 PM (IST)

  ಬಜೆಟ್ ಮೇಲೆ ಇದ್ದ ನಿರೀಕ್ಷೆ ಹುಸಿಯಾಗಿದೆ- CITUC ಅಧ್ಯಕ್ಷೆ ಎಸ್ ವರಲಕ್ಷ್ಮಿ

  ಬಜೆಟ್ ಮೇಲೆ ಇದ್ದಂತಹ ನಿರೀಕ್ಷೆ ಹುಸಿಯಾಗಿದೆ ಅಂತ ಸಿಐಟಿಯುಸಿ (CITUC) ಅಧ್ಯಕ್ಷೆ ಎಸ್ ವರಲಕ್ಷ್ಮಿ ಹೇಳಿಕೆ ನೀಡಿದ್ದಾರೆ. ಆಶಾ , ಅಂಗನವಾಡಿ, ಬಿಸಿಯೂಟ, , ಗ್ರಾಮಪಂಚಾಯಿತಿ ಸೇರಿದಂತೆ ಹಲವು ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಾ ಬಂದಿದ್ದೀವಿ. ಕೊರೋನಾ ಇದ್ದಂತಹ ಸಂದರ್ಭದಲ್ಲಿ ನಮಗೆ ಹೊರಟ ಮಾಡಲು ಬಿಟ್ಟಿರಲಿಲ್ಲ. ಬಿಜೆಪಿ ಸರ್ಕಾರ ಬಂದನೇಲೆ ಮೂರರಿಂದ ನಾಲ್ಕು ಬಾರಿ ಸಚಿವರ ಬಳಿ ಜಂಟಿ ಸಭೆಗಳಾಗಿವೆ. ಆ ಸಭೆಯಲ್ಲಿ ನಾವು ಇಟ್ಟಿರುವ ಬೇಡಿಕೆಗಳನ್ನ ಈಡೇರುಸುವುದಾಗಿ ಹೇಳಿದ್ದರು. ಅಂಗವವಾಡಿ ಕಾರ್ಯಕರ್ತೆಯರಿಗೆ ಸಾರ್ವಿಸ್ ವೆಂಟೇಜ್ 500 ರಿಂದ 2000 ಸಾವಿರ ಹೆಚ್ಚಳ ಮಾಡುವುದಾಗಿ ಹೇಳಿದ್ದರು. ಸಹಾಯಕಿ ಅಂಗನವಾಡಿ ಕಾರ್ಯಕರ್ತೆಯರಿಗೆ 1700 ರೂಪಾಯಿ ಹೆಚ್ಚಳ ಮಾಡುವುದಾಗಿ ಹೇಳಿದ್ದರು. ಈ ಕುರಿತಾಗಿ ಶಶಿಕಲಾ ಕೊಲ್ಲೆಯವರು ಇದ್ದಾಗಲೇ ತಿಳಿಸಿದ್ದೆವು. ಅದು ಶಿಫಾರಸ್ಸು ಕೂಡ ಆಗಿದೆ ಎಂದು ಹೇಳಿದ್ರು. ಆದ್ರೆ ಬಜೆಟ್​ನಲ್ಲಿ ಅದು ಯಾವುದು ಕಾಣುಸ್ತಾ ಇಲ್ಲ. ಬಿಸಿಯೂಟ ನೌಕರರಿಗೆ ಸಂಭಂದಿಸದಂತೆ ರಾಜ್ಯದಲ್ಲಿ ಹಲವು540 ಕೇಸ್ ಗಳು ದಾಖಲಾಗಿವೆ. ಈ ಕುರಿತಾಗಿ ಪ್ರಮಾಣಪತ್ರವನ್ನ ಸಲ್ಲಿಸಿದ್ದಾರೆ. ಇವರುಗಳಿಗೆ 6 ಸಾವಿರ ವೇತನ ಹೆಚ್ಚಳ ಮಾಡುವುದಾಗಿ ಹೇಳಿದ್ರು‌. ಆದ್ರೆ ಕೇವಲ 1 ಸಾವಿರಾ ಹೆಚ್ಚಳ ಮಾಡಿದ್ದಾರೆ. ನಮ್ಮ ನಿರೀಕ್ಷೆ ಹುಸಿಯಾಗಿದೆ. ನಾವು ಹೋರಾಟವನ್ನ ಮುಂದುವರಿಸುತ್ತೇವೆ. ಇಂದು ನಾಲ್ಕು ಗಂಟೆಯ ನಂತರ ಆಹೋರಾತ್ರಿ ಧರಣಿ ಮಾಡ್ತಿವಿ. ಸಂಭಂದಪಟ್ಟ ಸಚಿವರು ಸ್ಥಳಕ್ಕೆ ಬಂದು ನಮ್ಮ‌ಬೇಡಿಕೆಯನ್ನ ಸ್ವೀಕರಿಸಬೇಕು. ಇಂದು ಸಂಜೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡ್ತಿವಿ ಎಂದರು.

 • 04 Mar 2022 02:39 PM (IST)

  ಜೋಗ ಜಲಪಾತದಲ್ಲಿ 116 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೋಟೆಲ್ ಹಾಗೂ ರೋಪ್‍ವೇ ಅಭಿವೃದ್ಧಿ

  ಹಂಪಿ, ಬಾದಾಮಿ. ಐಹೊಳೆ, ಪಟ್ಟದಕಲ್ಲು, ವಿಜಯಪುರ ಪ್ರವಾಸಿ ವೃತ್ತವನ್ನು ಮತ್ತು ಮೈಸೂರು, ಶ್ರೀರಂಗಪಟ್ಟಣ, ಹಾಸನ, ಬೇಲೂರು, ಹಳೇಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಬೇಲೂರು, ಹಳೇಬೀಡು, ಸೋಮನಾಥಪುರಗಳನ್ನು ಒಳಗೊಂಡಂತೆ ಹೊಯ್ಸಳರ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಜೋಗ ಜಲಪಾತದಲ್ಲಿ 116 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೋಟೆಲ್ ಹಾಗೂ ರೋಪ್‍ವೇ ಅಭಿವೃದ್ಧಿ ಮಾಡಲಾಗುತ್ತದೆ. ನಂದಿ ಬೆಟ್ಟದಲ್ಲಿ 93 ಕೋಟಿ ರೂ. ವೆಚ್ಚದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಅನುಮೋದನೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಮಾಡಲಾಗುತ್ತದೆ. ಪರ್ವತ ಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಹಾಗೂ ಮುಳ್ಳಯ್ಯನಗಿರಿ ದತ್ತಪೀಠಗಳಲ್ಲಿ ರೋಪ್‍ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ನೀಡಲಾಗಿದೆ. ಕಡಲತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಸಿಆರ್‌ಝೆಡ್ ಮಾನದಂಡಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಅನುಮೋದನೆ ಪಡೆಯಲು ಕ್ರಮಕೈಗೊಳ್ಳಲಾಗುತ್ತದೆ. ತದಡಿ ಬಂದರಿನಲ್ಲಿ ಸಮಗ್ರ ಪರಿಸರ-ಪ್ರವಾಸೋದ್ಯಮ ಕೇಂದ್ರ ಅಭಿವೃದ್ಧಿ ಮಾಡಲಾಗುತ್ತದೆ. ಪಾರಂಪರಿಕ ಪ್ರವಾಸಿ ತಾಣಗಳಾದ ಬೀದರ್ ಹಾಗೂ ಕಲಬುರಗಿ ಕೋಟೆಗಳ ಪುನರುಜ್ಜೀವನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ.

 • 04 Mar 2022 02:36 PM (IST)

  ರೈತ ಶಕ್ತಿ ಯೋಜನೆ ಜಾರಿಗೊಳಿಸಲು 600 ಕೋಟಿ ರೂ ಅನುದಾನ

  ರೈತ ಶಕ್ತಿ ಯೋಜನೆ ಜಾರಿಗೊಳಿಸಲು 600 ಕೋಟಿ ರೂ ಅನುದಾನ ನೀಡಲಾಗುತ್ತದೆ. ಪ್ರತಿ ಎಕರೆಗೆ 250 ರೂಪಾಯಿಯಂತೆ ಡೀಸೆಲ್‌ಗಾಗಿ ಸಹಾಯಧನ ನೀಡಲಾಗುತ್ತದೆ. ಕೆಪೆಕ್ ಮೂಲಕವೇ ಕೃಷಿ ಉತ್ಪನ್ನಗಳ ಕೊಯ್ಲಿನೋತ್ತರ ನಿರ್ವಹಣೆ ಮಾಡಲಾಗುತ್ತದೆ. ಕೃಷಿ ಉತ್ಪನ್ನಗಳ ಮಾರಾಟ, ರಫ್ತು ಮಾಡಲು 50 ಕೋಟಿ ಅನುದಾನ ನೀಡಲಾಗುತ್ತದೆ. ಎಲ್ಲಾ ಜಿಲ್ಲೆಗಳಲ್ಲೂ ಪಿಪಿಪಿ ಮಾದರಿಯಲ್ಲಿ ಮಿನಿ ಆಹಾರ ಪಾರ್ಕ್ ಮಾಡಲಾಗುತ್ತದೆ. ದ್ರಾಕ್ಷಿ ಬೆಳೆ ಸಂಗ್ರಹಣೆ, ಸಂಸ್ಕರಣೆಗೆ ಶೀಥಲೀಕರಣ ಘಟಕ ಸ್ಥಾಪನೆ ಮಾಡಲಾಗುತ್ತದೆ. 35 ಕೋಟಿ ರೂಪಾಯಿ ವೆಚ್ಚದಲ್ಲಿ ಶೀಥಲೀಕರಣ ಘಟಕ ಹಾಗೂ ದ್ರಾಕ್ಷಿ ಸಾಗಾಣಿಕೆಗೆ ಶೀಥಲೀಕರಣ ಸರಕು ಸಾಗಣೆ ವಾಹನ ನೀಡಲಾಗುತ್ತದೆ. 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆ ಗುರಿ ಇದೆ. 3 ಲಕ್ಷ ಹೊಸ ರೈತರು ಸೇರಿದಂತೆ ಒಟ್ಟು 33 ಲಕ್ಷ ರೈತರಿಗೆ ಸಾಲ ನೀಡಲಾಗುತ್ತದೆ. ಬಡ್ಡಿ ರಿಯಾಯಿತಿ ಯೋಜನೆಯಡಿ ಸಾಲ ವಿತರಣೆ ಮಾಡಲಾಗುತ್ತದೆ.

 • 04 Mar 2022 02:34 PM (IST)

  ರಸ್ತೆ, ರೈಲು ಮಾರ್ಗ ಮತ್ತು ವಿಮಾನ ನಿಲ್ದಾಣ ಅಭಿವೃದ್ಧಿ

  ರಸ್ತೆ, ರೈಲು ಮಾರ್ಗ ಮತ್ತು ವಿಮಾನ ನಿಲ್ದಾಣ ಅಭಿವೃದ್ಧಿ ಮಾಡಲಾಗುತ್ತದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ-4ರ ಘಟ್ಟ-2 ರಡಿ ಒಟ್ಟು 2,275 ಕಿ.ಮೀ. ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 3,500 ಕೋಟಿ ರೂ. ರೂ ನೀಡಲಾಗುತ್ತದೆ. ಜೀವಿತಾವಧಿ ಮೀರಿದ 1,008 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳ ಮರು ಡಾಂಬರೀಕರಣಕ್ಕೆ 440 ಕೋಟಿ ರೂ. ಅನುದಾನ ನೀಡಲಾಗಿದೆ. 640 ಕೋಟಿ ಅಂದಾಜು ವೆಚ್ಚದ 55 ಕಿ.ಮೀ. ಉದ್ದದ ಗದಗ-ಯಲವಿಗಿ ನೂತನ ರೈಲು ಮಾರ್ಗ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ. 927 ಕೋಟಿ ರೂ. ವೆಚ್ಚದ ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮಕಯಗೊಳ್ಳಲಾಗುತ್ತದೆ. ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ಅನುಷ್ಠಾನಕ್ಕೆ ಕೇಂದ್ರದೊಂದಿಗೆ ಸಹಯೋಗ ಮಾಡಲಾಗುವುದು. ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದಲ್ಲಿರುವ ನದಿಗಳ ಹೂಳೆತ್ತುವಿಕೆ ಮತ್ತು ಹೊಸ ಕೆರೆ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಹಭಾಗಿತ್ವದಲ್ಲಿ ಹೊಸ ಯೋಜನೆ ಜಾರಿಯಾಗುತ್ತದೆ. 186 ಕೋಟಿ ರೂ. ವೆಚ್ಚದಲ್ಲಿ ರಾಯಚೂರಿನಲ್ಲಿ ಗ್ರೀನ್-ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ. ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಕಾರ್ಯಸಾಧ್ಯತಾ ವರದಿ ತಯಾರಿ ಮಾಡಲಾಗುತ್ತದೆ.

 • 04 Mar 2022 02:31 PM (IST)

  5 ಜಿಲ್ಲೆಗಳ 15 ಕೈಗಾರಿಕಾ ಪ್ರದೇಶಗಳ ವಿದ್ಯುತ್ ಅಡಚಣೆ ನಿವಾರಣೆಗೆ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಿಂದ ಕ್ರಮ

  5 ಜಿಲ್ಲೆಗಳ 15 ಕೈಗಾರಿಕಾ ಪ್ರದೇಶಗಳ ವಿದ್ಯುತ್ ಅಡಚಣೆ ನಿವಾರಣೆಗೆ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಿಂದ ಕ್ರಮ ಕೈಗೊಳ್ಳಲಾಗುವುದು. ಶರಾವತಿ ಸಂಕೀರ್ಣದಲ್ಲಿ 5,391 ಕೋಟಿ ರೂ. ಅಂದಾಜು ವೆಚ್ಚದಲ್ಲಿ 2,000 ಮೆ.ವ್ಯಾ. ಸಾಮರ್ಥ್ಯ ಭೂಗರ್ಭ ವಿದ್ಯುತ್ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಎಸ್ಕಾಂ ವತಿಯಿಂದ 64 ಹೊಸ ಉಪಕೇಂದ್ರಗಳ ಸ್ಥಾಪನೆ ಮಾಡಲಾಗುವುದು. ಗ್ರೀನ್ ಹೈಡ್ರೋಜನ್ ನೀತಿ ರೂಪಿಸಲು ಚಿಂತನೆ ನಡೆಸಲಾಗಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಸುಮಾರು 5,000 ಮೆಗಾ ವ್ಯಾಟ್ ಸಾಮರ್ಥ್ಯ ದ ಹೈಬ್ರಿಡ್ ಪಾರ್ಕ್ ಸ್ಥಾಪನೆಯ ಕಾರ್ಯಸಾಧ್ಯತೆ ಪರಿಶೀಲನೆ ಮಾಡಲಾಗುತ್ತದೆ.

 • 04 Mar 2022 02:30 PM (IST)

  ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ

  ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ ನೀಡಲು ನಿರ್ಧರಿಸಲಾಗಿದೆ. ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ, 3.9 ಲಕ್ಷ ಮಹಿಳೆಯರಿಗೆ ಅನುಕೂಲ ಸಿಗಲಿದೆ. ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ ಮಾಡಲಾಗುತ್ತದೆ. ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಪ್ಯಾಕಿಂಗ್ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು ಅಸ್ಮಿತೆ ಹೆಸರಿನಡಿ ಎಲ್ಲಾ ಉತ್ಪನ್ನಗಳ ಮಾರಾಟ, ಹೋಬಳಿ ಜಿಲ್ಲೆ ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ ಆಯೋಜನೆ ಮಾಡಲಾಗಿದೆ. ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ - ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರಿನಲ್ಲಿ ಸೀರೆ ಮೈಕ್ರೋ ಕ್ಲಸ್ಟರ್ ಅಭಿವೃದ್ಧಿ ಮಾಡಲಾಗುವುದು.

 • 04 Mar 2022 02:23 PM (IST)

  Karnataka Budget 2022 Live: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ಮೀಸಲು

  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ಮೀಸಲಿಡಲಾಗಿದೆ.  ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮರ್ಥ್ಯ ದ ಬಹುಮಹಡಿಯ ದೀನ್‍ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ
  ಪ್ರತಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಒಂದು ಶಾಲೆಯನ್ನು ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಾಗಿ ಮರುನಾಮಕರಣ, ಪದವಿ ಪೂರ್ವ ತರಗತಿ ಪ್ರಾರಂಭ, ಸಿಬಿಎಸ್‍ಇ ಮಾನ್ಯತೆ ಪಡೆಯಲು ಕ್ರಮ, 25 ಕೋಟಿ ರೂ. ಅನುದಾನ
  ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸಲಾಗುವುದು.  ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳ ಗುರಿಯಲ್ಲಿ ಶೇ.25ರಷ್ಟು ಮಹಿಳೆಯರಿಗೆ ಮೀಸಲು
  ಗಂಗಾ ಕಲ್ಯಾಣ ಯೋಜನೆಯಲ್ಲಿ ಸುಧಾರಣೆಗೆ ಕ್ರಮ ಕಯಗೊಳ್ಳಲಾಗುವುದು.

 • 04 Mar 2022 02:16 PM (IST)

  Karnataka Budget 2022 Live: ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ

  ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ ನೀಡಲಾಗುವುದು. ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ, 3.9 ಲಕ್ಷ ಮಹಿಳೆಯರಿಗೆ ಅನುಕೂಲ, ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ ಮಾಡಲಾಗುವುದು. ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಪ್ಯಾಕಿಂಗ್ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು ಅಸ್ಮಿತೆ ಹೆಸರಿನಡಿ ಎಲ್ಲಾ ಉತ್ಪನ್ನಗಳ ಮಾರಾಟ, ಹೋಬಳಿ ಜಿಲ್ಲೆ ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ ಆಯೋಜನೆ. ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ - ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರಿನಲ್ಲಿ ಸೀರೆ ಮೈಕ್ರೋ ಕ್ಲಸ್ಟರ್ ಅಭಿವೃದ್ದಿ ಮಾಡಲಾಗುವುದು ಎಂದು ಈ ಬಾರಿಯ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

 • 04 Mar 2022 02:13 PM (IST)

  Karnataka Budget 2022 Live: ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ

  ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡಲಾಗಿದೆ.  ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ, ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ ನೀಡಲಾಗಿದೆ.  ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ. ನೋಡಿ ಕಲಿ ಮಾಡಿ ತಿಳಿ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ, ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಲಾಗುವುದು. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ವಿನೂತನ ಮಾದರಿಯ ಏಳು ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

 • 04 Mar 2022 02:10 PM (IST)

  Karnataka Budget 2022 Live: ಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 438 ನಮ್ಮ ಕ್ಲಿನಿಕ್ ಗಳ ಸ್ಥಾಪನೆ

  ಬೆಂಗಳೂರಿನ ಎಲ್ಲಾ ವಾರ್ಡ್‌ ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 438 ನಮ್ಮ ಕ್ಲಿನಿಕ್ ಗಳ ಸ್ಥಾಪನೆ ಮಾಡಲಾಗುವುದು.  ರಾಜ್ಯದಲ್ಲಿ ಮಹಿಳಾ ಆರೋಗ್ಯ ಸಮಸ್ಯೆಗಳಿಗೆ ಸಲಹೆ ನೀಡಲು 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ. ಬಡ ಹಿರಿಯ ನಾಗರಿಕರಿಗೆ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ಸೌಲಭ್ಯ, ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದ್ರೋಗ ಕೇಂದ್ರ ಸ್ಥಾಪನೆ. ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ. ಆಯ್ದ 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ನೀಡುವ ಘಟಕ ಸ್ಥಾಪನೆ, ಏಳು ತಾಲ್ಲೂಕು ಆಸ್ಪತ್ರೆಗಳು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ತರಲಾಗುವುದು, ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆ, 10 ಕೋಟಿ ರೂ. ಅನುದಾನ ನೀಡಿದ್ದಾರೆ.

 • 04 Mar 2022 02:07 PM (IST)

  Karnataka Budget 2022 Live: ಬೆಳಗಾವಿ, ಅಥಣಿ, ಬಳ್ಳಾರಿಯ ಹಗರಿಯಲ್ಲಿ ನೂತನ ಕೃಷಿ ಕಾಲೇಜು ನಿರ್ಮಾಣ

  ಬೆಳಗಾವಿ, ಅಥಣಿ, ಬಳ್ಳಾರಿಯ ಹಗರಿಗೆ ನೂತನ ಕೃಷಿ ಕಾಲೇಜು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಕಲಬುರಗಿ ಹಾವೇರಿಯಲ್ಲಿ ಹೈಟೆಕ್ ಸರ್ಕಾರಿ ರೇಮ್ಮೆಗೂಡು ಮಾರುಕಟ್ಟೆ, ರಾಜ್ಯದಲ್ಲಿ ರೇಮ್ಮೆಗೂಡು ಮಾರಾಟ ಮಾಡುವ ಪ್ರತಿ ಟನ್​​ಗೆ
  10000 ಸಾವಿರ ಪ್ರೋತ್ಸಹ ಧನ, ಹಾಲು ಉತ್ಪದಕರಿಗೆ ಸಾಲ ಸೌಲಭ್ಯ, ಕ್ಷೀರ ಸಂಮೃಧ್ದಿ ಸಹಕಾರಿ ಬ್ಯಾಂಕ್​ ಸ್ಥಾಪನೆ, 100 ಕೋಟಿ ಶೇರು ಬಂಡವಾಳ ನೀಡಲಾಗುವುದು.  ರಾಜ್ಯದ ಗೋಶಾಲೆಗಳ ಸಂಖ್ಯೆ ಹೆಚ್ಚಳ, 100ಕ್ಕೆ ಹೆಚ್ಚಳ 50 ಕೋಟಿ ಅನುದಾನ. ಹಾವೇರಿಯಲ್ಲಿ ಮೇಗಾ ಡೈರಿ ಸ್ಥಾಪನೆ ಹಾಗೂ 4 ಜಿಲ್ಲೆಗಳಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದ್ದಾರೆ.

 • 04 Mar 2022 02:03 PM (IST)

  Karnataka Budget 2022 Live: ಕೃಷಿ ಯಂತ್ರೋಪಕರ ಬಳಕೆ ಉತ್ತೇಜನಕ್ಕೆ ರೈತರ ಶಕ್ತಿ ಯೋಜನೆ

  ರೈತರ ಆದಾಯ ಹೆಚ್ಚಳಕ್ಕೆ ಆದ್ಯತೆ ನೀಡಲಾಗಿದೆ. ಕೃಷಿ ಯಂತ್ರೋಪಕರ ಬಳಕೆ ಉತ್ತೇಜನಕ್ಕೆ 'ರೈತರ ಶಕ್ತಿ' ಯೋಜನೆ ಜಾರಿಗೆ ತರಲಾಗುವುದು.  ಪ್ರತಿ ಎಕರೆಗೆ 250 ಡೀಸೆಲ್​ ಸಹಾಯ ಧನ, ರೈತರ ಶಕ್ತಿಗೆ 600 ಕೋಟಿ ಅನುದಾನ ನೀಡಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್​ ಸ್ಥಾಪನೆ ಮಾಡಲಾಗುವುದು. ಬಡ್ಡಿ ರಿಯಾಯಿತಿ ಯೋಜನೆ ಅಡಿ 33 ಲಕ್ಷ
  ರೈತರಿಗೆ 24 ಸಾವಿರ ಕೋಟಿ ಸಾಲ ಸೌಲಭ್ಯ ನೀಡಲಾಗುವುದು ಎಂದು ಘೋಷಣೆ ಮಡಿದ್ದಾರೆ. ಗ್ರಾಮೀಣ ರೈತರ ಆರೋಗ್ಯ ಸೇವೆಗೆ ಯಶಸ್ವಿನಿ ಯೋಜನೆ ಮರುಜಾರಿ ಮಾಡಲಾಗುವುದು. ಯಶಸ್ವಿನಿ ಯೋಜನೆ 300 ಕೋಟಿ ಅನುದಾನ ನೀಡಲಾಗಿದೆ.

 • 04 Mar 2022 01:58 PM (IST)

  Karnataka Budget 2022 Live: ಯುವಕರ ಸ್ವ-ಉದ್ಯೋಗ, ಆರ್ಥಿಕ ಚಟುವಟಿಕೆ ಪ್ರೋತ್ಸಾಹ

  ಯುವಕರ ಸ್ವ-ಉದ್ಯೋಗ, ಆರ್ಥಿಕ ಚಟುವಟಿಕೆ ಪ್ರೋತ್ಸಾಹಕ್ಕೆ ನಿರ್ಧಾರಿಸಲಾಗಿದ್ದು, ಪ್ರತೀ ಗ್ರಾ.ಪಂನಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸ್ವಸಹಾಯ ಗುಂಪು  ಸ್ಥಾಪನೆಗೆ ಕ್ರಮ  ಕೈಗೊಳ್ಳಲಾಗುವುದು.  ಜಿಲ್ಲಾ ಮಟ್ಟದಲ್ಲಿ ಕ್ರೀಡಾಂಗಣ ಉನ್ನತೀಕರಣಕ್ಕೆ 100 ಕೋಟಿ ರೂಪಾಯಿ, ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳ ಉತ್ತೇಜನಕ್ಕೆ ಕ್ರೀಡಾ ಅಂಕಣ ಸ್ಥಾಪನೆ, ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 504 ಕೋಟಿ ವೆಚ್ಚದಲ್ಲಿ ಸ್ಥಾಪನೆ, ಸಾಹಸ ಕ್ರೀಡೆಗೆ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿ ನವೀಕರಣ, ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ವಿವಿ ಗೇಮ್ಸ್‌ 2021 ಆಯೋಜನೆ ಮಾಡಲಾಗುವುದು.

 • 04 Mar 2022 01:56 PM (IST)

  Karnataka Budget 2022 Live: ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ

  ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ. ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ, ತಳಸಮುದಾಯದ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಸಾಂಸ್ಕೃತಿಕ ಶಿಬಿರ, ಪ್ರತೀ ವಿಭಾಗ ಮಟ್ಟದಲ್ಲಿ ಒಟ್ಟು 4 ಸಾಂಸ್ಕೃತಿಕ ಶಿಬಿರ ಆಯೋಜನೆ, ಕರ್ನಾಟಕದ ಹೆಸರಾಂತ ಸಾಹಿತಿಗಳ ಸಾಹಿತ್ಯ ಪ್ರಚಾರಕ್ಕೆ ಯೋಜನೆ,ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಚನ್ನವೀರ ಕಣವಿ, ಡಾ.ಚಂದ್ರಶೇಖರ ಪಾಟೀಲ್ ಅವರ ಸಾಹಿತ್ಯ ಪ್ರಚಾರಕ್ಕಾಗಿ ಸ್ಕೀಮ್, ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

   

 • 04 Mar 2022 01:49 PM (IST)

  Karnataka Budget 2022 Live: ಮೇಕೆದಾಟು ಯೋಜನೆಗೆ 1000 ಕೋಟಿ ಮೀಸಲು.

  ಮೇಕೆದಾಟು ಯೋಜನೆಗೆ 1000 ಕೋಟಿ ಮೀಸಲು. ಎತ್ತಿನ ಹೊಳೆ ಯೋಜನೆಗ 3000 ಕೋಟಿ, ಭದ್ರಮೇಲ್​ದಂಡೆ 3000 ಕೋಟಿ, ಕಳಸಾಬಂಡೂರಿ ನಾಲ ತೀರುವುದು ಯೋಜನೆ 1000 ಕೋಟಿ, ಕೃಷ್ಣ ಮೇಲ್ ದಂಡೆ 3 ನೇ ಹಂತ 5000 ಕೋಟಿ ರೂ ಮೀಸಲಿಡಲು ಬೊಮ್ಮಾಯಿ ಸರ್ಕಾರ ನಿರ್ಧರಿಸಿದೆ.

 • 04 Mar 2022 01:46 PM (IST)

  Karnataka Budget 2022 Live: ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 15,267 ರೂ ಅನುದಾನ

  ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಅನುದಾನ ನೀಡಲಾಗಿದ್ದು, 15,267 ಕೋಟಿ ವೆಚ್ಚದಲ್ಲಿ ಉಪನಗರ ರೈಲ್ವೆ ಯೋಜನೆ
  2026ರ ವೇಳೆಗೆ 148 ಕಿ.ಮೀ. ಮಾರ್ಗ ಪೂರ್ಣ ಭರವಸೆ ನೀಡಿದ್ದಾರೆ.  ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್  ನಿರ್ಮಾಣ. ಬೆಂಗಳೂರಿನ ನಾಲ್ಕು ಭಾಗಗಳಲ್ಲೂ 5೦೦ ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ,
  ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ವಲಯದಲ್ಲಿರುವ ಆರು ಲಕ್ಷಕ್ಕೂ ಹೆಚ್ಚು ಸ್ವತ್ತುಗಳು ಎ ವಹಿಗೆ ದಾಖಲಿಸಲು ಕ್ರಮ
  ಎನ್ ಜಿಇಎಫ್ ನ 105 ಎಕರೆಯಲ್ಲಿ ಸಿಂಗಾಪುರ್ ಮಾದರಿಯಲ್ಲಿ ಗ್ರೀನ್ ಎಕ್ಸ್ ಪೋ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

 • 04 Mar 2022 01:41 PM (IST)

  Karnataka Budget 2022 Live: 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ

  ಶಿಕ್ಷಣಕ್ಕೆ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದ್ದು, ಆಯ್ದ ಪ್ರೌಢಶಾಲೆಗಳನ್ನು ಪಿಯು ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ರಾಜ್ಯಾದ್ಯಂತ ಡಿಜಿಟಲ್​ ಗ್ರಂಥಾಲಯ ಸ್ಥಾಪನೆ, ಪ್ರತೀ ವರ್ಷ ಶಿಕ್ಷಕರಿಗೆ ಪುಲೆ ಪ್ರಶಸ್ತಿ ಘೋಷಣೆ,  15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ.

 • 04 Mar 2022 01:36 PM (IST)

  Karnataka Budget 2022 Live: ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ

  ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ ಮರವತ್ತೂರು ಗಳಿಗೆ ಪ್ಯಾಕೇಜ್ ಟ್ರಿಪ್.
  30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ . ಪುಣ್ಯ ಕ್ಷೇತ್ರಗಳಿಗೆ ಕೆಎಸ್ ಟಿಡಿಸಿ ವತಿಯಿಂದ ಪ್ರವಾಸಕ್ಕೆ ವ್ಯವಸ್ಥೆ ಮಾಡಲಾಗುವುದು. ಶ್ರೀ ಶೈಲದಲ್ಲಿ ೮೫ ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಿಸಲಾಗುವುದು,
  ಪರ್ವತಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಮತ್ತು ದತ್ತಪೀಠದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ ಮೀಸಲಾಗಿಡುವುದು. ನಂದಿ ಬೆಟ್ಟದಲ್ಲಿ ೯೩ ಕೋಟಿ ವೆಚ್ಚದಲ್ಲಿ ರೋಪ್ ವೇ, ಯಾಣದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕ್ರಮ ಜೋಗದಲ್ಲಿ ೧೧೬ ಕೋಟಿ ವೆಚ್ಚದಲ್ಲಿ ಹೋಟೆಲ್ ಮತ್ತು ರೋಪ್ ವೇ
  ಬೇಲೂರು, ಹಳೆಬೀಡು, ಸೋಮನಾಥಪುರ ಸೇರಿ ಹೊಯ್ಸಳರ‌ ಸ್ಮಾರಕ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೆ ಕ್ರಮ. ಹಂಪಿ-ಬಾದಾಮಿ, ಐಹೊಳೆ- ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತ, ಮೈಸೂರು-ಶ್ರೀರಂಗಪಟ್ಟಣ-ಹಾನ-ಬೇಲೂರು- -ಹಳೆಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದ್ದಾರೆ.

   

 • 04 Mar 2022 01:32 PM (IST)

  Karnataka Budget 2022 Live: ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ 1,880 ಕೋಟಿ ರೂ. ಮೀಸಲು

  ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ ₹1,880 ಕೋಟಿ ಮೀಸಲಿಡಲಾಗುವುದು.  250 ಕೋಟಿರೂ ವೆಚ್ಚದಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರು ನಿ್ರ್ಮಾಣ, ಉತ್ತರ ಕನ್ನಡ ಜಿಲ್ಲೆಯ ಮಾಜಾಳಿಯಲ್ಲಿ ಬಂದರು ನಿರ್ಮಾಣ, 350 ಕೋಟಿ ವೆಚ್ಚದಲ್ಲಿ ಮಂಗಳೂರು ಬಂದರು ವಿಸ್ತರಣೆ, ಕಾರವಾರದಲ್ಲಿ ಜಲಸಾರಿಗೆ, ಮೀನುಗಾರಿಕಾ ಸಂಸ್ಥೆ ಸ್ಥಾಪನೆ, ತದಡಿ-ಅಘನಾಶಿನಿ ಮಧ್ಯೆ ದೋಣಿ ಮಾರ್ಗ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

 • 04 Mar 2022 01:30 PM (IST)

  Karnataka Budget 2022 Live: ನೋಡಿ ಕಲಿ, ಮಾಡಿ ಕಲಿ ಕಲ್ಪನೆಯಡಿ ಕಿಟ್ ವಿತರಣೆ

  ನೋಡಿ ಕಲಿ, ಮಾಡಿ ಕಲಿ ಕಲ್ಪನೆಯಡಿ ಕಿಟ್ ವಿತರಣೆ ಮಾಡಲಾಗುವುದು, 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಕಿಟ್
  ಲ್ಯಾಬ್ ಇನ್ ಎ ಕಿಟ್ ವಿತರಣೆ ಮಾಡಲಾಗುವುದು, ರಾಜ್ಯದ ಹೆಣ್ಣು ಮಕ್ಕಳಿಗೆ  ಮಾಸಿಕ ದಿನಗಳಿಗೆ ನ್ಯಾಪ್ಕಿನ್​ ನೀಡಲಾಗುವುದು ಎಂದು ಘೋಷಿಸಿದ್ದಾರೆ.

 • 04 Mar 2022 01:26 PM (IST)

  Karnataka Budget 2022 Live: ಮೈಶುಗರ್ ಕಾರ್ಖಾನೆ ಪುನಶ್ಚೇತನಕ್ಕೆ ನಿರ್ಧಾರ

  ಮೈಶುಗರ್ ಕಾರ್ಖಾನೆ ಪುನಶ್ಚೇತನಕ್ಕೆ ನಿರ್ಧಾರ ಮಾಡಲಾಗಿದೆ. 50 ಕೋಟಿ ರೂ. ವೆಚ್ಚದಲ್ಲಿ ಯಂತ್ರಗಳ ದುರಸ್ತಿ, ಕಲಬುರಗಿ, ವಿಜಯಪುರದಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ, ಬಳ್ಳಾರಿಯಲ್ಲಿ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣ, ನವಲಗುಂದ, ರಾಣೆಬೆನ್ನೂರಿನಲ್ಲಿ ಜವಳಿ ಪಾರ್ಕ್ ನಿರ್ಮಿಸಲಾಗುವುದು,  ಇದರಿಂದ 5 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.

 • 04 Mar 2022 01:24 PM (IST)

  Karnataka Budget 2022 Live: ಬೆಂಗಳೂರಿನಲ್ಲಿ ನ.2ರಿಂದ 4ರವರೆಗೆ ಇನ್ವೆಸ್ಟ್ ಕರ್ನಾಟಕ ಆರಂಭ

  ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ ಮಾಡಲಾಗುವುದು, ಇದರಿಂದ 10 ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ.  ಹೂಡಿಕೆದಾರರನ್ನು ಆಕರ್ಷಿಸಲು ‘ಇನ್ವೆಸ್ಟ್ ಕರ್ನಾಟಕ’ ಕಾರ್ಯಕ್ರಮ ಆರಂಭಿಸಲಾಗುವುದು. ಬೆಂಗಳೂರಿನಲ್ಲಿ ನ.2ರಿಂದ 4ರವರೆಗೆ ‘ಇನ್ವೆಸ್ಟ್ ಕರ್ನಾಟಕ’ ಆರಂಭ ಮಾಡಲಾಗುವುದು.

 • 04 Mar 2022 01:22 PM (IST)

  Karnataka Budget 2022 Live: ಬೀದರ್‌ನಲ್ಲಿ 90 ಕೋಟಿ ವೆಚ್ಚದಲ್ಲಿ CIPET ಕೇಂದ್ರ ಸ್ಥಾಪನೆ, 

  ಬೀದರ್‌ನಲ್ಲಿ 90 ಕೋಟಿ ವೆಚ್ಚದಲ್ಲಿ CIPET ಕೇಂದ್ರ ಸ್ಥಾಪನೆ,  ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಸೆಂಟರ್ ಇನ್ಸ್‌ಟಿಟ್ಯೂಟ್ ಆಫ್ ಪೆಟ್ರೋ ಕೆಮಿಕಲ್ಸ್ ಸ್ಥಾಪನೆ ಮಾಡಲಾಗುವುದ ಎಂದು ಘೋಷಿಸಿದ್ದಾರೆ.

   

 • 04 Mar 2022 01:20 PM (IST)

  Karnataka Budget 2022 Live: ಯಾವುದೇ ತೆರಿಗೆ ಹೆಚ್ಚಳ ಇಲ್ಲ

  ಯಾವುದೇ ತೆರಿಗೆ ಹೆಚ್ಚಳ ಇಲ್ಲ,  ರಾಜಸ್ವ ಕೊರತೆ ಅಂದಾಜು 14,699 ಕೋಟಿ, ವಿತ್ತೀಯ ಕೊರತೆ ಅಂದಾಜು 61,564 ಕೋಟಿ ಇದೆ.
  ಸಾರಿಗೆ ಇಲಾಖೆಗೆ 8,007 ಕೋಟಿ ರಾಜಸ್ವ ಸಂಗ್ರಹಣೆ ಗುರಿ,  ಅಬಕಾರಿ ಇಲಾಖೆಗೆ 29,000 ಕೋಟಿ ರಾಜಸ್ವ ಸಂಗ್ರಹ ಗುರಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ ರೂ ರಾಜಸ್ವ ಗುರಿ, ವಾಣಿಜ್ಯ ತೆರಿಗೆ ಇಲಾಖೆಗೆ 77,010 ಕೋಟಿ ತೆರಿಗೆ ಸಂಗ್ರಹ ಗುರಿ, 287 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ ಕೃಷಿ ಜಮೀನು ಮತ್ತು ಇತರೆ ಸ್ವತ್ತು ಡ್ರೋಣ್ ಸರ್ವೇ, 406 ಕೋಟಿ ವೆಚ್ಚದಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಉನ್ನತೀಕರಣ, ಎಲ್ಲಾ ಪಾರಂಪರಿಕ ನೊಂದಾಯಿತ ಶಾಶ್ವತ ದಾಖಲೆಗಳ ಸ್ಕ್ಯಾನಿಂಗ್
  ಮೊದಲ ಹಂತದಲ್ಲಿ ಬಿಬಿಎಂಪಿ ಮತ್ತು ೧೦ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ಕ್ಯಾನಿಂಗ್ ಗೆ 15 ಕೋಟಿ ಮೀಸಲು.

 • 04 Mar 2022 01:18 PM (IST)

  Karnataka Budget 2022 Live: ಗದಗ-ಯಲವಿಗಿ ನೂತನ ರೈಲು ಮಾರ್ಗ ನಿರ್ಮಾಣ

  ಗದಗ-ಯಲವಿಗಿ ನೂತನ ರೈಲು ಮಾರ್ಗ ನಿರ್ಮಿಸಲಾಗುವುದು, 640 ಕೋಟಿ ರೂ. ವೆಚ್ಚದಲ್ಲಿ ನೂತನ ರೈಲು ಮಾರ್ಗ
  ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗ, 927 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲು ಮಾರ್ಗ, ರಾಜ್ಯದಲ್ಲಿ 20, ನೂತನ ರೈಲ್ವೆ ಮೇಲ್ಸೇತುವೆ ನಿರ್ಮಾಣ, 186 ಕೋಟಿ ವೆಚ್ಚದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ, ರಾಯಚೂರಿನಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ, ದಾವಣಗೆರೆ, ಕೊಪ್ಪಳದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ವರದಿ, ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ, 30 ಕೋಟಿ ವೆಚ್ಚದಲ್ಲಿ ಹೆಲಿಪೋರ್ಟ್‌ಗಳ ಅಭಿವೃದ್ಧಿ,ಮಡಿಕೇರಿ, ಚಿಕ್ಕಮಗಳೂರು, ಹಂಪಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದಿದ್ದಾರೆ.

 • 04 Mar 2022 01:12 PM (IST)

  Karnataka Budget 2022 Live: ಸರ್ವರಿಗೂ ಸೂರು ಯೋಜನೆ ಅಡಿ 5 ಲಕ್ಷ ಹೊಸ ಮನೆ ನಿರ್ಮಾಣ

  ಸರ್ವರಿಗೂ ಸೂರು ಯೋಜನೆ ಅಡಿ 5 ಲಕ್ಷ ಹೊಸ ಮನೆಗಳು.  6,612 ಕೋಟಿ ರೂಪಾಯಿ ವೆಚ್ಚದಲ್ಲಿ 5 ಲಕ್ಷ ಹೊಸ ಮನೆಗಳು, ಮನೆಗಳ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ, ಪ.ಪಂಗಡಕ್ಕೆ ಆದ್ಯತೆ, ಪ.ಜಾತಿ, ಪ.ಪಂಗಡದ ಅಲೆಮಾರಿ, ಅರೆ ಅಲೆಮಾರಿ ಜನಾಂಗ ಹಾಗೂ  ಮೀನುಗಾರರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೂ ಆದ್ಯತೆ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

 • 04 Mar 2022 01:10 PM (IST)

  Karnataka Budget 2022 Live: ಪೌರಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ

  ಪೌರಕಾರ್ಮಿಕರಿಗೆ 2 ಸಾವಿರ ರೂ. ಮಾಸಿಕ ಸಂಕಷ್ಟ ಭತ್ಯೆ ನೀಡಲಾಗುವುದು, ಬೆಳಕು ಕಾರ್ಯಕ್ರಮದಡಿ 98 ಸಾವಿರ ಮನೆಗೆ ವಿದ್ಯುತ್, ವಿದ್ಯುತ್ ಸರಬರಾಜು ನಿಗಮಗಳ ಪುನರ್ ರಚನೆ, ಆಸ್ತಿ ಹಣ ಗಳಿಕೆ, ಆರ್ಥಿಕ ಸ್ವಾವಲಂಬನೆ ಹಾಗೂ ಸಂಪನ್ಮೂಲ ಕ್ರೋಡೀಕರಣಕ್ಕೆ ತಜ್ಞರ ಸಮಿತಿ ರಜನೆ, ನಿರಂತರವಾಗಿ ವುದ್ಯುತ್ ಸರಬರಾಜಿಗೆ ಉಪಕೇಂದ್ರ,, ಕೆಪಿಟಿಸಿಎಲ್ ವತಿಯಿಂದ 64 ಹೊಸ ಉಪಕೇಂದ್ರ, 10 ಸಾವಿರ ಸೌರಶಕ್ತಿ ನೀರಾವರಿ ಪಂಪ್‌ಸೆಟ್ ಹಾಗೂ  227 ಕೋಟಿ ರೂಪಾಯಿ ವೆಚ್ಚದಲ್ಲಿ ಸೌರಶಕ್ತಿ ಪಂಪ್‌ಸೆಟ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

 • 04 Mar 2022 01:07 PM (IST)

  Karnataka Budget 2022 Live: ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ

  ಆಶಾ ಕಾರ್ಯಕರ್ತೆಯರು ಸೇರಿ ಹಲವರ ಗೌರವ ಧನ ಹೆಚ್ಚಳ ಮಾಡಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ ಮಾಡಲಾಗಿದೆ.  ಅಂಗನವಾಡಿ ಕಾರ್ಯಕರ್ತರಿಗೂ ಗೌರವ ಧನ ಹೆಚ್ಚಳಕ್ಕೆ ಸ್ಕೀಮ್ ರೂಪಿಸಲಾಗಿದ್ದು, ಸೇವಾನುಭವ ಆಧಾರದಲ್ಲಿ ಸಾವಿರದಿಂದ 1500 ರೂಗಳ ಹೆಚ್ಚಳ ಹಾಗೂ ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

 • 04 Mar 2022 01:05 PM (IST)

  Karnataka Budget 2022 Live: 2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

  2 ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಸಂಪರ್ಕ ಒದಗಿಸಲಾಗುವುದು, ನಲ್ಲಿಗಳ ಮೂಲಕ ನೀರು ಸಂಪರ್ಕ ಒದಗಿಸಲಾಗುವುದು.  ಕುಡಿಯುವ ನೀರು ಸಂಪರ್ಕಕ್ಕೆ 7 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ₹1,600 ಕೋಟಿ ನೀಡಲಾಗುತ್ತಿದೆ. ಮಳೆಗಾಲದಲ್ಲಿ ಹಾನಿಯಾದ ರಸ್ತೆ ಅಭಿವೃದ್ಧಿಗೆ ₹300 ಕೋಟಿ, ಅಮೃತ್ ಗ್ರಾಮ ಪಂಚಾಯಿತಿ ಯೋಜನೆಗೆ ₹188 ಕೋಟಿ, 750 ಗ್ರಾ.ಪಂ.ಗಳಿಗೆ ತಲಾ 25 ಲಕ್ಷ ರೂಪಾಯಿ, ಪ್ರಸಕ್ತ ವರ್ಷದಲ್ಲಿ ರಾಜ್ಯದ 1000 ಕೆರೆಗಳ ಅಭಿವೃದ್ಧಿ, ತಲಾ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ, ಗ್ರಾಮ ಒನ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

 • 04 Mar 2022 01:02 PM (IST)

  Karnataka Budget 2022 Live: ಪೊಲೀಸ್ ಗೃಹ ಯೋಜನೆಗೆ 250 ಕೋಟಿ ರೂ. ಅನುದಾನ, ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ

  ಪೊಲೀಸ್ ಗೃಹ ಯೋಜನೆಗೆ 250 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ.  2ನೇ ಹಂತದಲ್ಲಿ 250 ಕೋಟಿ ರೂಪಾಯಿ ಮಿಸಲಿಡಲಾಗಿದ್ದು, ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ನೀಡಲಾಗಿದೆ.  ರಾಜ್ಯದಲ್ಲಿ ನೂತನ KSRP ಮಹಿಳಾ ಕಂಪನಿ ಆರಂಭಿಸಲು ಯೋಜನೆ ರೂಪಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ ಮಾಡಲಾಗಿದ್ದು,  1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.  ಇನ್ನು ದಾವಣಗೆರೆಯಲ್ಲಿ SDRF ಆರಂಭಿಸಲಾಗುವುದು, ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ, ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ಕಟ್ಟಡಕ್ಕೆ ಅನುಮತಿ ನೀಡಲಾಗಿದೆ.

 • 04 Mar 2022 12:59 PM (IST)

  Karnataka Budget 2022 Live: ಕೃಷಿ ಜಮೀನು ಡ್ರೋನ್ ಸರ್ವೆಗೆ 287 ಕೋಟಿ ರೂ. ಅನುದಾನ

  ಕೃಷಿ ಜಮೀನು ಡ್ರೋನ್ ಸರ್ವೆಗೆ ₹287 ಕೋಟಿ ಅನುದಾನ ಘೋಷಣೆ, ನೋಂದಣಿ ಕಚೇರಿಗಳ ಉನ್ನತೀಕರಣಕ್ಕೆ ₹406 ಕೋಟಿ,
  10 ಮಹಾನಗರ ಪಾಲಿಕೆ ವ್ಯಾಪ್ತಿಯ ದಾಖಲೆ ಸ್ಕ್ಯಾನಿಂಗ್​ಗಾಗಿ 15 ಕೋಟಿ ರೂಪಾಯಿ ಮೀಸಲು. ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗಲಗಳ ಸ್ವಾಯತ್ತತೆ ಹಾಗೂ ದೇಗುಲಗಳ ಅಭಿವೃದ್ಧಿಗೆ 168 ಕೋಟಿ ರೂಪಾಯಿ ಘೋಷಣೆ ಮಾಡಿದ ಸಿಎಂ.

 • 04 Mar 2022 12:58 PM (IST)

  Karnataka Budget 2022 Live: ಶಿಕ್ಷಣ, ಆರೋಗ್ಯ,ಕೌಶಲ್ಯಾಭಿವೃದ್ಧಿ ಸೇರಿ ವಿವಿಧ ಕಲ್ಯಾಣ ಇಲಾಖೆಗಳಿಗೆ 6,329 ಕೋಟಿ ಹೆಚ್ಚುವರಿ ಅನುದಾನ

  ಕಳೆದ ಸಾಲಿಗಿಂತ ಈ ಸಾಲಿನಲ್ಲಿ ಶಿಕ್ಷಣ, ಆರೋಗ್ಯ,ಕೌಶಲ್ಯಾಭಿವೃದ್ಧಿ ಮತ್ತು ವಿವಿಧ ಕಲ್ಯಾಣ ಇಲಾಖೆಗಳಿಗೆ 6,329 ಕೋಟಿ ಹೆಚ್ಚುವರಿ ಅನುದಾನ. ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ವಲಯಕ್ಕೆ 55,657 ಕೋಟಿ ಅನುದಾನ ಬೆಂಗಳೂರು ಸಮಗ್ರ ಅಭಿವೃದ್ಧಿ ಗೆ,8,409 ಕೋಟಿ ಅನುದಾನ ನೀಡಲಾಗಿದೆ.  ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ವಲಯಕ್ಕೆ 3,012 ಕೋಟಿ, ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವಾ ವಲಯಕ್ಕೆ 56,710 ಕೋಟಿ ಸೇರಿದಂತೆ  ಒಟ್ಟು 5 ವಲಯವಾರು ವಿಂಗಡಣೆಯ ಬಜೆಟ್ ಘೋಷಣೆ ಮಾಡಿದ್ದಾರೆ.

 • 04 Mar 2022 12:55 PM (IST)

  Karnataka Budget 2022 Live: ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು

  ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು, ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ, ಕಟ್ಟಡ ಕಾರ್ಮಿಕರಿಗಾಗಿ ರಿಯಾಯಿತಿ ಬಸ್ ಪಾಸ್ ಯೋಜನೆ, ಹುಬ್ಬಳ್ಳಿ & ದಾವಣಗೆರೆ ESI ಆಸ್ಪತ್ರೆಗಳ ಬೆಡ್ 100ಕ್ಕೆ ಹೆಚ್ಚಳ ಯೆಲ್ಲೊ ಬೋರ್ಡ್‌ ಡ್ರೈವರ್ ಮಕ್ಕಳಿಗಾಗಿ ವಿದ್ಯಾನಿಧಿ ಸ್ಕೀಮ್ ಹಾಗೂ  ಡ್ರೈವರ್ಸ್‌ ಮಕ್ಕಳ ಆರೋಗ್ಯ ಸೌಲಭ್ಯಕ್ಕೂ ವಿಶೇಷ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

 • 04 Mar 2022 12:53 PM (IST)

  Karnataka Budget 2022 Live: ಬೀದರ್, ಕಲಬುರಗಿ ಕೋಟೆಗಳ ಪುನರುಜ್ಜೀವನಕ್ಕೆ ಒತ್ತು

  ಬೀದರ್, ಕಲಬುರಗಿ ಕೋಟೆಗಳು ಪುನರುಜ್ಜೀವನ ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿ, ಶ್ರೀಶೈಲದಲ್ಲಿ ₹85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ , ಮೊದಲ ಹಂತದಲ್ಲಿ 45 ಕೋಟಿ ರೂಪಾಯಿ,  ಕಾಶಿಯಾತ್ರೆ ಕೈಗೊಳ್ಳುವವರಿಗೆ ₹5 ಸಾವಿರ ಸಹಾಯಧನ ಸುಮಾರು 30 ಸಾವಿರ ಯಾತ್ರಾರ್ಥಿಗಳಿಗೆ ಸಹಾಯಧನ,ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರುಗೆ ಪ್ಯಾಕೇಜ್ ಟ್ರಿಪ್ ಸೇವೆ ಆರಂಭ

 • 04 Mar 2022 12:50 PM (IST)

  Karnataka Budget 2022 Live: ಆಹಾರ, ವಸತಿ, ಸೇರಿ ಹಲವು ಕ್ಷೇತ್ರಗಳಿಗೆ ಅನುದಾನ ಘೋಷಣೆ

  ಆಹಾರ ಇಲಾಖೆ - 2,288 ಕೋಟಿ ರೂಪಾಯಿ ಅನುದಾನ,  ವಸತಿ ಇಲಾಖೆ - 3,594 ಕೋಟಿ ರೂಪಾಯಿ ಅನುದಾನ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ - 4,713 ಕೋಟಿ ಅನುದಾನ ಕೃಷಿ ಮತ್ತು ತೋಟಗಾರಿಕೆ ಇಲಾಖೆ - 8,457 ಕೋಟಿ ರೂ ಅನುದಾನ, ,ಸಮಾಜ ಕಲ್ಯಾಣ ಇಲಾಖೆ - 9,389 ಕೋಟಿ ರೂ ಅನುದಾನ,  ಲೋಕೋಪಯೋಗಿ ಇಲಾಖೆ - 10,447 ಕೋಟಿ ರೂ ಅನುದಾನ, ಒಳಾಡಳಿತ ಮತ್ತು ಸಾರಿಗೆ ಇಲಾಖೆ - 11,222 ಕೋಟಿ ರೂ ಅನುದಾನ, ಜಲ ಸಂಪನ್ಮೂಲ ಇಲಾಖೆ - 20,601 ಕೋಟಿ ರೂ ಅನುದಾನ ,  ಶಿಕ್ಷಣ ಇಲಾಖೆ - 31,980 ಕೋಟಿ ರೂಪಾಯಿ ಅನುದಾನ
  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ - 17,325 ಕೋಟಿ ರೂಪಾಯಿ, ನಗರಾಭಿವೃದ್ಧಿ ಇಲಾಖೆ - 16,076 ಕೋಟಿ ರೂಪಾಯಿ ಅನುದಾನ. ಕಂದಾಯ ಇಲಾಖೆ - 16,388 ಕೋಟಿ ರೂಪಾಯಿ ಅನುದಾನ,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ - 13,982 ಕೋಟಿ ರೂಪಾಯಿ ಅನುದಾನ, ಇಂಧನ ಇಲಾಖೆ - 12,655 ಕೋಟಿ ರೂಪಾಯಿ ಅನುದಾನ ಘೋಷಣೆ .

 • 04 Mar 2022 12:45 PM (IST)

  Karnataka Budget 2022 Live: ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ

  ಈ ಬಾರಿ ಸಿಎಂ 2,53,165 ಕೋಟಿ ರೂ. ಬಜೆಟ್​ ಮಂಡಿಸುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ, ಕೃಷಿಗೆ 33,700 ಕೋಟಿ ಆದ್ಯತೆ. ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ 3,102 ಕೋಟಿ ಅನುದಾನ ಘೋಷಿಸಿದ ಸಿಎಂ ಬೊಮ್ಮಾಯಿ.

 • 04 Mar 2022 12:41 PM (IST)

  Karnataka Budget 2022 Live: ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7ರಷ್ಟು ಹೆಚ್ಚಳ

  ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಆಗುತ್ತಿದೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳ, ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ - ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮ. ಹಿಂದುಳಿದ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಅಭಿವೃದ್ಧಿಗೆ ಸಂಘಟಿತ ಕಾರ್ಯಕ್ರಮ, ಕೃಷಿ, ಕೈಗಾರಿಕೆ ಹಾಗೂ ಸೇವಾ ವಲಯ - ಪಾಲುದಾರಿಕೆಯೊಂದಿಗೆ ಅಭಿವೃದ್ಧಿ,  ನವಭಾರತಕ್ಕಾಗಿ ನವ ಕರ್ನಾಟಕ - ಹೊಸ ಚಿಂತನೆ, ಹೊಸ ಚೈತನ್ಯದ ಜತ ಹೊಸ ಮುನ್ನೋಟಕ್ಕೆ ಒತ್ತು.

 • 04 Mar 2022 12:37 PM (IST)

  Karnataka Budget 2022 Live: ಬಜೆಟ್​ ಮಂಡನೆ ಆರಂಭಿಸಿದ ಸಿಎಂ

  2022-23ನೇ ಸಾಲಿನ ಬಜೆಟ್ ಮಂಡನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ‌  ಆರಂಭಿಸಿದ್ದಾರೆ. ವಿಧಾನಸೌಧದಲ್ಲಿ ಅಧಿವೇಶನ ಆರಂಭವಾಗಿದ್ದು ಮೇಜು ತಟ್ಟಿ ಆಡಳಿತ ಪಕ್ಷದ ಶಾಸಕರು ಸ್ವಾಗತಿಸಿದ್ದಾರೆ.

 • 04 Mar 2022 12:31 PM (IST)

  Karnataka Budget 2022 Live: ಸಂಪುಟ ಸಭೆಯ ಅನುಮೋದನೆ ಪಡೆದು ಬಜೆಟ್​ ಮಂಡನೆಗೆ ತೆರಳಿದ ಸಿಎಂ

  ವಿಧಾನಸೌಧದಲ್ಲಿ ಚೊಚ್ಚಲ ಬಜೆಟ್​ ಮಂಡಿಸಲಿರುವ ಸಿಎಂಗೆ ಸಚಿವರು ಹಾಗೂ ಸಹೋದ್ಯೋಗಿಗಳು ಶುಭಾಶಯ ಕೋರಿದ್ದಾರೆ. ಇದೇ ವೇಳೆ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಸಿಎಂ ಅನುಮೋದನೆ  ಪಡೆದಿದ್ದು, ಬಜೆಟ್ ಮಂಡನೆಗೆ ತೆರಳಿದ್ದಾರೆ.

 • 04 Mar 2022 12:16 PM (IST)

  Karnataka Budget 2022 Live: ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭ

  ಬಜೆಟ್​ ಮಂಡನೆಗೂ ಮೊದಲು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ. ಅದೇ ರೀತಿ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಿಎಂಗೆ ಸಂಪುಟ ಸಹೋದ್ಯೋಗಿಗಳು ಶುಭಾಶಯ ಕೋರಿದ್ದಾರೆ.

 • 04 Mar 2022 12:12 PM (IST)

  Karnataka Budget 2022 Live: ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ

  ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದ್ದಾರೆ. ಇಂದು ಬಹು ನಿರೀಕ್ಷಿತ ಕರ್ನಾಟಕ ರಾಜ್ಯ ಮಂಡನೆ ಮಾಡಲಿದ್ದಾರೆ.  ಬಜೆಟ್ ಫೈಲ್ ಜೊತೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ

 • 04 Mar 2022 12:06 PM (IST)

  Karnataka Budget 2022 Live: ಬಜೆಟ್​ ಮಂಡನೆಗೆ ಕ್ಷಣಗಣನೆ ಆರಂಭ

  ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಬಹುನಿರೀಕ್ಷಿತ ರಾಜ್ಯ ಬಜೆಟ್​ ಇಂದು ಮಂಡನೆಯಾಗಲಿದೆ. ಮಧ್ಯಾಹ್ನ 12.30ಕ್ಕೆ  ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ.

 • 04 Mar 2022 11:52 AM (IST)

  Karnataka Budget 2022 Live: ಬಜೆಟ್​ ಮಂಡನೆ ವೀಕ್ಷಣೆಗೆ ವಿಧಾನಸೌಧಕ್ಕೆ ಸಿಎಂ ಕುಟುಂಬ ಸದಸ್ಯರ ಆಗಮನ

  ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಕುಟುಂ ಸದಸ್ಯರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಸಿಎಂ ಬಜೆಟ್ ಮಂಡನೆಯ ವೀಕ್ಷಣೆಗೆ ವಿಧಾನಸೌಧಕ್ಕೆ ಬೊಮ್ಮಾಯಿ ಕುಟುಂಬ ‌ಸದಸ್ಯರು ಆಗಮಿಸಿದ್ದಾರೆ.  ಬೊಮ್ಮಯಿ ಪತ್ನಿ, ಮಗ, ಮಗಳು ಹಾಗೂ ಸಹ ಕುಟುಂಬದ ಸದಸ್ಯರು ವಿಧಾನಸೌಧಕ್ಕೆ ಬಂದಿದ್ದಾರೆ.

 • 04 Mar 2022 11:42 AM (IST)

  Karnataka Budget 2022 Live Updates: ಜೆಟ್​ನಲ್ಲಿ ಬಜೆಟ್​ ಪ್ರಚಾರ ಮಾಡಿದ ಸಿಎಂ

  ಗಗನದಲ್ಲಿ ಸಿಎಂ ಬೊಮ್ಮಯಿ ಬಜೆಟ್ ಪ್ರಚಾರ ಮಾಡಿದ್ದಾರೆ. ಮೊದಲ ಬಾರಿಗೆ ಜೆಟ್ ಮೂಲಕ ಬಜೆಟ್ ಪ್ರಚಾರ ಮಾಡಿದ್ದಾರೆ. ವಿಧಾನ ಸೌಧ ಸುತ್ತ ಜೆಟ್​ ಅನ್ನು ರೌಂಡ್ಸ್  ಹಾಕಿಸಿದ್ದಾರೆ. ಕೆಲವೇ ಕ್ಷಣದಲ್ಲಿ ಸಿಎಂ ಬೊಮ್ಮಾಯಿ ಬಜೆಟ್​ ಮಂಡನೆ ಮಾಡಲಿದ್ದಾರೆ.

 • 04 Mar 2022 11:30 AM (IST)

  Karnataka Budget 2022 Live Updates: ಬಡವರಿಗೆ ಯಾವ ಸೌಲಭ್ಯ ಸಿಗುತ್ತೋ ನೋಡಬೇಕು ಎಂದ ಮಾಜಿ ಸಿಎಂ H.D.ಕುಮಾರಸ್ವಾಮಿ

  ಆರ್ಥಿಕ ಸಚಿವರಾಗಿ ಮೊದಲ ಬಜೆಟ್ ಅನ್ನು ಬೊಮ್ಮಯಿರವರು ಮಂಡನೆ ಮಾಡುತ್ತಿದ್ದಾರೆ. ಸುದೀರ್ಘ ಆಡಳಿತ ಅನುಭವ ಹೊಂದಿದ್ದಾರೆ. ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ, ನಿರೀಕ್ಷೆಯನ್ನ ಈಡೇರಿಸಲು ಹಿಂದೆ ಇರುವವರು ಪರ್ಮಿಷನ್ ಕೊಡ್ಬೇಕು ಅಲ್ವಾ? ತುಳಿತಕ್ಕೆ ಒಳಗಾದ ಬಡಕುಟುಂಬಗಳಿಗೆ ಯಾವ ಕಾರ್ಯಕ್ರಮ ಕೊಡ್ತಾರೆ ಅಂತ ಕಾಯುತ್ತಾ ಇದ್ದೇನೆ. ಅವರ ಬುಟ್ಟಿಯಲ್ಲಿ ಯಾವ ಯಾವ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ ನೋಡೋಣ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

 • 04 Mar 2022 11:24 AM (IST)

  Karnataka Budget 2022 Live Updates: ಅಧಿಕಾರಿಗಳಿಂದ ಸಿಎಂಗೆ ಬಜೆಟ್​ ಪ್ರತಿ ಹಸ್ತಾಂತರ

  ವಿಧಾನಸೌಧಕ್ಕೆ ಬಜೆಟ್ ಪ್ರತಿಗಳನ್ನು ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳು ತಂದಿದ್ದಾರೆ. ಚೊಚ್ಚಲ ಬಜೆಟ್‌ ಮಂಡಿಸಲಿರುವ ಸಿಎಂ ಬೊಮ್ಮಾಯಿ ಅವರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ಜೆಟ್ ಪ್ರತಿ ಹಸ್ತಾಂತರ ಮಾಡಿದ್ದಾರೆ.  ರೇಸ್ ಕೋರ್ಸ್ ನಿವಾಸದಲ್ಲಿ 2022-23ನೇ ಸಾಲಿನ ಬಜೆಟ್ ಪುಸ್ತಕ ಪ್ರತಿ ಹಸ್ತಾಂತರ ಮಾಡಿದ್ದಾರೆ. ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್ ಎನ್ ಪ್ರಸಾದ್, ಕಾರ್ಯದರ್ಶಿಗಳಾದ ಎಕ್ ರೂಪ್ ಕೌರ್, ಪಿ ಸಿ ಜಾಫರ್ ಅವರು ನೀಡಿದ್ದಾರೆ. ಈ ವೇಳೆ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಬೈರತಿ ಬಸವರಾಜ ಉಪಸ್ಥಿತರಿದ್ದರು.

Published On - Mar 04,2022 11:16 AM

Follow us on

Related Stories

Most Read Stories

Click on your DTH Provider to Add TV9 Kannada