AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2021 ಮಾರ್ಚ್​ 4ರಿಂದ ಬಜೆಟ್​ ಅಧಿವೇಶನ ಆರಂಭ; ಮಾರ್ಚ್​​ 8ರಂದು ಕರ್ನಾಟಕ ಬಜೆಟ್​ ಮಂಡನೆ

ಕರ್ನಾಟಕ ಬಜೆಟ್​ 2021: ಮಾರ್ಚ್​​ 8ರಂದು ರಾಜ್ಯ ಬಜೆಟ್​ ಮಂಡನೆ ಆಗಲಿದೆ. ಮಾರ್ಚ್​ 4ರಿಂದ ಬಜೆಟ್​ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆ​ ದಿನಾಂಕ ನಿಗದಿ ಮಾಡಲಾಯಿತು ಎಂದು ಸಂಪುಟ ಸಭೆ ಬಳಿಕ ಸಚಿವ ಬಸವರಾಜ​ ಬೊಮ್ಮಾಯಿ ಹೇಳಿದ್ದಾರೆ.

Karnataka Budget 2021 ಮಾರ್ಚ್​ 4ರಿಂದ ಬಜೆಟ್​ ಅಧಿವೇಶನ ಆರಂಭ; ಮಾರ್ಚ್​​ 8ರಂದು ಕರ್ನಾಟಕ ಬಜೆಟ್​ ಮಂಡನೆ
ಬಸವರಾಜ ಬೊಮ್ಮಾಯಿ
KUSHAL V
|

Updated on:Feb 18, 2021 | 10:54 PM

Share

ಬೆಂಗಳೂರು: ಮಾರ್ಚ್​​ 8ರಂದು ರಾಜ್ಯ ಬಜೆಟ್​ ಮಂಡನೆ ಆಗಲಿದೆ. ಮಾರ್ಚ್​ 4ರಿಂದ ಬಜೆಟ್​ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆ​ ದಿನಾಂಕ ನಿಗದಿ ಮಾಡಲಾಯಿತು ಎಂದು ಸಂಪುಟ ಸಭೆ ಬಳಿಕ ಸಚಿವ ಬಸವರಾಜ​ ಬೊಮ್ಮಾಯಿ ಹೇಳಿದ್ದಾರೆ. Karnataka Budget 2021

ಚಾಮರಾಜನಗರದಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಅನುದಾನ ಇನ್ನು, ಇದೇ ವೇಳೆ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಮಾತನಾಡಿದ ಸಚಿವ ಚಾಮರಾಜನಗರದಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಅನುದಾನ ನೀಡಲಾಗಿದೆ. ಕೃಷಿ ಕಾಲೇಜು ಆರಂಭಿಸಲು 35.92 ಕೋಟಿ ಅನುದಾನ ನೀಡಲಾಗಿದೆ ಎಂದು ಸಂಪುಟ ಸಭೆ ಬಳಿಕ ಬಸವರಾಜ ಬೊಮ್ಮಾಯಿ ಹೇಳಿದರು.

ಕೈಗಾರಿಕಾ ಅಭಿವೃದ್ಧಿಗೆ ಭೂಮಿ ನೀಡುವವರಿಗೆ ಪರಿಹಾರ ಕೈಗಾರಿಕಾ ಅಭಿವೃದ್ಧಿಗೆ ಭೂಮಿ ನೀಡುವವರಿಗೆ ಪರಿಹಾರ ನೀಡಲಾಗುವುದು. ಪರಿಹಾರವಾಗಿ ಶೇ.45ರಷ್ಟು ಭೂಮಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿಂದೆ ಶೇ.40ರಷ್ಟು ಭೂಮಿ ಪರಿಹಾರವಾಗಿ ನೀಡುತ್ತಿದ್ದರು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

‘ಮೀಸಲಾತಿ ಕುರಿತು.. ಮುಂದಿನ ಸಂಪುಟ ಸಭೆಯಲ್ಲಿ ಸಿಎಂ ಚರ್ಚೆ ಮಾಡುತ್ತಾರೆ’ ಮೀಸಲಾತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಈಗಿನ ಸ್ಥಿತಿಗತಿ, ಬೇರೆ ಸಮುದಾಯದವರು ಸಲ್ಲಿಸಿದ ಬೇಡಿಕೆ ಮತ್ತು ಮನವಿ ಕುರಿತು ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಈ ಕುರಿತು ಎಲ್ಲಾ ಸಚಿವರ ಸಲಹೆಗಳನ್ನೂ ಸಿಎಂ ಯಡಿಯೂರಪ್ಪ ಆಲಿಸಿದ್ದಾರೆ. ಈ ಸಂಬಂಧ ಕಾನೂನು ತಜ್ಞರು, ಆಯೋಗದ ವರದಿಗಳು ಹಾಗೂ ಕೋರ್ಟ್​​ ತೀರ್ಪು ಇತ್ಯಾದಿ ಬಗ್ಗೆ ತಜ್ಞರ ಜೊತೆಗೆ ಚರ್ಚಿಸಿ ಮುಂದಿನ ಸಂಪುಟ ಸಭೆಯಲ್ಲಿ ಸಿಎಂ ಚರ್ಚೆ ಮಾಡುತ್ತಾರೆ ಎಂದು ಸಂಪುಟ ಸಭೆ ಬಳಿಕ ಬಸವರಾಜ ಬೊಮ್ಮಾಯಿ ಹೇಳಿದರು.

ಕುರುಬ ಸಮುದಾಯಕ್ಕೆ ST ಮೀಸಲಾತಿಗೆ ಹೋರಾಟದ ಬಗ್ಗೆ ಸಚಿವ ಶ್ರೀರಾಮುಲು ಪರಿಷತ್​ನಲ್ಲಿ ಉತ್ತರಿಸಿದ್ದಾರೆ. ಕುರುಬ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಆಗ್ತಿದೆ. 5-6 ಜಿಲ್ಲೆಗಳಲ್ಲಿ ಕುಲಶಾಸ್ತ್ರೀಯ ಅಧ್ಯಯನ ನಡೆಯುತ್ತಿದೆ. ವರದಿ ಬಂದ ಬಳಿಕ ಕ್ರಮ ಎಂದು ರಾಮುಲು ಹೇಳಿದ್ದಾರೆ ಎಂದು ಸಭೆ ಬಳಿಕ ಬಸವರಾಜ ಬೊಮ್ಮಾಯಿ ಹೇಳಿದರು.

Published On - 8:04 pm, Thu, 18 February 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!